ETV Bharat / city

ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ.. 'ಸಿದ್ದಕಲೆ'ಯ ನಿಷ್ಣಾತರಿಗೆ ಸುಳ್ಳೇ ದೇವರು : HDK ಕಿಡಿ

author img

By

Published : Dec 22, 2021, 12:06 PM IST

ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ 'ಕೃತಘ್ನ'ತೆಗೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ..

HD Kumaraswamy
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. 'ಸಿದ್ದಕಲೆ'ಯ ನಿಷ್ಣಾತರಿಗೆ(ನಿಪುಣ) ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ 'ಗೊಬೆಲಪ್ಪ'ನ 'ಬೂಸಿ ಭಜನೆ' ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ 'ಕೃತಘ್ನ'ತೆಗೆ ಇದೇ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪರೋಕ್ಷವಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ. 1/4

    — H D Kumaraswamy (@hd_kumaraswamy) December 22, 2021 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್ ಮಾಡಿರುವ ಹೆಚ್​​ಡಿಕೆ, ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. 'ಬ್ರೂಟಸ್ ಮನಸ್ಥಿತಿ'. ಸಂದರ್ಭಕ್ಕೆ ತಕ್ಕಂತೆ 'ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ'. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರ್ಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ 'ಆಪರೇಷನ್ ಹಸ್ತ' ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.

  • ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ. 3/4

    — H D Kumaraswamy (@hd_kumaraswamy) December 22, 2021 " class="align-text-top noRightClick twitterSection" data=" ">

ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ 'ಬ್ರೋಕರಪ್ಪ'ನ ಕುತಂತ್ರಕ್ಕೆ ಹೆದರುವ ಪ್ರಶ್ನೆಯೇ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ 'ಅಭಿನವ ಅರಸು' ಎಂದು ಪುಂಗಿ ಬಿಡುವ 'ಸುಳ್ಳು ಸಿದ್ದಪ್ಪ'ನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ.

  • ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ. 4/4

    — H D Kumaraswamy (@hd_kumaraswamy) December 22, 2021 " class="align-text-top noRightClick twitterSection" data=" ">

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ 'ಆಪರೇಷನ್ ಹಸ್ತವೆಂಬ ಅಸಹ್ಯ' ನಡೆಯಲಿ. ಅದಕ್ಕೆ ಎಷ್ಟೇ 'ಕೋನ'ಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ ಎಂದು ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಪಕ್ಷದ ನಿರ್ಧಾರಕ್ಕೂ ನಿಮಗೂ ಸಂಬಂಧ ಇಲ್ಲವಾ ಮಿಸ್ಟರ್ 'ಸಿದ್ದ'ಸೂತ್ರಧಾರ?: ಹೆಚ್​ಡಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.