ETV Bharat / city

Warning: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದುವರೆಯಲಿದೆ ಭಾರಿ ಮಳೆ

author img

By

Published : Sep 14, 2021, 7:48 AM IST

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

heavy rain
ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ನಾಳೆಯವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ 5.5 ಎಕರೆ ಫಸಲು ನಾಶ: ನೊಂದ ರೈತನಿಂದ ಬೆಂಕಿಗೆ ಬೀಳಲು ಯತ್ನ..!

ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಒಂದು ವಾರದಿಂದ ಹೆಚ್ಚು ಮಳೆಯಾಗುತ್ತಿದೆ. ಹಾಗೂ ಉತ್ತರ ಕರ್ನಾಟಕದ ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.