ETV Bharat / city

ನಾಳೆಯಿಂದ ನ.13 ರವರೆಗೆ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

author img

By

Published : Nov 10, 2021, 9:17 AM IST

ನಾಳೆಯಿಂದ ನವೆಂಬರ್ 13 ರವೆರೆಗೆ 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

heavy rain
13 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ನಾಳೆಯಿಂದ ನವೆಂಬರ್ 13 ರವೆರೆಗೆ 13 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವೆಂಬರ್ 11 ರಿಂದ ಮೂರು ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಚದುರಿದ ಮಳೆಯಾಗಲಿದ್ದು, ನವೆಂಬರ್ 12 ಮತ್ತು 13ಕ್ಕೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮೋಡ ಕವಿದ ವಾತಾವರಣ:

ಕರಾವಳಿ ಭಾಗದಲ್ಲಿ ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ ದಿನಗಳಲ್ಲಿ ಕೂಡ ಇದೇ ಹವಾಮಾನ ಮುಂದುವರಿಯಲಿದೆ ಎಂದು ಹೇಳಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ:

ನಿನ್ನೆ (ಮಂಗಳವಾರ) ಸಹ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ. ಸೋಮವಾರದಿಂದ ಮಂಗಳವಾದವರೆಗೆ ಜಿಲ್ಲೆಯಲ್ಲಿ 15.1 ಮಿ.ಮೀ. ನಷ್ಟು ಮಳೆಯಾಗಿದೆ ಎಂದು ಹೇಳಿದೆ. ಬಂಟ್ವಾಳ, ಮಂಗಳೂರು, ಮೂಡಬಿದಿರೆ, ಕಡಬ, ಸುಳ್ಯ ಹಾಗೂ ಪುತ್ತೂರು ಭಾಗದಲ್ಲಿ ಮಳೆಯಾಗಿರುವ ಬಗ್ಗೆ ವರದಿಯಾಗಿವೆ ಎಂದು ಮಾಹಿತಿ ನೀಡಿದೆ.

ಕೊಡಗು ಜಿಲ್ಲೆಯಲ್ಲಿ ವರ್ಷಧಾರೆ:

ಕೊಡಗು ಜಿಲ್ಲೆಯ ಸೋಮವಾರಪೇಟೆ ಮತ್ತು ನಾಪೋಕ್ಲು ಭಾಗದಲ್ಲಿ 4 ಸೆಂ.ಮೀ.ನಷ್ಟು ಮಳೆಯಾಗಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಕ್ಲೋರಿನ್ ಅನಿಲ ಸೋರಿಕೆ: ಅವಘಡ ತಪ್ಪಿಸಲು ಬಂದ ಅಗ್ನಿಶಾಮಕ ದಳ‌ದ 6 ಸಿಬ್ಬಂದಿ ಅಸ್ವಸ್ಥ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.