ರಾಜ್ಯದಲ್ಲಿ ನಾಳೆಯಿಂದ 3 ದಿನ ಭಾರಿ ಮಳೆ ಸಾಧ್ಯತೆ.. ಯೆಲ್ಲೋ ಅಲರ್ಟ್ ಘೋಷಣೆ

author img

By

Published : Sep 30, 2021, 9:43 AM IST

heavy rain in karnataka

ರಾಜ್ಯದಲ್ಲಿ ಅಕ್ಟೋಬರ್ 1ರಿಂದ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾದ ಗುಲಾಬ್ ಚಂಡ ಮಾರುತ ಹಾಗೂ ಅದರಿಂದ ಮರುಹುಟ್ಟು ಪಡೆದ ಶಾನ್ ಚಂಡ ಮಾರುತದ ಪ್ರಭಾವ ಅರಬ್ಬಿ ಸಮುದ್ರದ ಮೇಲೂ ಆಗುತ್ತಿದ್ದು, ರಾಜ್ಯದಲ್ಲಿ ಅಕ್ಟೋಬರ್ 1ರಿಂದ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ನಾಳೆಯಿಂದ ಅಕ್ಟೋಬರ್ 3ರವರೆಗೆ ಮಳೆಯಾಗಲಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ನಾಳೆ ಮತ್ತು ನಾಡಿದ್ದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ನಾಳೆ ಯೆಲ್ಲೋ ಅಲರ್ಟ್ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಇರಲಿದೆ.

ಬೆಂಗಳೂರಿನಲ್ಲಿ 2 ದಿನ ಮೋಡ ಕವಿದ ವಾತಾವರಣ:

ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.