ರಾಜ್ಯಾದ್ಯಂತ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತ: ಮುಂದಿನ 5 ದಿನ ವರ್ಷಧಾರೆಯ ಮುನ್ಸೂಚನೆ

author img

By

Published : Oct 11, 2021, 9:28 AM IST

ಮಳೆ

ರಾಜ್ಯಾದ್ಯಂತ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದು ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ವರುಣಾರ್ಭಟ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು, ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ನಿರಂತರವಾಗಿ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಸಾಕಷ್ಟು ಕಡೆಗಳಲ್ಲಿ ಜಮೀನು, ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಾವಿರಾರು ಎಕರೆ ಬೆಳೆಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ.

ಹಲವು ಜಿಲ್ಲೆಗಳಲ್ಲಿ ಸತತ ಮಳೆ:
ಮೈಸೂರು, ಚಾಮರಾಜನಗರ, ಮಂಡ್ಯ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ರಾಯಚೂರು, ಹುಬ್ಬಳ್ಳಿ ಧಾರವಾಡ ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸತತ ಮಳೆಯಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.

ಕೃಷಿ ಭೂಮಿ ಸಂಪೂರ್ಣ ಜಲಾವೃತ:
ಪಶ್ಚಿಮಘಟ್ಟಗಳಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ನದಿ ಪಾತ್ರಗಳಲ್ಲಿರುವ ಮತ್ತು ತಗ್ಗು ಪ್ರದೇಶಗಳಲ್ಲಿರುವ ಕೃಷಿ ಭೂಮಿ ಸಂಪೂರ್ಣ ಜಲಾವೃತವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜಧಾನಿಯಲ್ಲಿ ಭಾರಿ ಮಳೆ:

ಬೆಂಗಳೂರು ನಗರದಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು, ವಾಹನ ಸಂಚಾರಕ್ಕೆ ಸಾಕಷ್ಟು ಅಡಚಣೆಯುಂಟಾಗಿದೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಭಾರಿ ಮಳೆಗೆ ಮತ್ತೊಂದು ಮನೆ ಕುಸಿತ; ಕೂದಲೆಳೆ ಅಂತರದಲ್ಲಿ 8 ಜನ ಬಚಾವ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.