ETV Bharat / city

ರಾಜ್ಯದಲ್ಲಿ ಮುಂಗಾರು ಅಬ್ಬರ ಮುಗಿಯಿತು..ಇಂದಿನಿಂದ ಹಿಂಗಾರು ಮಳೆ ಶುರು

author img

By

Published : Oct 21, 2021, 3:56 PM IST

Updated : Oct 21, 2021, 5:33 PM IST

ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದರೂ ಇಂದಿನಿಂದಿ ಹಿಂಗಾರು ಮಳೆಯ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

rain
rain

ಬೆಂಗಳೂರು: ರಾಜ್ಯದಲ್ಲಿ ಅಕ್ಟೋಬರ್ 25ರವರೆಗೂ ಭಾರಿ ಮಳೆಯಾಗಲಿದ್ದು, ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಕಡಿಮೆಯಾಗಿದ್ದರೂ ಇಂದಿನಿಂದ ಹಿಂಗಾರು ಮಳೆಯ ಅಬ್ಬರ ಶುರುವಾಗಲಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೊಡಗು, ರಾಮನಗರ, ಕೋಲಾರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ​ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದೆ.

ನಗರದಲ್ಲಿ ಯೆಲ್ಲೋ ಅಲರ್ಟ್:
ಬೆಂಗಳೂರಲ್ಲಿ ಮಳೆ ತುಸು ಕಡಿಮೆಯಾಗಿದ್ದರೂ, ಮುಂದಿನ ದಿನಗಳಲ್ಲಿ ಅಬ್ಬರ ಮತ್ತೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಅ.21, 22 ಮತ್ತು 23ರಂದು ರಾಜಧಾನಿಗೆ ಹವಾಮಾನ ಇಲಾಖೆಯು ಯೆಲ್ಲೊ ಅಲರ್ಟ್‌ ನೀಡಿದೆ.

ಉತ್ತರ ಒಳನಾಡಿನಲ್ಲಿ ಒಣ ಹವೆ:
ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿಯಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ತಿಳಿಸಿದೆ.

(ಉತ್ತರಾಖಂಡ ಮೇಘ ಸ್ಫೋಟ: ಕಲಬುರಗಿಯ 9 ಮಂದಿ ತವರಿನತ್ತ ಪಯಣ)

Last Updated :Oct 21, 2021, 5:33 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.