ETV Bharat / city

ಎಸ್ಎಸ್ಎಲ್​ಸಿ ಫಲಿತಾಂಶ: ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭ

author img

By

Published : May 19, 2022, 8:02 AM IST

ಎಸ್ಎಸ್ಎಲ್​ಸಿ ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳು ಯಾವುದೇ ರೀತಿಯಲ್ಲೂ ಆತಂಕಕ್ಕೆ ಒಳಗಾಗದಿರಲು ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಸರ್ಕಾರ ಸಹಾಯವಾಣಿ ಆರಂಭಿಸಿದೆ.

Helpline for sslc students mental health in Bengaluru, SSLC result today, Karnataka education bord announce SSLC result, SSLC result 2022, SSLC result 2022 news, ಬೆಂಗಳೂರಿನಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ, ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ, ಕರ್ನಾಟಕ ಶಿಕ್ಷಣ ಮಂಡಳಿಯಿಂದ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ, ಎಸ್​ಎಸ್​ಎಲ್​ಸಿ ಫಲಿತಾಂಶ 2022, ಎಸ್​ಎಸ್ಎಲ್​ಸಿ ಫಲಿತಾಂಶ 2022 ಸುದ್ದಿ,
ವಿದ್ಯಾರ್ಥಿಗಳ ಮಾನಸಿಕ ಆರೋಗ್ಯಕ್ಕಾಗಿ ಸಹಾಯವಾಣಿ ಆರಂಭ

ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳು ಆತ್ಮವಿಶ್ವಾಸ ಕಳೆದುಕೊಳ್ಳಬಾರದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ನಿಮ್ಹಾನ್ಸ್ ಸಹಾಯದೊಂದಿಗೆ ವಿದ್ಯಾರ್ಥಿಗಳಿಗೆ ಮಾನಸಿಕ ಆರೋಗ್ಯ ಸಹಾಯವಾಣಿ ತೆರೆದಿದೆ. ಫಲಿತಾಂಶದ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ ಈ ಮೂಲಕ ಟೆಲಿ ಕೌನ್ಸಿಲಿಂಗ್ ಒದಗಿಸಲಾಗುತ್ತದೆ.

  • ಪರೀಕ್ಷೆ ಬರೆದಿರುವ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೂ ಶುಭ ಹಾರೈಕೆಗಳು. ತಂದೆ, ತಾಯಿ, ಗುರು ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ.

    ಸೋಲು ಗೆಲುವು ಎರಡೂ ಜೀವನದ ಭಾಗ. ಧೃತಿಗೆಡದೆ ಆತ್ಮವಿಶ್ವಾಸದಿಂದ ಮುನ್ನುಗ್ಗಿ. ಪರೀಕ್ಷೆ ಫಲಿತಾಂಶವೇ ಅಂತ್ಯವಲ್ಲ, ನಿರ್ಣಾಯಕವಲ್ಲ.@BSBommai @DHFWKA @NIMHANS_BLR

    — Dr Sudhakar K (@mla_sudhakar) May 18, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಮೇ 19ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟ: ಸಚಿವ ಬಿ.ಸಿ.ನಾಗೇಶ್

ಮಾನಸಿಕ ಒತ್ತಡದಲ್ಲಿರುವ ವಿದ್ಯಾರ್ಥಿಗಳು 080-46110007 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.