ETV Bharat / city

ಯುಎಪಿಎ ಪ್ರಕರಣಗಳನ್ನು ಎನ್ಐಎ ವಿಶೇಷ ಕೋರ್ಟ್​ಗೆ ವರ್ಗಾಯಿಸಲು ಹೈಕೋರ್ಟ್ ನಿರ್ದೇಶನ

author img

By

Published : Mar 25, 2021, 6:22 AM IST

High Court direction to transfer UAPA cases to NIA Special Court
ಯುಎಪಿಎ ಪ್ರಕರಣಗಳನ್ನು ಎನ್ಐಎ ಸ್ಪೆಷಲ್ ಕೋರ್ಟ್​ಗೆ ವರ್ಗಾಯಿಸಲು ಹೈಕೋರ್ಟ್ ನಿರ್ದೇಶನ

ನಾಲ್ಕು ವಿವಿಧ ಸಿಟಿ ಸಿವಿಲ್ ಹಾಗೂ ಸೆಷನ್ಸ್ ಕೋರ್ಟ್‌ಗಳಲ್ಲಿ ಯುಎಪಿಎ ಕಾಯ್ದೆಯಡಿ ಬಾಕಿ ಇರುವ 56 ಪ್ರಕರಣಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್-50) ವರ್ಗಾಯಿಸುವಂತೆ ಹೈಕೋರ್ಟ್ ತನ್ನ ರಿಜಿಸ್ಟ್ರಾರ್ (ನ್ಯಾಯಾಂಗ)ಗೆ ನಿರ್ದೇಶಿಸಿದೆ.

ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿ ದಾಖಲಾಗಿ ಬಾಕಿ ಉಳಿದಿರುವ 56 ಪ್ರಕರಣಗಳನ್ನು ನಗರದ ಎನ್‌ಐಐ ವಿಶೇಷ (ಸಿಸಿಎಚ್-50) ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಹೈಕೋರ್ಟ್ ತನ್ನ ರಿಜಿಸ್ಟ್ರಾರ್ (ನ್ಯಾಯಾಂಗ)ಗೆ ನಿರ್ದೇಶಿಸಿದೆ.

ಈ ಕುರಿತು ಬೆಂಗಳೂರು ನಿವಾಸಿ ಎ.ವಸಿಮುದ್ದೀನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಾದ - ಪ್ರತಿವಾದ ಆಲಿಸಿದ ಪೀಠ, ನಾಲ್ಕು ವಿವಿಧ ಸಿಟಿ ಸಿವಿಲ್ ಹಾಗೂ ಸೆಷನ್ಸ್ ಕೋರ್ಟ್‌ಗಳಲ್ಲಿ ಯುಎಪಿಎ ಕಾಯ್ದೆಯಡಿ ಬಾಕಿ ಇರುವ 56 ಪ್ರಕರಣಗಳನ್ನು ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ (ಸಿಸಿಎಚ್-50) ವರ್ಗಾಯಿಸಬೇಕು. ಪ್ರಕರಣಗಳನ್ನು ವರ್ಗಾಯಿಸುವ ಮೊದಲು ಎಲ್ಲ ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕು ಎಂದು ಹೈಕೋರ್ಟ್‌ನ ರಿಜಿಸ್ಟ್ರಾರ್ (ನ್ಯಾಯಾಂಗ) ಅವರಿಗೆ ನಿರ್ದೇಶಿಸಿತು. ಜೊತೆಗೆ ಈ ಪ್ರಕರಣಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಬೇಕು ಎಂದು ಸಂಬಂಧಿಸಿದ ನ್ಯಾಯಾಂಗ ಅಧಿಕಾರಿಗಳಿಗೆ ಸೂಚಿಸಿ, ಅರ್ಜಿ ಇತ್ಯರ್ಥಪಡಿಸಿತು.

ಯುಎಪಿಎ ಅಡಿ ದಾಖಲಾದ ಪ್ರಕರಣಗಳ ವಿಚಾರಣೆ ವಿಳಂಬವಾಗುತ್ತಿದ್ದು, ಆರೋಪಿಗಳು ಅನೇಕ ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇದರಿಂದ ಸಂವಿಧಾನದ 21ನೇ ವಿಧಿ ಉಲ್ಲಂಘನೆಯಾಗುತ್ತಿದೆ. ಆದ್ದರಿಂದ ಯುಎಪಿಎ ಅಡಿಯಲ್ಲಿ ದಾಖಲಾಗುವ ಪ್ರಕರಣಗಳ ತ್ವರಿತ ವಿಚಾರಣೆ ನಡೆಸಿ 6 ತಿಂಗಳಲ್ಲಿ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿದ್ದರು.

ಓದಿ: ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.