ETV Bharat / city

ಹಿಜಾಬ್​ ವಿಚಾರದಲ್ಲಿ ಆದೇಶ ಉಲ್ಲಂಘಿಸಿದರೆ ಕ್ರಮ: ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

author img

By

Published : Mar 28, 2022, 12:38 PM IST

ಎಸ್ಎಸ್ಎಲ್​ಸಿ ಪರೀಕ್ಷೆ ಸಮಯದಲ್ಲಿ ಎಲ್ಲೂ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ವಿದ್ಯಾರ್ಥಿಗಳು ಶಾಂತಿಯಿಂದ, ನಿರ್ವಿಘ್ನರಾಗಿ ಪರೀಕ್ಷೆ ಬರೆಯಬೇಕೆಂದು ಸಚಿವರು ಹೇಳಿದರು.

home minister araga jnanendra
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಹಿಜಾಬ್ ವಿಚಾರದಲ್ಲಿ ನ್ಯಾಯಾಲಯದ ಆದೇಶವನ್ನು ಎಲ್ಲರೂ ಪಾಲಿಸಬೇಕು. ನ್ಯಾಯಾಲಯದ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸುತ್ತೇವೆ‌ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.

ಹಿಜಾಬ್​ ವಿಚಾರದಲ್ಲಿ ಆದೇಶ ಉಲ್ಲಂಘಿಸಿದರೆ ಕ್ರಮ: ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ

ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 8.70 ಲಕ್ಷ ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ ಪರೀಕ್ಷೆ ಬರೆಯುತ್ತಿದ್ದಾರೆ. 45 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಎಲ್ಲ ಕೇಂದ್ರಗಳಿಗೂ ಭದ್ರತೆ ವ್ಯವಸ್ಥೆ ಕಲ್ಪಿಸಿದ್ದೇವೆ. ಎಲ್ಲೂ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದೇವೆ. ವಿದ್ಯಾರ್ಥಿಗಳು ಶಾಂತಿಯಿಂದ, ನಿರ್ವಿಘ್ನರಾಗಿ ಪರೀಕ್ಷೆ ಬರೆಯಬೇಕು ಎಂದರು.

ಹಿಂದೂಗಳಿಗೆ ಅಲ್ಪಸಂಖ್ಯಾತ ಸ್ಥಾನಮಾನದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದಷ್ಷೇ ಹೇಳಿದರು.

ಇದನ್ನೂ ಓದಿ: ಜೀವಂತ ಇರುವ ಎಸ್ಎಸ್ಎಲ್​ಸಿ ವಿದ್ಯಾರ್ಥಿ ಫೋಟೋಗೆ ತಿಥಿ ಕಾರ್ಯ: ಕಿಡಿಗೇಡಿಗಳ ಕೃತ್ಯದಿಂದ ಕುಟುಂಬಕ್ಕೆ ಆತಂಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.