ETV Bharat / city

ಭಾರತೀಯ ವಿಜ್ಞಾನ ಸಂಸ್ಥೆ ವಿಶ್ವಾಸಾರ್ಹತೆ ಕಳೆದುಕೊಂಡಿದೆ: ಹೈಕೋರ್ಟ್ ಬೇಸರ

author img

By

Published : Dec 3, 2021, 8:05 PM IST

ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ವಿಶ್ವಾಸಾರ್ಹತೆ ಕಳೆದುಕೊಂಡಿದೆ ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರಿದ್ದ ವಿಭಾಗೀಯ ಪೀಠ ಐಐಎಸ್‌ಸಿ ವಿರುದ್ಧ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

high court
ಹೈಕೋರ್ಟ್ ಬೇಸರ

ಬೆಂಗಳೂರು: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ ವಿಶ್ವಾಸಾರ್ಹತೆ ಕಳೆದುಕೊಂಡಿದೆ ಎಂದು ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ಅವರಿದ್ದ ವಿಭಾಗೀಯ ಪೀಠ ಐಐಎಸ್‌ಸಿ ವಿರುದ್ಧ ಮೌಖಿಕವಾಗಿ ಅಸಮಾಧಾನ ವ್ಯಕ್ತಪಡಿಸಿದೆ.

ಹುಬ್ಬಳ್ಳಿ-ಅಂಕೋಲಾ ನೂತನ ಬ್ರಾಡ್‌ಗೇಜ್‌ ರೈಲು ಮಾರ್ಗ ನಿರ್ಮಿಸಲು ರಾಜ್ಯ ವನ್ಯಜೀವಿ ಮಂಡಳಿ ಸಭೆ ವಿವೇಚನಾರಹಿತವಾಗಿ ಒಪ್ಪಿಗೆ ನೀಡಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಿಚಾರಣೆ ವೇಳೆ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಧ್ಯಾನ್‌ ಚಿನ್ನಪ್ಪ ಪೀಠಕ್ಕೆ ಮಾಹಿತಿ ನೀಡಿ, ಹುಬ್ಬಳ್ಳಿ–ಅಂಕೋಲಾ ರೈಲು ಯೋಜನೆಯ ಸಾಧಕ - ಬಾಧಕ ಕುರಿತು ಐಐಎಸ್‌ಸಿ ಸಮೀಕ್ಷಾ ವರದಿ ಸಲ್ಲಿಸಿದೆ. ರಾಜ್ಯ ವನ್ಯಜೀವಿ ಮಂಡಳಿ ಸಭೆಯಲ್ಲಿ ಐಐಎಸ್‌ಸಿ ವರದಿಯನ್ನು ಪರಿಗಣಿಸಲಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಐಐಎಸ್‌ಸಿ ಬಗ್ಗೆ ನಮಗೆ ಯಾವುದೇ ವಿಶ್ವಾಸ ಉಳಿದಿಲ್ಲ. ನಮ್ಮ ದೃಷ್ಟಿಯಲ್ಲಿ ಅವರು ವಿಶ್ವಾಸಾರ್ಹತೆ ಕಳೆದುಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿತು.

ಇದನ್ನೂ ಓದಿ: ಕಂಗನಾ ಕಾರಿಗೆ ಮುತ್ತಿಗೆ ಹಾಕಿದರಂತೆ ಪಂಜಾಬ್​ ರೈತರು : ನಟಿಯಿಂದ ಕ್ಷಮಾಪಣೆಗೆ ಒತ್ತಾಯಿಸಿದರಂತೆ

ನಿನ್ನೆ ನಡೆದ ವಿಚಾರಣೆಯಲ್ಲಿ ಮಂಗಳೂರಿನ ಪಚ್ಚನಾಡಿ ಘನತ್ಯಾಜ್ಯ ಘಟಕದಿಂದ ಹೊರಬರುವ ಕಲ್ಮಷ ಮರವೂರು ಜಲಾಶಯ ಸೇರುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದ ನೀರಿನ ಗುಣಮಟ್ಟ ಪರಿಶೀಲಿಸಿ ವರದಿ ನೀಡುವಂತೆ ಐಐಎಸ್‌ಸಿಗೆ ಸೂಚಿಸಿತ್ತು. ಮರವೂರ ಜಲಾಶಯದ ನೀರಿನ ಮಾದರಿ 20 ಲಕ್ಷ ರೂಪಾಯಿ ವೆಚ್ಚವಾಗುತ್ತದೆ ಎಂದು ಐಐಎಸ್‌ಸಿ ತಿಳಿಸಿದ್ದಕ್ಕೆ, ಐಐಎಸ್‌ಸಿಗೆ ನೀರಿನ ಗುಣಮಟ್ಟ ಪರೀಕ್ಷಿಸಲು ನೀಡುವ ಹಣವನ್ನು ಬಳಸಿ ಜಲಾಶಯದಲ್ಲಿ ಶೇಖರಣೆಯಾದ ತ್ಯಾಜ್ಯವನ್ನೇ ವಿಲೇವಾರಿ ಮಾಡಬಹುದಿತ್ತಲ್ಲ ಎಂದು ಪ್ರಶ್ನಿಸಿದ್ದಲ್ಲದೇ ಐಐಎಸ್‌ಸಿ ಕಾರ್ಯಕ್ಕೆ ಬೇಸರ ವ್ಯಕ್ತಪಡಿಸಿತ್ತು.

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.