ETV Bharat / city

ಮೇ 19ರಂದು SSLC ಪರೀಕ್ಷಾ ಫಲಿತಾಂಶ ಪ್ರಕಟ: ಸಚಿವ ಬಿ.ಸಿ.ನಾಗೇಶ್

author img

By

Published : May 13, 2022, 11:23 AM IST

Updated : May 13, 2022, 12:32 PM IST

ಎಸ್​ಎಸ್​​ಎಲ್​ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಈಗಾಗಲೇ ಮುಗಿದಿದ್ದು, ಫಲಿತಾಂಶವನ್ನು ಮೇ 19ರಂದು ಪ್ರಕಟಿಸುವುದಾಗಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

Karnataka SSLC Exam
Karnataka SSLC Exam

ಬೆಂಗಳೂರು: ಎಸ್​ಎಸ್​​ಎಲ್​ಸಿ ಪರೀಕ್ಷೆ ಫಲಿತಾಂಶ ಇದೇ ತಿಂಗಳ 19ರಂದು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆಸಿತ್ತು. ಈ ಬಾರಿ ಪರೀಕ್ಷೆ ಬರೆಯಲು ಒಟ್ಟು 15,387 ಶಾಲೆಗಳಿಂದ 8,73,846 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಅದರಲ್ಲಿ ಗಂಡು ಮಕ್ಕಳು 4,52,732 ಹಾಗೂ 4,21,110 ಹೆಣ್ಣು ಮಕ್ಕಳು, 4 ತೃತೀಯ ಲಿಂಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಿದ್ದರು. ಸುಮಾರು 5,307 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಮುಖ್ಯ ಪರೀಕ್ಷೆಗೆ ಹಾಜರಾಗಿದ್ದರು. ರಾಜ್ಯಾದ್ಯಂತ 3,444 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

  • ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.

    Karnataka SSLC Exam Results will be announced on May 19th.@CMofKarnataka#SSLCresults

    — B.C Nagesh (@BCNagesh_bjp) May 13, 2022 " class="align-text-top noRightClick twitterSection" data=" ">

(ಓದಿ: ಪರೀಕ್ಷೆ ಬರೆಯಲು ಹೋಗುತ್ತಿದ್ದಾಗ ಅಪಘಾತ : ಆಂಬ್ಯುಲೆನ್ಸ್​ನಲ್ಲಿ ಕರೆತಂದು ಪರೀಕ್ಷೆಗೆ ಕೂರಿಸಿದ ಆಡಳಿತ‌ ಮಂಡಳಿ)

Last Updated : May 13, 2022, 12:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.