ETV Bharat / city

Rain Alert: ನಾಳೆಯವರೆಗೂ ರಾಜ್ಯದ ದ.ಒಳನಾಡು, ಮಲೆನಾಡು ಭಾಗಗಳಲ್ಲಿ ಜಡಿ ಮಳೆ

author img

By

Published : Nov 22, 2021, 4:59 PM IST

Rain report Karnataka,ನಾಳೆಯವರೆಗೂ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಭಾರಿ ಮಳೆ
ನಾಳೆಯವರೆಗೂ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಭಾರಿ ಮಳೆ

ರಾಜ್ಯಾದ್ಯಂತ ನ.23ರ ಬೆಳಿಗ್ಗೆ 8:30ರ ತನಕ ವ್ಯಾಪಕವಾಗಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ. ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಗುಡುಗಿನ ಜೊತೆಗೆ ಹಗುರ ಮಳೆಯಾಗಲಿದೆ.

ಬೆಂಗಳೂರು: ರಾಜ್ಯಾದ್ಯಂತ ನ.23ರ ಬೆಳಿಗ್ಗೆ 8:30ರ ತನಕ ವ್ಯಾಪಕವಾಗಿ ಹಗುರದಿಂದ ಸಾಮಾನ್ಯ ಮಳೆಯಾಗಲಿದ್ದು (Rains in Karnataka), ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಕೆಲವು ಕಡೆ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (Karnataka State Natural Disaster Monitoring Centre) ತಿಳಿಸಿದೆ.

ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಗುಡುಗಿನ ಜೊತೆಗೆ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ. ಇನ್ನು ಕರಾವಳಿ, ಉತ್ತರ ಕರ್ನಾಟಕದ ಒಳನಾಡು ಪ್ರದೇಶದಲ್ಲಿ ವ್ಯಾಪಕವಾಗಿ ಚದುರಿದಂತೆ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕೆಲವು ಪ್ರದೇಶಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹೇಳಿದೆ.

ದಕ್ಷಿಣ ಕರ್ನಾಟಕದ ಒಳನಾಡಿನ ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ. ಇದೇ ರೀತಿಯಲ್ಲಿ ಇನ್ನಿತರ ಪ್ರದೇಶದಲ್ಲಿ ವ್ಯಾಪಕವಾಗಿ ಅತಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ.

ಉತ್ತರ ಕರ್ನಾಟಕದ ವಿಜಯಪುರ, ವಿಜಯನಗರ, ಧಾರವಾಡ, ಹಾವೇರಿ, ಕೊಪ್ಪಳ, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿ ಈ ಭಾಗದ ಇನ್ನಿತರ ಪ್ರದೇಶದಲ್ಲಿ ವ್ಯಾಪಕವಾಗಿ ಅತಿ ಹಗುರದಿಂದ ಸಾಮಾನ್ಯ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಮಲೆನಾಡು ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ವ್ಯಾಪಕವಾಗಿ ವರುಣನ ಅಬ್ಬರವಿರಲಿದೆ ಎಂದು ಹೇಳಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಚದುರಿದಂತೆ ಅತಿಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಮಳೆ ನೀರಿನ ರಭಸಕ್ಕೆ ಹರಿಹರದ ದೇವರಬೆಳಕೆರೆ ಪಿಕಪ್ ಡ್ಯಾಂ ತಡೆಗೋಡೆ ಬಿರುಕು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.