ETV Bharat / city

ರಾಜ್ಯಕ್ಕೆ ಏಮ್ಸ್​ ಮಂಜೂರು ಖಚಿತ: ಸಚಿವ ಸುಧಾಕರ್​ ಮನವಿಗೆ ಕೇಂದ್ರ ಗ್ರೀನ್​ ಸಿಗ್ನಲ್

author img

By

Published : May 19, 2022, 7:57 AM IST

ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದ ಬಲವರ್ಧನೆಗಾಗಿ ಏಮ್ಸ್ ಸಂಸ್ಥೆ ಆರಂಭಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಡಿದ ಮನವಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.

Karnataka to get AIIMS, central positive response to health minister sudhakars request, Union Health Minister Mansukh Mandaviya news, All India Institute Of Medical Sciences, Karnataka Health Minister Sudhakar news, ಏಮ್ಸ್​ ಪಡೆದ ಕರ್ನಾಟಕ, ಆರೋಗ್ಯ ಸಚಿವ ಸುಧಾಕರ್ ಮನವಿಗೆ ಕೇಂದ್ರ ಸಕಾರಾತ್ಮಕ ಪ್ರತಿಕ್ರಿಯೆ, ಕೇಂದ್ರ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ ಸುದ್ದಿ, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್, ಕರ್ನಾಟಕ ಆರೋಗ್ಯ ಸಚಿವ ಸುಧಾಕರ್ ಸುದ್ದಿ,
ಸಚಿವ ಸುಧಾಕರ್​ ಮನವಿಗೆ ಕೇಂದ್ರ ಗ್ರೀನ್​ ಸಿಗ್ನಲ್

ಬೆಂಗಳೂರು: ರಾಜ್ಯದ ವೈದ್ಯಕೀಯ ಶಿಕ್ಷಣದಲ್ಲಿ ಗಮನಾರ್ಹ ಸುಧಾರಣೆ ತರುವ ಉದ್ದೇಶದಿಂದ ಏಮ್ಸ್ ಸಂಸ್ಥೆ ಆರಂಭಿಸಬೇಕೆಂದು ಸಚಿವ ಡಾ.ಕೆ.ಸುಧಾಕರ್ ಅವರು ಕೇಂದ್ರ ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಿದ್ದು ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಈ ಕುರಿತು ಸಚಿವರು ಟ್ವೀಟ್‌ ಮಾಡಿ ಮಾಹಿತಿ ನೀಡಿದ್ದಾರೆ.

  • ಇಂದು ಕೇಂದ್ರ ಆರೋಗ್ಯ ಸಚಿವರಾದ ಶ್ರೀ @mansukhmandviya ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ನಂತರ ರಾಜ್ಯ ಆರೋಗ್ಯ ಇಲಾಖೆಯಲ್ಲಿ ಮತ್ತೊಂದು ಮೈಲಿಗಲ್ಲು ಸ್ಥಾಪನೆಯಾಗಿದೆ. ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡಿದ್ದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.

    1/3 pic.twitter.com/kC4KCg2FBg

    — Dr Sudhakar K (@mla_sudhakar) May 18, 2022 " class="align-text-top noRightClick twitterSection" data=" ">

ನಿನ್ನೆ ಕೇಂದ್ರ ಆರೋಗ್ಯ ಸಚಿವ ಮಾನ್​ಸುಖ್​ ಮಾಂಡವೀಯರನ್ನು ದೇಹಲಿಯಲ್ಲಿ ಭೇಟಿ ಮಾಡಿದ ಸಚಿವ ಸುಧಾಕರ್​ ಚರ್ಚೆ ನಡೆಸಿದ್ದಾರೆ. ರಾಜ್ಯದಲ್ಲಿ ಈಗಾಗಲೇ ವೈದ್ಯಕೀಯ ಶಿಕ್ಷಣ ಕ್ಷೇತ್ರ ಸಾಕಷ್ಟು ಬೆಳೆದಿದೆ. ಪ್ರತಿಭಾವಂತ ವಿದ್ಯಾರ್ಥಿಗಳು ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಶಿಕ್ಷಣ ಪಡೆದು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವೈದ್ಯರಾಗುವ ಕನಸು ಹೊತ್ತ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕಲ್ಪಿಸಲು ಏಮ್ಸ್ ಸಂಸ್ಥೆ ಸ್ಥಾಪಿಸುವುದು ಸೂಕ್ತ ಎಂದು ಡಾ.ಕೆ.ಸುಧಾಕರ್, ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಇದನ್ನೂ ಓದಿ: ರಾಯಚೂರಲ್ಲಿ ಏಮ್ಸ್​ ಸ್ಥಾಪನೆಗೆ ಒತ್ತಾಯಿಸಿ ಮನವಿ

ಈ ಭೇಟಿ, ಚರ್ಚೆಯ ಬಳಿಕ ಟ್ವೀಟ್ ಮಾಡಿರುವ ಸಚಿವ ಸುಧಾಕರ್, ರಾಜ್ಯಕ್ಕೆ ಏಮ್ಸ್ ಮಂಜೂರು ಮಾಡುವಂತೆ ಮಾಡಿದ್ದ ಮನವಿಗೆ ಕೇಂದ್ರದಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಆರೋಗ್ಯ ಸಚಿವ ಮಾನ್‌ಸುಖ್ ಮಾಂಡವೀಯ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಸಂಸ್ಥೆ ರಾಜ್ಯದಲ್ಲಿ ಸ್ಥಾಪನೆಯಾದರೆ ಆರೋಗ್ಯ ಕ್ಷೇತ್ರದಲ್ಲಿ ಕರ್ನಾಟಕ ಮತ್ತಷ್ಟು ಮುಂಚೂಣಿಗೆ ಬರಲು ಹಾಗೂ ರಾಜ್ಯದ ಜನರಿಗೆ ವಿಶ್ವದರ್ಜೆಯ ಆರೋಗ್ಯ ಸೇವೆ ದೊರೆಯಲು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.