ETV Bharat / city

ಸಿಲಿಕಾನ್​ ಸಿಟಿಯಲ್ಲಿ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯ ಇಳಿಕೆ

author img

By

Published : Nov 12, 2020, 6:47 PM IST

karnataka-today-weather-report
ಹವಾಮಾನ ವರದಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿದಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕ ಎಚ್.ಎಸ್. ಪಾಟೀಲ ತಿಳಿಸಿದ್ದಾರೆ.

ಬೆಂಗಳೂರು: ನಗರದಲ್ಲಿ ಇಂದು ಮತ್ತು ನಾಳೆ ಮಳೆ ಬೀಳುವ ಸಾಧ್ಯತೆ ಇದೆ. ಅಲ್ಲದೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿದಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಎಚ್​.ಎಸ್. ಪಾಟೀಲ ತಿಳಿಸಿದ್ದಾರೆ.

ವಿಜಯಪುರದಲ್ಲಿ ಕನಿಷ್ಠ ತಾಪಮಾನ 12.2 ಡಿಗ್ರಿ ದಾಖಲಾಗಿದೆ. ಬೆಳಗಾವಿಯಲ್ಲಿ 12.6 ಡಿಗ್ರಿ, ಶಿವಮೊಗ್ಗ 13.6 ಡಿಗ್ರಿ , ದಾವಣಗೆರೆ 12.3 ಡಿಗ್ರಿ, ಧಾರವಾಡ 14 ಡಿಗ್ರಿ, ಹಾವೇರಿ 14.4 ಡಿಗ್ರಿ ತಾಪಮಾನ ದಾಖಲಾಗಿದೆ. ಕರಾವಳಿಯಲ್ಲಿ ಇಂದು ಒಣ ಹವೆ ಮುಂದುವರೆಯಲಿದ್ದು ನವೆಂಬರ್ 13 ಮತ್ತು 14 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇಂದಿನಿಂದ 16 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಾದ ಮಂಡ್ಯ, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆ ಬೀಳುವ ಸಾದ್ಯತೆಯಿದ್ದು. ಮಲೆನಾಡು ಜಿಲ್ಲೆಗಳಾದ ಹಾಸನ, ಕೊಡಗಿನಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಇಂದಿನಿಂದ ನವೆಂಬರ್ 16 ರವರೆಗೆ ಒಣಹವೆ ಮುಂದುವರೆಯಲಿದೆ ಎಂದು ಎಚ್.ಎಸ್. ಪಾಟೀಲ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.