ETV Bharat / city

ಕಡ್ಡಾಯ ಗ್ರಾಮೀಣ ಸೇವೆ: ಹೈಕೋರ್ಟ್​ನಿಂದ ವೈದ್ಯರಿಗೆ ಸಿಕ್ತು ತಾತ್ಕಾಲಿಕ ರಿಲೀಫ್​

author img

By

Published : Jul 1, 2021, 5:40 PM IST

ಕಡ್ಡಾಯ ಗ್ರಾಮೀಣ ಸೇವೆ ಪ್ರಶ್ನಿಸಿ ವೈದ್ಯರಾದ ಡಾ. ಎನ್ ಪಾರ್ಥನಾ ಹಾಗೂ ಇತರೆ 183 ಮಂದಿ ವೈದ್ಯರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ಪೀಠ, ವೈದ್ಯರಿಗೆ ಮುಂದಿನ ಎರಡು ವಾರ ಕಾಲ ಗ್ರಾಮೀಣ ಸೇವೆಗೆ ನೋಂದಾಯಿಸಿಕೊಳ್ಳಲು ಒತ್ತಾಯಿಸದಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.

doctors
ವೈದ್ಯರು

ಬೆಂಗಳೂರು: ಎಂಬಿಬಿಎಸ್ ಪೂರೈಸಿರುವ 180 ಮಂದಿ ವೈದ್ಯರು ಕಡ್ಡಾಯ ಗ್ರಾಮೀಣ ಸೇವೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ವೈದ್ಯರಿಗೆ ಮುಂದಿನ ಎರಡು ವಾರ ಕಾಲ ಗ್ರಾಮೀಣ ಸೇವೆಗೆ ನೋಂದಾಯಿಸಿಕೊಳ್ಳಲು ಒತ್ತಾಯಿಸದಂತೆ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ನೀಡಿದೆ.

ಕಡ್ಡಾಯ ಗ್ರಾಮೀಣ ಸೇವೆ ಪ್ರಶ್ನಿಸಿ ವೈದ್ಯರಾದ ಡಾ. ಎನ್ ಪಾರ್ಥನಾ ಹಾಗೂ ಇತರೆ 183 ಮಂದಿ ವೈದ್ಯರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಚಿನ್ ಶಂಕರ್ ಮಗದಂ ಅವರಿದ್ದ ಏಕಸದಸ್ಯ ಪೀಠ ಈ ಮಧ್ಯಂತರ ಆದೇಶ ಜಾರಿ ಮಾಡಿದೆ. ಇದೇ ವೇಳೆ ನ್ಯಾಯಾಲಯದ ಈ ಮಧ್ಯಂತರ ಆದೇಶ ಅರ್ಜಿ ಸಲ್ಲಿಸಿರುವ 184 ಮಂದಿ ವೈದ್ಯರಿಗಷ್ಟೇ ಅನ್ವಯಿಸಲಿದೆ. ಉಳಿದಂತೆ ಕಡ್ಡಾಯ ಗ್ರಾಮೀಣ ಸೇವೆ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಅನ್ವಯಿಸದು ಎಂದು ಸ್ಪಷ್ಟಪಡಿಸಿದೆ.

2021ರಲ್ಲಿ ಎಂಬಿಬಿಎಸ್ ಪದವಿ ಪೂರೈಸಿರುವ ವೈದ್ಯರು ಕಡ್ಡಾಯ ಗ್ರಾಮೀಣ ಸೇವೆಗೆ ನೋಂದಾಯಿಸಿಕೊಳ್ಳುವಂತೆ ರಾಜ್ಯ ಸರ್ಕಾರ ಜೂನ್ 8ರಂದು ಆದೇಶ ಹೊರಡಿಸಿತ್ತು. ಅಲ್ಲದೇ, ಜೂನ್ 17ರಂದು ಮತ್ತೊಂದು ಅಧಿಸೂಚನೆ ಹೊರಡಿಸಿ, ಜೂನ್ 30ರಿಂದಲ್ ಕಡ್ಡಾಯ ಗ್ರಾಮೀಣ ಸೇವೆ ಪ್ರಾರಂಭವಾಗಲಿದ್ದು ನೂತನ ವೈದ್ಯರು ನೋಂದಾಯಿಸಿಕೊಳ್ಳುವಂತೆ ಸೂಚಿಸಿತ್ತು.

ಸರ್ಕಾರದ ಈ ಕ್ರಮ ಉನ್ನತ ವ್ಯಾಸಂಗಕ್ಕೆ ಅಡ್ಡಿಯಾಗಲಿದೆ. ಸ್ನಾತಕೋತ್ತರ ವೈದ್ಯಕೀಯ ಪದವಿ ಓದುವ ಆಕಾಂಕ್ಷೆ ಇಟ್ಟುಕೊಂಡಿರುವ ನಮಗೆ ಈ ಕಡ್ಡಾಯ ಸೇವೆಯಿಂದ ವಿನಾಯಿತಿ ಕೊಡಿಸಬೇಕು ಎಂದು ಅರ್ಜಿದಾರ ವೈದ್ಯರು ಕೋರಿದ್ದಾರೆ. ಅಲ್ಲದೇ, ಖಾಸಗಿ ಮ್ಯಾನೇಜ್ಮೆಂಟ್ ಕೋಟಾದಡಿ ಸೀಟು ಪಡೆದು ವೈದ್ಯಕೀಯ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಿಲ್ಲ.

ಹೀಗಾಗಿ ಸರ್ಕಾರದ ಆದೇಶ ಒಂದೇ ಬ್ಯಾಚ್ ನಲ್ಲಿ ಓದಿದ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡಿದೆ. ಅದೇ ರೀತಿ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಮ್ ಸಿ) ಕಾಯ್ದೆ-2019 ಜಾರಿಗೆ ಬಂದ ನಂತರ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಯನ್ನು ನಿಯಂತ್ರಿಸುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಇಲ್ಲವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.