ETV Bharat / city

ಶಾಲಾ ಮಕ್ಕಳ ಜೊತೆ ಬೆರೆತ ಡಿ.ಕೆ.ಶಿವಕುಮಾರ್​: ಸೂಕ್ತ ಕ್ರಮಕ್ಕೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಒತ್ತಾಯ

author img

By

Published : Jan 11, 2022, 10:07 AM IST

ಕೊರೊನಾ ನಿಯಮ ಉಲ್ಲಂಘನೆಯ ಸಂಬಂಧ ಡಿ.ಕೆ.ಶಿವಕುಮಾರ್​ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿಕೊಂಡ ಮಕ್ಕಳ ಹಕ್ಕು ರಕ್ಷಣಾ ಆಯೋಗ, ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳಬೇಕು ಡಿಜಿ- ಐಜಿಪಿ‌ ಪ್ರವೀಣ್ ಸೂದ್​ಗೆ ಪತ್ರ ಬರೆದಿದೆ.

shivakumar
ಡಿಕೆಶಿ

ಬೆಂಗಳೂರು: ಕೊರೊನಾ ಭೀತಿಯಿಂದಾಗಿ ಶಾಲಾ - ಕಾಲೇಜುಗಳಲ್ಲಿ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ. ಆದರೆ, ಮೇಕೆದಾಟು ಪಾದಯಾತ್ರೆಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಅವರು ಶಾಲೆಗೆ ಭೇಟಿ ನೀಡಿ ಅಲ್ಲಿನ ಮಕ್ಕಳೊಂದಿಗೆ ಬೆರೆತಿದ್ದಾರೆ. ಇದರಿಂದ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸದ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ(ಎನ್​ಸಿಪಿಸಿಆರ್) ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ಕೊರೊನಾ ನಿಯಮ ಉಲ್ಲಂಘನೆಯ ಸಂಬಂಧ ಡಿ.ಕೆ.ಶಿವಕುಮಾರ್​ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿಕೊಂಡ ಮಕ್ಕಳ ಹಕ್ಕು ರಕ್ಷಣಾ ಆಯೋಗ, ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕ್ರಮಕೈಗೊಳ್ಳಬೇಕು ಡಿಜಿ- ಐಜಿಪಿ‌ ಪ್ರವೀಣ್ ಸೂದ್​ಗೆ ಪತ್ರ ಬರೆದಿದೆ.

ಪಾದಯಾತ್ರೆಯ ವೇಳೆ ವಿಶ್ವೋದಯ ಶಾಲೆಗೆ ಡಿ.ಕೆ.ಶಿವಕುಮಾರ್​ ಭೇಟಿ ನೀಡಿದ್ದರು. ಶಾಲಾ ಮಕ್ಕಳ ಜತೆ ಬೆರೆತು ಫೋಟೋಗೆ ತೆಗೆಸಿಕೊಂಡಿದ್ದರು. ಕೋವಿಡ್ ನಿಯಮ ಪಾಲಿಸದೇ ಮಕ್ಕಳ ಜತೆ ಬೆರೆತಿದ್ದಾರೆ. ಮಾಸ್ಕ್​ ಧರಿಸಿದೆ ಶಾಲಾಮಕ್ಕಳ ಜತೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿ ಒಂದು ವಾರದಲ್ಲಿ ವರದಿ ನೀಡುವಂತೆ ಡಿಜಿಗೆ ಆಯೋಗ ಪತ್ರದಲ್ಲಿ ಸೂಚಿಸಿದೆ.

ಇದನ್ನೂ ಓದಿ: ಜನರ ಗಮನ ಸೆಳೆಯುತ್ತಿದೆ ಮೇಕೆದಾಟು ಪಾದಯಾತ್ರೆ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.