ETV Bharat / city

ಹರ್ ಘರ್ ತಿರಂಗಾ ಅಭಿಯಾನ.. ಮನೆ ಮನೆಗೆ ತೆರಳಿ ಧ್ವಜ ನೀಡಿದ ನಿರ್ಮಲಾ ಸೀತಾರಾಮನ್

author img

By

Published : Aug 13, 2022, 2:15 PM IST

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನದ ನಿಮಿತ್ತ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ‌ಜಯನಗರದಲ್ಲಿ ಪಾದಯಾತ್ರೆ ನಡೆಸಿ, ಮನೆ ಮನೆಗೆ ತೆರಳಿ ಧ್ವಜ ನೀಡಿದರು.

Nirmala Sitharaman
ನಿರ್ಮಲಾ ಸೀತಾರಾಮನ್

ಬೆಂಗಳೂರು: ಹರ್ ಘರ್ ತಿರಂಗಾ ಅಭಿಯಾನದ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಂಗಳೂರಿನ ‌ಜಯನಗರದಲ್ಲಿ ಪಾದಯಾತ್ರೆ ನಡೆಸಿದರು. ಈ ವೇಳೆ, ಜಯನಗರ ಟಿ ಬ್ಲಾಕ್​ನಲ್ಲಿ ಮನೆ ಮನೆಗೆ ತೆರಳಿ ತ್ರಿವರ್ಣ ಧ್ವಜ ನೀಡಿದರು.

Nirmala Sitharaman
ಮನೆ ಮನೆಗೆ ತೆರಳಿ ಧ್ವಜ ನೀಡಿದ ನಿರ್ಮಲಾ ಸೀತಾರಾಮನ್

ಇದಕ್ಕೂ ಮುನ್ನ ಶಾಂತಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೈಕ್ ರ‍್ಯಾಲಿಗೆ ಚಾಲನೆ ನೀಡಿದ ನಿರ್ಮಲಾ ಸೀತಾರಾಮನ್, ಬಳಿಕ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ಈ ವೇಳೆ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್.ಆರ್. ರಮೇಶ್, ಮಾಜಿ ಕಾರ್ಪೊರೇಟರ್ ಸಿ.ಕೆ. ರಾಮಮೂರ್ತಿ ಸಾತ್ ನೀಡಿದರು.

ಇದನ್ನೂ ಓದಿ: ಸ್ವಾತಂತ್ರ್ಯ ಅಮೃತ ಮಹೋತ್ಸವ.. ಬಳ್ಳಾರಿಯಲ್ಲಿ ತಿರಂಗಾ ಹಿಡಿದು ಜಯಘೋಷ ಕೂಗಿದ ಸಾವಿರಾರು ಮಂದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.