ETV Bharat / city

ಒಂದ್​ ವೇಳೆ ಚುನಾವಣೆ ನಡೆದ್ರೂ ಯಾವ ಪಕ್ಷಕ್ಕೂ ಬಹುಮತ ಬರಲ್ಲ: ಬೇಕಿದ್ರೆ ಬರೆದುಕೊಡ್ತೇನಿ ಎಂದ ಕುಮಾರಸ್ವಾಮಿ

author img

By

Published : Nov 2, 2019, 2:02 PM IST

Updated : Nov 2, 2019, 2:30 PM IST

ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ

ಜನರನ್ನು ಬಹಳ ದಿನ 'ಫೂಲ್' ಮಾಡೋಕೆ ಆಗಲ್ಲ. ಬಿಜೆಪಿ ಸರ್ಕಾರ ಬಿದ್ದು ಮಧ್ಯಂತರ ಚುನಾವಣೆಯಾದರೆ, ಯಾವ ಪಕ್ಷಕ್ಕೂ ಬಹುಮತ ಬರಲ್ಲ. ಬೇಕಾದ್ರೆ ಬರೆದಿಟ್ಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು: ಒಂದು ವೇಳೆ ಈಗ ಬಿಜೆಪಿ ಸರ್ಕಾರ ಬಿದ್ದರೆ, ಮತ್ತೆ ಚುನಾವಣೆ ಮಾಡಿದ್ರೂ ಕೂಡಾ ಯಾವುದೇ ಒಂದು ಪಕ್ಷಕ್ಕೂ ಬಹುಮತ ಬರುವುದಿಲ್ಲ. ಬೇಕಾದ್ರೆ ಬರೆದಿಟ್ಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರನ್ನು ಬಹಳ ದಿನ 'ಫೂಲ್' ಮಾಡೋಕೆ ಆಗಲ್ಲ. ಬಿಜೆಪಿ ಸರ್ಕಾರ ಬಿದ್ದು ಮಧ್ಯಂತರ ಚುನಾವಣೆ ಆದರೆ, ಯಾವ ಪಕ್ಷಕ್ಕೂ ಬಹುಮತ ಬರಲ್ಲ ಎಂದು ಮಹಾರಾಷ್ಟ್ರದ ಚುನಾವಣೆಯನ್ನು ಉದಾಹರಣೆ ನೀಡಿದರು.

ಕೆಲವೇ ದಿನಗಳಲ್ಲಿ ಸರ್ಕಾರ ಅಧಿಕಾರ ಕಳೆದುಕೊಂಡರೂ ಆಶ್ಚರ್ಯವಿಲ್ಲ ಎಂದು ನಾನು ಹೇಳಿದ್ದಲ್ಲ. ಬಿಜೆಪಿ‌ ಸಚಿವರೇ ಹೇಳಿದ್ದಾರೆ.‌ ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಶಿಸ್ತಿನಿಂದ ಹೇಗೆ ಕೆಲಸ ಮಾಡ್ತಾರೆ? ಎಂದು ಪ್ರಶ್ನಿಸಿದ ಅವರು, ಸರ್ಕಾರದ ಬಗ್ಗೆ ನಾನು‌ ಸಾಫ್ಟ್ ಕಾರ್ನರ್ ಇರಿಸಿಕೊಂಡಿರುವುದು ಯಾಕೆ ಅಂದ್ರೆ, ನೆರೆ ಪೀಡಿತ ಪ್ರದೇಶದ ಪರಿಸ್ಥಿತಿಯನ್ನು ನಾನು‌ ಪ್ರವಾಸ ಮಾಡಿ ಹತ್ತಿರದಿಂದ ಗಮನಿಸಿದ್ದೇನೆ. ರಾಜಕಾರಣ ಮಾಡಿ ಈ ಸರ್ಕಾರ ಅಸ್ಥಿರ ಮಾಡಲು ಹೊರಟರೆ, ನೆರೆ ಪೀಡಿತರ ಕತೆ ಏನು ಎಂಬುದಷ್ಟೇ ನನ್ನ ಆತಂಕ ಎಂದರು.

ನಾನು ಬಿಜೆಪಿ ಬಗ್ಗೆ ಮೃದು ಧೋರಣೆ ತಳೆಯುತ್ತಿದ್ದೇನೆ ಅನ್ನೋ ವರದಿಗಳು ಬರುತ್ತಿವೆ. ಮಾಧ್ಯಮಗಳಲ್ಲಿ ಈ ಬಗ್ಗೆ ಹಲವು ವರ್ಣರಂಜಿತ ವರದಿಗಳು ಪ್ರಸಾರ ಆಗಿದೆ. ಫೋನ್‌ ಟ್ಯಾಪಿಂಗ್ ವಿಚಾರದಲ್ಲಿ, ಐಎಂಎ ಕೇಸ್​ನಲ್ಲಿ ಕುಮಾರಸ್ವಾಮಿ ಫಿಟ್ ಆಗ್ತಾರೆ ಎಂಬ ಭಯದಲ್ಲಿ ಬಿಜೆಪಿ ಬಗ್ಗೆ ಸಾಫ್ಟ್ ಆಗಿದ್ದಾರೆ ಎಂದು ಹೇಳುತ್ತಿದ್ದಾರೆ. ಅದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ಹೇಳಿದರು.

ಈ ಸರ್ಕಾರ ಬಹಳ ದಿನ ಉಳಿಯಲ್ಲ. ನಾನು ಈ ಹಿಂದೆಯೂ ಹೇಳಿದ್ದೇನೆ, ಈಗಲೂ ಹೇಳ್ತೇನೆ. ನಾನು ಬಿಜೆಪಿ ಸರ್ಕಾರ ಬೀಳಿಸಲ್ಲ ಅಂತಾ ಹೇಳಿದ್ದು ಯಾವುದೇ ಸಾಫ್ಟ್ ಕಾರ್ನರ್​ನಿಂದ ಅಲ್ಲ. ಟೀಕೆ ಮಾಡೋದ್ರಿಂದ ಮನರಂಜನೆ ಸಿಗುತ್ತೆ ಅಷ್ಟೇ ಎಂದು ಸಿದ್ದರಾಮಯ್ಯ ಅವರಿಗೆ ಪರೋಕ್ಷವಾಗಿ ಮಾತಿನ ಗುದ್ದು ನೀಡಿದರು.

ದೇಶ ಮತ್ತು ರಾಜ್ಯ ರಾಜಕಾರಣ ಗೊಂದಲಮಯವಾಗಿದೆ. ಕೇಂದ್ರದಲ್ಲಿ ಸುಭದ್ರ ಸರ್ಕಾರ ಇದ್ದರೂ ಆತಂಕದ ಆರ್ಥಿಕ ಸ್ಥಿತಿ ಇದೆ. ರಾಜ್ಯದಲ್ಲಿ ಅತಿವೃಷ್ಟಿ ತಾರಕಕ್ಕೆ ಏರಿದೆ. ಆದರೆ, ಸರ್ಕಾರ ಇದಕ್ಕೆ ತಕ್ಕಂತೆ ವರ್ತನೆ ಮಾಡಲಿಲ್ಲ. ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ ಬಿ ಎಸ್ ಯಡಿಯೂರಪ್ಪ ಹರಸಾಹಸ ಪಟ್ಟು ಅಧಿಕಾರಕ್ಕೆ ಬಂದ್ರು. ಆಗ ಸುರಿದ ಮಳೆ ಯಡಿಯೂರಪ್ಪ ಅವರ ಕಾಲ್ಗುಣ ಅಂದ್ರು. ಆದರೆ, ಮಳೆ ಜಾಸ್ತಿ ಆಗುತ್ತಿದ್ದಂತೆ ಯಡಿಯೂರಪ್ಪ ಅವರೇ, ದೇವರ ಅವಕೃಪೆಗೆ ನಾವು ಒಳಗಾಗಿದ್ದೇವೆ ಎಂದು ಎಚ್​ಡಿಕೆ ವ್ಯಂಗ್ಯವಾಡಿದರು.

ಹೆಚ್ ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ

ಬಿಎಸ್ ವೈ ವಿರುದ್ಧ ಮಾತಿನ ಚಾಟಿ...

ಮೀನುಗಾರರು ಮತ್ತು ನೇಕಾರರ ಸಾಲ ಕೇವಲ ಜಾಹೀರಾತು ಮೇಲಿದೆ ಅಷ್ಟೇ. ಯಾವುದೇ ಸಾಲ ಈವರೆಗೂ ಮನ್ನಾ ಮಾಡಿಲ್ಲ. ಇದು ಬರೇ ಜಾಹೀರಾತಿನ ಸರ್ಕಾರ. ನೂರು ದಿನಗಳ ಬಿಜೆಪಿ ಸರ್ಕಾರ ಬರೇ ಜಾಹೀರಾತು ನೀಡಲಷ್ಟೇ ಸೀಮಿತವಾಗಿದೆ. ಅಧಿಕಾರಿಗಳು ಮತ್ತು ಮುಖ್ಯಮಂತ್ರಿಗಳ ನಡುವೆ ಸಮನ್ವಯತೆ ಇಲ್ಲ. ಶಿಕಾರಿಪುರ ಸುತ್ತಮುತ್ತ ಕೆರೆ ತುಂಬಿಸಲು ನಾನು ಸಿಎಂ ಆಗಿದ್ದಾಗ 450 ಕೋಟಿ ರೂ. ನೀಡಿದ್ದೆ. ಯಡಿಯೂರಪ್ಪ ಸಿಎಂ ಆಗುತ್ತಿದ್ದಂತೆ ಇದನ್ನು 850 ಕೋಟಿ ರೂ.ಗೆ ಏರಿಕೆ ಮಾಡಿಕೊಂಡರು.‌ ಇದೇ ಇವರ 100 ದಿನದ ಸಾಧನೆ ಎಂದು ಯಡಿಯೂರಪ್ಪ ವಿರುದ್ಧ ಚಾಟಿ ಬೀಸಿದರು.

ನೂರು ದಿನದಲ್ಲಿ ಯಾವ ಇಲಾಖೆಗೆ ಎಷ್ಟು ಹಣ ನೀಡಿದ್ದೀರಿ? ಎಂದು ಸರ್ಕಾರಕ್ಕೆ ಸವಾಲು ಹಾಕಿದ ಕುಮಾರಸ್ವಾಮಿ, ಚಿಕ್ಕಬಳ್ಳಾಪುರ ಮತ್ತು ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವ ಬಗ್ಗೆ ದೊಡ್ಡ ರಾಜಕಾರಣ ನಡೀತಿದೆ. ಎಲ್ಲಿಗೆ ಕಾಲೇಜು ಕೊಡಬೇಕು ಎಂಬುದಕ್ಕಿಂತ ಇದಕ್ಕೆ ದುಡ್ಡು ಮೀಸಲು ಆಗಿದೆಯಾ? ಎಂಬುದು ಮುಖ್ಯ.‌ ಎಲ್ಲ ಬರೇ ಶಂಕುಸ್ಥಾಪನೆಗೆ ಅಷ್ಟೇ ಸೀಮಿತ ಆಗಿರುವ ಸರ್ಕಾರವಿದು ಎಂದು ವ್ಯಂಗ್ಯವಾಡಿದರು.

ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಆಗಬೇಕು ಅಂತಾ ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲೇ ಘೋಷಣೆಯಾಗಿತ್ತು. ಆದರೆ, ಹಣ ಇಟ್ಟಿರಲಿಲ್ಲ. ಕನಕಪುರ ಕ್ಕೆ ಕೊಟ್ಟ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಕೊಟ್ಟರು ಅಂತಾ ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ. ಕನಕಪುರ ಮತ್ತು ಚಿಕ್ಕಬಳ್ಳಾಪುರ ಎರಡಕ್ಕೂ ಮೆಡಿಕಲ್ ಕಾಲೇಜು ಕೊಡಲಿ, ಬೇಡ ಎಂದವರು ಯಾರು? ಈಗ ಕೇವಲ ಚುನಾವಣಾ ಗಿಮಿಕ್ ಆಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜಿಗೆ ಗುದ್ದಲಿ ಪೂಜೆ ಮಾಡಲು ಹೊರಟಿದ್ದಾರೆ. ಹಣ ಎಲ್ಲಿಂದ ತರುತ್ತಾರೆ ಎಂದು ಪ್ರಶ್ನಿಸಿದರು.

ನೆರೆ ಪೀಡಿತ ಉತ್ತರ ಕರ್ನಾಟಕದ ಜನತೆಯ ಹಿತ ದೃಷ್ಟಿಯಿಂದ ಮಾತ್ರವೇ ನಾನು ಮಧ್ಯಂತರ ಚುನಾವಣೆ ಬೇಡ ಎನ್ನುತ್ತಿದ್ದೇನೆ. ನನ್ನ ಅಭಿಪ್ರಾಯದಲ್ಲಿ ಮತ್ತೆ ಚುನಾವಣೆ ನಡೆದರೆ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರಲ್ಲ. ಮತ್ತೆ ಅತಂತ್ರ ವಿಧಾನಸಭೆ ನಿರ್ಮಾಣ ಆಗುತ್ತದೆ. ಇದು ಬೇಕಾ ಅನ್ನೋದೇ ಪ್ರಶ್ನೆ ಎಂದರು.

ನನಗೆ ಸಿಎಂ ಪಟ್ಟ ಬೇಕಿರಲಿಲ್ಲ ಎಂದು ಯಡಿಯೂರಪ್ಪ ಅವರೇ ಹೇಳುವ ಮೂಲಕ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಹೇಳಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಸರ್ಕಾರವೂ ಹೋಗಿ ರಾಷ್ಟ್ರಪತಿ ಆಡಳಿತ ಬಂದರೆ ನೆರೆ ಪರಿಹಾರದ ಕತೆ ಏನು? ಇನ್ನೂ ನಮ್ಮಲ್ಲಿ ಆತ್ಮಹತ್ಯೆ ಆಗಬೇಕಾ? ಎಂದು ಹೇಳಿದರು.

Intro:ಬೆಂಗಳೂರು : ಒಂದು ವೇಳೆ ಈಗ ಬಿಜೆಪಿ ಸರ್ಕಾರ ಬಿದ್ದರೆ, ಮತ್ತೇ ಚುನಾವಣೆ ಮಾಡಿದ್ರು ಕೂಡಾ ಯಾವುದೇ ಒಂದು ಪಕ್ಷಕ್ಕೂ ಬಹುಮತ ಬರುವುದಿಲ್ಲ. ಬೇಕಾದ್ರೆ ಬರೆದು ಇಟ್ಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.Body:ಬೆಂಗಳೂರು ಪ್ರೆಸ್ ಕ್ಲಬ್ ಹಾಗೂ ಬೆಂಗಳೂರು ವರದಿಗಾರರ ಕೂಟ ಜಂಟಿಯಾಗಿ ಇಂದು ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನರನ್ನು ಬಹಳ ದಿನ ಫೂಲ್ ಮಾಡೋಕೆ ಆಗಲ್ಲ. ಬಿಜೆಪಿ ಸರ್ಕಾರ ಬಿದ್ದು ಮಧ್ಯಂತರ ಚುನಾವಣೆ ಆದರೆ ಯಾವ ಪಕ್ಷಕ್ಕೂ ಮೆಜಾರಿಟಿ ಬರಲ್ಲ ಎಂದು ಮಹಾರಾಷ್ಟ್ರದ ಚುಣಾವಣೆಯನ್ನು ಉದಾಹರಣೆ ನೀಡಿದರು.
ಕೆಲವೇ ದಿನಗಳಲ್ಲಿ ಸರ್ಕಾರ ಅಧಿಕಾರ ಕಳೆದುಕೊಂಡರೂ ಆಶ್ಚರ್ಯ ಇಲ್ಲ ಎಂದು ನಾನು ಹೇಳಿದ್ದಲ್ಲ. ಬಿಜೆಪಿ‌ ಸಚಿವರೇ ಹೇಳಿದ್ದಾರೆ.‌ ಇಂಥ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಶಿಸ್ತಿನಿಂದ ಹೇಗೆ ಕೆಲಸ ಮಾಡ್ತಾರೆ? ಎಂದು ಪ್ರಶ್ನಿಸಿದ ಅವರು, ಸರ್ಕಾರದ ಬಗ್ಗೆ ನಾನು‌ ಸಾಫ್ಟ್ ಕಾರ್ನರ್ ಇರಿಸಿಕೊಂಡಿರುವುದು ಯಾಕೆ ಅಂದ್ರೆ, ನೆರೆ ಪೀಡಿತ ಪ್ರದೇಶದ ಪರಿಸ್ಥಿತಿಯನ್ನು ನಾನು‌ ಪ್ರವಾಸ ಮಾಡಿ ಹತ್ತಿರದಿಂದ ಗಮನಿಸಿದ್ದೇನೆ. ರಾಜಕಾರಣ ಮಾಡಿ ಈ ಸರ್ಕಾರ ಅಸ್ಥಿರ ಮಾಡಲು ಹೊರಟರೆ, ನೆರೆ ಪೀಡಿತರ ಕತೆ ಏನು ಎಂಬುದಷ್ಟೇ ನನ್ನ ಆತಂಕ ಎಂದರು.
ನಾನು ಬಿಜೆಪಿ ಬಗ್ಗೆ ಮೃದು ಧೋರಣೆ ತಳೆಯುತ್ತಿದ್ದೇನೆ ಅನ್ನೋ ವರದಿಗಳು ಬರುತ್ತಿವೆ. ಮಾಧ್ಯಮಗಳಲ್ಲಿ ಈ ಬಗ್ಗೆ ಹಲವು ವರ್ಣರಂಜಿತ ವರದಿಗಳು ಪ್ರಸಾರ ಆಗಿದೆ. ಫೋನ್‌ ಟ್ಯಾಪಿಂಗ್ ವಿಚಾರದಲ್ಲಿ, ಐಎಂಎ ಕೇಸ್ ನಲ್ಲಿ ಕುಮಾರಸ್ವಾಮಿ ಫಿಟ್ ಆಗ್ತಾರೆ ಎಂಬ ಭಯದಲ್ಲಿ ಬಿಜೆಪಿ ಬಗ್ಗೆ ಸಾಫ್ಟ್ ಆಗಿದ್ದಾರೆ ಎಂದು ಹೇಳುತ್ತಿದ್ದಾರೆ. ಅದಕ್ಕೆಲ್ಲಾ ನಾನು ಹೆದರುವುದಿಲ್ಲ ಎಂದು ಹೇಳಿದರು.
ಈ ಸರ್ಕಾರ ಬಹಳ ದಿನ ಉಳಿಯಲ್ಲ. ನಾನು ಈ ಹಿಂದೆಯೂ ಹೇಳಿದ್ದೇನೆ, ಈಗಲೂ ಹೇಳ್ತೇನೆ. ನಾನು ಬಿಜೆಪಿ ಸರ್ಕಾರ ಬೀಳಿಸಲ್ಲ ಅಂತಾ ಯಾವುದೇ ಸಾಫ್ಟ್ ಕಾರ್ನರ್ ನಿಂದ ಅಲ್ಲ. ಟೀಕೆ ಮಾಡೋದ್ರಿಂದ ಮನರಂಜನೆ ಸಿಗುತ್ತೆ ಅಷ್ಟೇ ಎಂದು ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಮಾತಿನ ಗುದ್ದು ನೀಡಿದರು.
ದೇಶ ಮತ್ತು ರಾಜ್ಯ ರಾಜಕಾರಣದಲ್ಲಿ ಗೊಂದಲಮಯವಾಗಿದೆ. ಕೇಂದ್ರದಲ್ಲಿ ಸುಭದ್ರ ಸರ್ಕಾರ ಇದ್ದರೂ ಆತಂಕದ ಆರ್ಥಿಕ ಸ್ಥಿತಿ ಇದೆ. ರಾಜ್ಯದಲ್ಲಿ ಅತಿವೃಷ್ಟಿ ತಾರಕಕ್ಕೆ ಏರಿದೆ. ಆದರೆ ಸರ್ಕಾರ ಇದಕ್ಕೆ ತಕ್ಕಂತೆ ವರ್ತನೆ ಮಾಡಲಿಲ್ಲ. ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಿ ಬಿ.ಎಸ್. ಯಡಿಯೂರಪ್ಪ ಹರಸಾಹಸ ಪಟ್ಟು ಅಧಿಕಾರಕ್ಕೆ ಬಂದ್ರು. ಆಗ ಸುರಿದ ಮಳೆ ಯಡಿಯೂರಪ್ಪ ಅವರ ಕಾಲ್ಗುಣ ಅಂದ್ರು. ಆದರೆ, ಮಳೆ ಜಾಸ್ತಿ ಆಗುತ್ತಿದ್ದಂತೆ ಯಡಿಯೂರಪ್ಪ ಅವರೇ, ದೇವರ ಅವಕೃಪೆಗೆ ನಾವು ಒಳಗಾಗಿದ್ದೇವೆ ಎಂದು ಎಚ್ಡಿಕೆ ವ್ಯಂಗ್ಯವಾಡಿದರು.
ಬಿಎಸ್ ವೈ ವಿರುದ್ಧ ಮಾತಿನ ಚಾಟಿ : ಮೀನುಗಾರರು ಮತ್ತ ನೇಕಾರರ ಸಾಲ ಕೇವಲ ಜಾಹೀರಾತು ಮೇಲಿದೆ ಅಷ್ಟೇ. ಯಾವುದೇ ಸಾಲ ಈತನಕ ಮನ್ನಾ ಮಾಡಿಲ್ಲ. ಇದು ಬರೇ ಜಾಹೀರಾತಿನ ಸರ್ಕಾರ. ನೂರು ದಿನಗಳ ಬಿಜೆಪಿ ಸರ್ಕಾರ ಬರೇ ಜಾಹೀರಾತಿ ನೀಡಲಷ್ಟೇ ಸೀಮಿತ ಆಗಿದೆ. ಅಧಿಕಾರಿಗಳು ಮತ್ತು ಮುಖ್ಯಮಂತ್ರಿಗಳ ನಡುವೆ ಸಮನ್ವಯತೆ ಇಲ್ಲ. ಶಿಕಾರಪುರ ಸುತ್ತಮುತ್ತ ಕೆರೆ ತುಂಬಿಸಲು ನಾನು ಸಿಎಂ ಆಗಿದ್ದಾಗ 450 ಕೋಟಿ ರೂ. ನೀಡಿದ್ದೆ. ಯಡಿಯೂರಪ್ಪ ಸಿಎಂ ಆಗುತ್ತಿದ್ದಂತೆ ಇದನ್ನು 850 ಕೋಟಿ ರೂ.ಗೆ ಏರಿಕೆ ಮಾಡಿಕೊಂಡರು.‌ ಇದೇ ಇವರ 100 ದಿನದ ಸಾಧನೆ ಎಂದು ಯಡಿಯೂರಪ್ಪ ವಿರುದ್ದ ಚಾಟಿ ಬೀಸಿದರು.
ನೂರು ದಿನದಲ್ಲಿ ಯಾವ ಇಲಾಖೆಗೆ ಎಷ್ಟು ಹಣ ನೀಡಿದ್ದೀರಿ? ಸರ್ಕಾರಕ್ಕೆ ಸವಾಲು ಹಾಕಿದ ಕುಮಾರಸ್ವಾಮಿ ಅವರು, ಚಿಕ್ಕಬಳ್ಳಾಪುರ ಮತ್ತು ಕನಕಪುರಕ್ಕೆ ಮೆಡಿಕಲ್ ಕಾಲೇಜು ನೀಡುವ ಬಗ್ಗೆ ದೊಡ್ಡ ರಾಜಕಾರಣ ನಡೀತಿದೆ. ಎಲ್ಲಿಗೆ ಕಾಲೇಜು ಕೊಡಬೇಕು ಎಂಬುದಕ್ಕಿಂತ ಇದಕ್ಕೆ ದುಡ್ಡು ಮೀಸಲು ಆಗಿದೆಯಾ? ಎಂಬುದು ಮುಖ್ಯ.‌ ಎಲ್ಲ ಬರೇ ಶಂಕುಸ್ಥಾಪನೆಗೆ ಅಷ್ಟೇ ಸೀಮಿತ ಆಗಿರುವ ಸರ್ಕಾರವಿದು. ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಆಗಬೇಕು ಅಂತಾ ಸಿದ್ದರಾಮಯ್ಯ ಸಿಎಂ ಆಗಿದ್ದ ಕಾಲದಲ್ಲೇ ಘೋಷಣೆ ಆಗಿತ್ತು. ಆದರೆ ಹಣ ಇಟ್ಟಿರಲಿಲ್ಲ, ಕನಕಪುರ ಕ್ಕೆ ಕೊಟ್ಟ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರ ಕ್ಕೆ ಕೊಟ್ಟರು ಅಂತಾ ಡಿ.ಕೆ. ಶಿವಕುಮಾರ್ ಹೇಳುತ್ತಿದ್ದಾರೆ. ಕನಕಪುರ ಮತ್ತು ಚಿಕ್ಕಬಳ್ಳಾಪುರ ಎರಡಕ್ಕೂ ಮೆಡಿಕಲ್ ಕಾಲೇಜು ಕೊಡಲಿ , ಬೇಡ ಎಂದವರು ಯಾರು?. ಈಗ ಕೇವಲ ಚುನಾವಣಾ ಗಿಮಿಕ್ ಆಗಿ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜ್ ಗೆ ಗುದ್ದಲಿ ಪೂಜೆ ಮಾಡಲು ಹೊರಟಿದ್ದಾರೆ. ಹಣ ಎಲ್ಲಿಂದ ತರುತ್ತಾರೆ ಎಂದು ಪ್ರಶ್ನಿಸಿದರು.
ನೆರೆ ಪೀಡಿತ ಉತ್ತರ ಕರ್ನಾಟಕದ ಜನತೆಯ ಹಿತ ದೃಷ್ಟಿಯಿಂದ ಮಾತ್ರವೇ ನಾನು ಮಧ್ಯಂತರ ಚುನಾವಣೆ ಬೇಡ ಎನ್ನುತ್ತಿದ್ದೇನೆ. ನನ್ನ ಅಭಿಪ್ರಾಯದಲ್ಲಿ ಮತ್ತೆ ಚುನಾವಣೆ ನಡೆದರೆ ಯಾವ ಪಕ್ಷಕ್ಕೂ ಸ್ಪಷ್ಟ ಬಹುಮತ ಬರಲ್ಲ. ಮತ್ತೆ ಅತಂತ್ರ‌ ವಿಧಾನಸಭೆ ನಿರ್ಮಾಣ ಆಗುತ್ತದೆ. ಇದು ಬೇಕಾ ಅನ್ನೋದೇ ಪ್ರಶ್ನೆ ಎಂದರು.
ನನಗೆ ಸಿಎಂ ಪಟ್ಟ ಬೇಕಿರಲಿಲ್ಲ ಎಂದು ಯಡಿಯೂರಪ್ಪ ಅವರೇ ಹೇಳುವ ಮೂಲಕ ರಾಜ್ಯದ ರಾಜಕೀಯ ಪರಿಸ್ಥಿತಿ ಬಗ್ಗೆ ಹೇಳಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ಸರ್ಕಾರವೂ ಹೋಗಿ ರಾಷ್ಟ್ರಪತಿ ಆಡಳಿತ ಬಂದರೆ ನೆರೆ ಪರಿಹಾರದ ಕತೆ ಏನು? ಇನ್ನೂ ನಮ್ಮಲ್ಲಿ ಆತ್ಮಹತ್ಯೆ ಆಗಬೇಕಾ? ಎಂದು ಹೇಳಿದರು. Conclusion:
Last Updated :Nov 2, 2019, 2:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.