ETV Bharat / city

ಬೆಂಗಳೂರು, ಮಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಹೀಗಿದೆ

author img

By

Published : Jun 30, 2022, 9:18 AM IST

Updated : Jun 30, 2022, 10:16 AM IST

Petrol rate
Petrol rate

ನವದೆಹಲಿ ಸೇರಿ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ ಹೀಗಿದೆ...

ಬೆಂಗಳೂರು/ನವದೆಹಲಿ: ದೇಶದಲ್ಲಿ ಇಂಧನ ದರಗಳು ನಿತ್ಯವೂ ಪರಿಷ್ಕರಿಸಲ್ಪಡುತ್ತವೆ. ತೈಲ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆ ಆಗಿಲ್ಲ. ಹಾಗಿದ್ದರೆ ನವದೆಹಲಿ, ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿನ ಇಂಧನ ದರ ಎಷ್ಟಿದೆ ಎಂಬುದರ ಮಾಹಿತಿ ಇಲ್ಲಿದೆ.

ಇಂದಿನ ದರಗಳ ಬಗ್ಗೆ ತಿಳಿಯೋದಾದರೆ: ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 96.72 ರೂ.ಗೆ ಇದ್ದು, ಡೀಸೆಲ್ ಬೆಲೆ 89.62 ಆಗಿದೆ. ಮುಂಬೈನಲ್ಲಿ ಇತ್ತೀಚಿನ ಅಬಕಾರಿ ಸುಂಕ ಕಡಿತದ ನಂತರ ಪೆಟ್ರೋಲ್ ಪ್ರತಿ ಲೀಟರ್‌ಗೆ 111.35 ರೂ.ಗೆ ಮಾರಾಟವಾಗುತ್ತಿದ್ದು, ಡೀಸೆಲ್ 97.28 ರೂ. ಇದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 106.03 ರೂ. ಆಗಿದ್ದರೆ, ಡೀಸೆಲ್ ಬೆಲೆ 92.76 ರೂ. ಆಗಿದೆ. ಚೆನ್ನೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ಗೆ 102.63 ರೂ. ಮತ್ತು ಡೀಸೆಲ್‌ಗೆ 94.24 ರೂ.ಗೆ ಮಾರಾಟವಾಗುತ್ತಿದೆ. ಪಂಜಾಬ್‌ನ ಚಂಡೀಗಢದಲ್ಲಿ ಪೆಟ್ರೋಲ್ ಬೆಲೆ 96.20 ರೂ. ಮತ್ತು ಡೀಸೆಲ್ ಬೆಲೆ 84.26 ರೂ. ಆಗಿದೆ.

ರಾಜ್ಯದಲ್ಲಿ ತೈಲ ದರ: ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಯಥಾಸ್ಥಿತಿಯಲ್ಲಿದೆ. ಪೆಟ್ರೋಲ್​ ಲೀಟರ್​ಗೆ 101.96 ರೂ.ಗೆ ಮಾರಾಟವಾಗುತ್ತಿದ್ದರೆ, ಡೀಸೆಲ್ 87.91ರೂ.ಗೆ ಮಾರಾಟವಾಗುತ್ತಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 101.65 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 87.65 ರೂಪಾಯಿ ಇದೆ.

ಶಿವಮೊಗ್ಗದಲ್ಲಿ ಪೆಟ್ರೋಲ್ ಲೀಟರ್​ಗೆ 103.26 ರೂಪಾಯಿ, ​ಡೀಸೆಲ್ 89.04 ರೂ. ಗೆ ಮಾರಾಟವಾಗುತ್ತಿದೆ. ಮೈಸೂರಿನಲ್ಲಿ ಒಂದು ಲೀಟರ್‌ ಪೆಟ್ರೋಲ್​ಗೆ 101.44 ರೂಪಾಯಿ ಇದ್ದು, ಒಂದು ಲೀಟರ್‌ ಡೀಸೆಲ್​ಗೆ 87.43 ರೂಪಾಯಿ ಇದೆ. ಮಂಗಳೂರಲ್ಲಿ ಪೆಟ್ರೋಲ್, ಡೀಸೆಲ್ ದರಲ್ಲಿ 64 ಪೈಸೆ ಇಳಿಕೆಯಾಗಿದೆ. ಪೆಟ್ರೋಲ್ 101.13 ರೂ, ಡೀಸೆಲ್ 87.13 ರೂ ಇದೆ.

(ಇದನ್ನೂ ಓದಿ: ಏರುತ್ತಿರುವ ಬೆಲೆ ಏರಿಕೆ ನಡುವೆ ಯಾವುದರಲ್ಲಿ ಹೂಡಿಕೆ ಮಾಡುವುದು ಉತ್ತಮ? ಇಲ್ಲಿದೆ ಇಂಟ್ರಸ್ಟಿಂಗ್​ ಮಾಹಿತಿ)

Last Updated :Jun 30, 2022, 10:16 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.