ಭಾರತ್ ಬಂದ್ ಹಿನ್ನೆಲೆ: ಸೂಕ್ತ ಭದ್ರತೆ ಕೈಗೊಳ್ಳಲು ಡಿಸಿಪಿಗಳಿಗೆ ಕಮಲ್ ಪಂತ್ ಸೂಚನೆ

author img

By

Published : Sep 25, 2021, 2:09 AM IST

police-commissioner-kamal-pant-on-bharat-bund

ಬಂದ್ ಹಿನ್ನೆಲೆಯಲ್ಲಿ ರೈತಪರ‌‌ ಪರ‌ ಸಂಘಟನೆ ಸೇರಿದಂತೆ ಯಾವುದೇ ಸಂಘ- ಸಂಸ್ಥೆಗಳು ಪ್ರತಿಭಟನೆ ನಡೆಸಲು ಅನುಮತಿ‌ ಕೇಳಿಲ್ಲ. ಒಂದು ವೇಳೆ‌‌ ಅರ್ಜಿ ಬಂದರೂ ಅನುಮತಿ ನೀಡುವುದಿಲ್ಲ ಎಂದು ಕಮಲ್ ಪಂತ್​​ ಸ್ಪಷ್ಟಪಡಿಸಿದರು.

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಕರೆ ನೀಡಿರುವ ಭಾರತ್ ಬಂದ್ ವೇಳೆ ಶಾಂತಿ ಭಂಗ ಉಂಟಾಗದಂತೆ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಆಯುಕ್ತ ಕಮಲ್ ಪಂತ್ ಸೂಚಿಸಿದ್ದಾರೆ.

ಬಂದ್ ವೇಳೆ ನಗರಕ್ಕೆ ಹೊರಗಿನಿಂದ ಸಂಪರ್ಕಿಸುವ ಪ್ರಮುಖ ರಸ್ತೆಗಳಲ್ಲಿ ಸೂಕ್ತ ಭದ್ರತೆ ಕೈಗೊಳ್ಳಬೇಕು. ಯಾವುದೇ ರೀತಿ ಗೊಂದಲಗಳು, ಗಲಾಟೆಗಳಿಗೆ ಅವಕಾಶ ಕೊಡಬಾರದು. ಗಸ್ತು ಹೆಚ್ಚಳ ಮಾಡಬೇಕು. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ಭದ್ರತೆ ನಿಯೋಜಿಸುವುದೇ ಸೇರಿದಂತೆ ತಮ್ಮ ವಿಭಾಗಗಳಲ್ಲಿ ಬಂದೋಬಸ್ತ್ ಮೇಲೆ ಡಿಸಿಪಿಗಳೇ ನಿಗಾವಹಿಸಿ ನಿರ್ವಹಿಸಬೇಕು ಎಂದು ಆಯುಕ್ತರು ತಿಳಿಸಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ರೈತಪರ‌‌ ಪರ‌ ಸಂಘಟನೆ ಸೇರಿದಂತೆ ಯಾವುದೇ ಸಂಘ- ಸಂಸ್ಥೆಗಳು ಪ್ರತಿಭಟನೆ ನಡೆಸಲು ಅನುಮತಿ‌ ಕೇಳಿಲ್ಲ. ಒಂದು ವೇಳೆ‌‌ ಅರ್ಜಿ ಬಂದರೂ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ತರಗುಪೇಟೆಯ ಪಟಾಕಿ ಗೋದಾಮಿನಲ್ಲಿ ಸ್ಫೋಟ ಪ್ರಕರಣ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸ್ ಆಯುಕ್ತ ಕಮಲ್ ಪಂತ್, ನಗರ ವ್ಯಾಪ್ತಿಯ ಎಲ್ಲ ಪಟಾಕಿ ಅಂಗಡಿಗಳು ಹಾಗೂ ಗೋದಾಮುಗಳಿಗೆ ಭೇಟಿ ನೀಡಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಡಿಸಿಪಿಗಳಿಗೆ ನಡೆಸಿದ ಸಭೆಯಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ‌.

ಇದೇ ವೇಳೆ ಪಟಾಕಿ ಗೋದಾಮಿನಲ್ಲಿ ಗುರುವಾರ ಸಂಭವಿಸಿದ್ದ ಸ್ಫೋಟದ ವಿಷಯ ಸಹ ಪ್ರಸ್ತಾಪವಾಗಿದೆ. ಪ್ರತಿ ಠಾಣಾ ವ್ಯಾಪ್ತಿಯಲ್ಲಿರುವ ಪಟಾಕಿಗಳ ಅಂಗಡಿಗಳು ಹಾಗೂ ಗೋದಾಮುಗಳನ್ನು ಕೂಡಲೇ ತಪಾಸಣೆ ನಡೆಸಬೇಕು. ಪಟಾಕಿ ವ್ಯಾಪಾರಿಗಳು ಸುರಕ್ಷತಾ ನಿಯಮಗಳು ಹಾಗೂ ಪರವಾನಿಗೆ ಪಡೆದಿರುವ ಬಗ್ಗೆ ಪರಿಶೀಲಿಸಬೇಕು. ಏನಾದರೂ ಕಾನೂನು ಬಾಹಿರವಾಗಿ ಗೋದಾಮು ತೆರೆದಿದ್ದರೆ ಕ್ರಮ ಜರುಗಿಸಬೇಕು ಎಂದು ಆಯುಕ್ತರು ಹೇಳಿದ್ದಾರೆ.

ಅಲ್ಲದೆ, ಪಟಾಕಿ ಗೋದಾಮುಗಳ ಪರಿಶೀಲನೆ ಬಳಿಕ ವರದಿಯನ್ನು ಕಚೇರಿಗೆ ಕಳುಹಿಸಬೇಕು. ಇನ್ನೊಂದು ವಾರದಲ್ಲಿ ಎಲ್ಲ ಪಟಾಕಿಗಳ ಅಂಗಡಿಗಳ ತಪಾಸಣೆ ಮುಗಿಯಬೇಕು. ಮುಂದೆ ನ್ಯೂ ತರಗುಪೇಟೆ ರೀತಿಯ ಘಟನೆ ಮರುಕಳಿಸಿದರೆ ಸಂಬಂಧಪಟ್ಟ ಅಧಿಕಾರಿಗಳು ಹೊಣೆ ಹೊರಬೇಕಾಗುತ್ತದೆ ಎಂದು ಕಮಲ್ ಪಂತ್ ಎಚ್ಚರಿಕೆ ನೀಡಿದರು ಎನ್ನಲಾಗಿದೆ.

ಇದನ್ನೂ ಓದಿ: ಅಧಿವೇಶನ ಮುಕ್ತಾಯ: ವಿವಿಧ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.