SSLC ಪರೀಕ್ಷೆ ರದ್ದು ಕೋರಿ ಕೋರ್ಟ್ ಮೊರೆ ಹೋಗಲು ಸಿದ್ಧತೆ

author img

By

Published : Jul 7, 2021, 8:00 PM IST

SSLC exam

ನಮ್ಮ ರಾಜ್ಯ ಸರ್ಕಾರ ಯಾವ ಪುರುಷಾರ್ಥಕ್ಕೆ ಪರೀಕ್ಷೆ ನಡೆಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ರಾಜ್ಯ ಸರ್ಕಾರ ಬಹುಶಃ ಪ್ರಧಾನಿ ನರೇಂದ್ರ ಮೋದಿಯವರ ಮಾತನ್ನು ಕೂಡ ಕೇಳೋದಿಲ್ಲ ಅನ್ನಿಸುತ್ತೆ..

ಬೆಂಗಳೂರು : ರಾಜ್ಯಾದ್ಯಂತ ಜುಲೈ 19 ಮತ್ತು 22ರಂದು ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಆದರೆ, ಕೋವಿಡ್​ ಹಿನ್ನೆಲೆ ಶಾಲಾ-ಕಾಲೇಜುಗಳು ಆರಂಭವಾಗದಿರುವುದರಿಂದ ಪಠ್ಯಕ್ರಮ ಪೂರ್ಣಗೊಂಡಿಲ್ಲ. ಹೀಗಾಗಿ, ಎಸ್ಎಸ್ಎಲ್​ಸಿ ಪರೀಕ್ಷೆ ರದ್ದು ಕೋರಿ ಕೋರ್ಟ್ ಮೊರೆ ಹೋಗಲು ಸಿದ್ಧತೆ ನಡೆಸಲಾಗುತ್ತಿದೆ.

ಎಸ್ಎಸ್ಎಲ್​ಸಿ ಪರೀಕ್ಷೆ ಕುರಿತು ಮಾತನಾಡಿದ ಶಿಕ್ಷಣ ತಜ್ಞ ನಿರಾಂಜನಾರಾಧ್ಯ

ಈ ಕುರಿತು ಮಾತನಾಡಿರುವ ಶಿಕ್ಷಣ ತಜ್ಞ ನಿರಂಜನಾರಾಧ್ಯ, ವಿದ್ಯಾರ್ಥಿಗಳಿಗೆ ಪಾಠ ಮಾಡದೇ, ಪರೀಕ್ಷೆ ನಡೆಸುವುದು ಎಷ್ಟು ಸೂಕ್ತ. ಎಸ್ಎಸ್ಎಲ್​ಸಿ ಪರೀಕ್ಷೆ ನಡೆಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಇಡೀ ದೇಶದಲ್ಲೇ ಸಿಬಿಎಸ್, ಐಸಿಎಸ್ ಪರೀಕ್ಷೆ ರದ್ದು ಮಾಡಿದ್ದಾರೆ. ತಮಿಳುನಾಡು, ಕೇರಳ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಮಹಾರಾಷ್ಟ್ರದಲ್ಲಿ ಕೂಡ ಪರೀಕ್ಷೆ ರದ್ದು ಮಾಡಲಾಗಿದೆ.

ಆದರೆ, ನಮ್ಮ ರಾಜ್ಯ ಸರ್ಕಾರ ಯಾವ ಪುರುಷಾರ್ಥಕ್ಕೆ ಪರೀಕ್ಷೆ ನಡೆಸುತ್ತಿದೆ ಎಂಬುದು ತಿಳಿಯುತ್ತಿಲ್ಲ. ರಾಜ್ಯ ಸರ್ಕಾರ ಬಹುಶಃ ಪ್ರಧಾನಿ ನರೇಂದ್ರ ಮೋದಿಯವರ ಮಾತನ್ನು ಕೂಡ ಕೇಳೋದಿಲ್ಲ ಅನ್ನಿಸುತ್ತೆ ಎಂದು ವ್ಯಂಗ್ಯವಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.