ETV Bharat / city

ಉತ್ತರ ಕನ್ನಡದಲ್ಲಿ ಹೈಟೆಕ್​ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯ.. ಹೋರಾಟ ಬೆಂಬಲಿಸಿದ ಚಿಂತಕ ಸೂಲಿಬೆಲೆ

author img

By

Published : Jul 30, 2022, 9:47 PM IST

Super Specialty Hospital
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಒತ್ತಾಯ

ಆ್ಯಂಬುಲೆನ್ಸ್ ದುರ್ಘಟನೆ ಬಳಿಕ ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಡಿಕೆ, ಆಗ್ರಹ- ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ- ಹೋರಾಟ ಬೆಂಬಲಿಸಿದ ಚಿಂತಕ ಚಕ್ರವರ್ತಿ ಸೂಲಿಬೆಲೆ

ಬೆಂಗಳೂರು : ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಬೇಡಿಕೆ ಬಹಳ ವರ್ಷಗಳಿಂದ ಕೇಳಿ ಬರುತ್ತಿದೆ. ಆದರೆ ಶಿರೂರು ಟೋಲ್​ಗೇಟ್​ನಲ್ಲಿ ಆ್ಯಂಬುಲೆನ್ಸ್ ದುರ್ಘಟನೆಯ ಬಳಿಕ ಉತ್ತರ ಕನ್ನಡದಲ್ಲಿ ಆಸ್ಪತ್ರೆ ಬೇಕು ಎಂಬ ಒತ್ತಾಯ ಹೆಚ್ಚಾಗಿದೆ. ಶನಿವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಈ ಬಗ್ಗೆ ಹೋರಾಟ ನಡೆಯಿತು. ಆದರೆ ಈ ಹೋರಾಟಕ್ಕೆ ಯಾವುದೇ ಜನ ಪ್ರತಿನಿಧಿಗಳೂ ಸ್ಪಂದಿಸದಿರುವುದು ಬೇಸರದ ಸಂಗತಿಯಾಗಿದೆ.

ಈ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಹೋರಾಟಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಜನರ ಕೂಗನ್ನು ನಿರ್ಲಕ್ಷಿಸುತ್ತಿರುವ ಶಾಸಕ ಮತ್ತು ಸಚಿವರ ವಿರುದ್ಧ ಕಿಡಿಕಾರಿದರು. ಉತ್ತರ ಕನ್ನಡ ಜಿಲ್ಲೆಯ ಶಾಸಕರು ತುಲಾಭಾರ ಮಾಡುವಷ್ಟು ದುಡ್ಡು ಮಾಡಿದ್ದಾರೆ. ಆದರೆ ಜನರಿಗೆ ಪ್ರಮುಖವಾಗಿ ಬೇಕಾಗಿರುವ ಆಸ್ಪತ್ರೆ ನಿರ್ಮಾಣದ ಬಗ್ಗೆ ಯಾರೂ ಗಮನ ನೀಡುತ್ತಿಲ್ಲ. ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರ ಜಿಲ್ಲೆಯಲ್ಲಿ ಆಸ್ಪತ್ರೆಗಾಗಿ ಬಂದು ಹೋರಾಟ ಮಾಡಬೇಕಾದ ದುಸ್ಥಿತಿ ನಿಮಾಣವಾಗಿರುವುದು ಬೇಸರದ ಸಂಗತಿ ಎಂದರು.

ಸರ್ಕಾರ ಉತ್ತರ ಕನ್ನಡಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಗಮನ ಹರಿಸದೇ ಇರುವುದು ವಿಷಾದನೀಯ

ಉತ್ತರ ಕನ್ನಡದ ಸಂಸದರಾಗಿಯೇ ಅನಂತ್ ಕುಮಾರ್ ಹೆಗಡೆ ಐದಾರು ಬಾರಿ ಆಯ್ಕೆಯಾಗಿದ್ದಾರೆ. ಆದರೆ ನಯಾ ಪೈಸೆಯೂ ಉಪಯೋಗವಾಗಿಲ್ಲ. ಪದೇ ಪದೇ ರಾಜ್ಯ ಸರ್ಕಾರವನ್ನು ಬೈಯುವ ಪರಿಸ್ಥಿತಿ ಬಂದಿದೆ. ಉತ್ತರ ಕನ್ನಡದಲ್ಲಿ ಜನರಿಗೇ ಬೇಕಾದ ರೀತಿ ಅಭಿವೃದ್ಧಿ ಮಾಡಿದ್ದರೆ ರಾಜಧಾನಿಗೆ ಉದ್ಯೋಗ ಅರಸಿ ಬರಬೇಕಾಗಿಲ್ಲ. ಆದರೆ ಜನಪ್ರತಿನಿಗಳು ಅಭಿವೃದ್ಧಿ ಬಗ್ಗೆ ತಲೆಕೆಡೆಸಿಕೊಳ್ಳುತ್ತಿಲ್ಲ. ಹೀಗಾಗಿ ಸರ್ಕಾರದ ವಿರುದ್ಧ ಹಾಗೂ ಜನರ ಪರ ಮಾತನಾಡಲೇಬೇಕಾದ ಅಗತ್ಯತೆ ಬಂದಿದೆ. ಬೇಸರವಾದರೂ ಜನರಿಗೆ ಧ್ವನಿ ಆಗುವುದರಲ್ಲಿ ನಾನು ಎಂದೂ ಹಿಂದೇಟು ಹಾಕುವುದಿಲ್ಲ ಎಂದು ಹೇಳಿದರು.

Super Specialty Hospital
ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಒತ್ತಾಯ

ಖಾಸಗಿ ಆಸ್ಪತ್ರೆ ಕಟ್ಟುವ ಕಡೆ ಚಿಂತನೆ: ಕುಮಟಾ ಶಾಸಕರ ಜೊತೆ ನಾನು ಮಾತನಾಡಿದ್ದೇನೆ. ಸರ್ಕಾರಕ್ಕೆ ಆಗದೇ ಇದ್ದರೇ ಖಾಸಗಿ ಸಹಭಾಗಿತ್ವದಲ್ಲಿ ಮಾಡೋಣ ಎಂದು ಹೇಳಿದ್ದೇನೆ. ಅಷ್ಟೇ ಅಲ್ಲದೇ ಆಸ್ಪತ್ರೆ ಕಟ್ಟಲು ಜಾಗ ತೋರಿಸಿ ಎಂದು ಹೇಳಿದ್ದೆ ಎಂದು ಮಾಹಿತಿ ನೀಡಿದರು.

ಒಂದು ವಾರದ ಗಡುವು: ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಜನರು ಭಾಗಿಯಾಗಿದ್ದು, ಪ್ರತಿಭಟನೆಯ ಬಳಿಕ ಆಸ್ಪತ್ರೆಯ ಅಗತ್ಯತೆಯ ಕುರಿತು ಸಿಎಂ ಕಾರ್ಯದರ್ಶಿಗೆ ಮಾಹಿತಿ ನೀಡಿ, ಆಸ್ಪತ್ರೆ ಕಟ್ಟಿಸಿಕೊಡುವಂತೆ ಮನವಿ ಮಾಡಿದರು. ಸಿಎಂ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ ಮಾಡಲಿದ್ದು, ಆ ಸಂದರ್ಭದಲ್ಲಿ ಮಲ್ಟಿ ಸ್ಪೆಷಲ್ ಆಸ್ಪತ್ರೆ ಘೋಷಣೆ ಮಾಡಬೇಕೆಂಬ ಒತ್ತಾಯಿಸಿದರು. ಭರವಸೆ ಈಡೇರದಿದ್ದರೆ ಹೋರಾಟ ಮುಂದುವರೆಸುತ್ತೇವೆ ಹಾಗೂ ಸತ್ಯಾಗ್ರಹ ಮಾಡುತ್ತೇವೆ ಎಂದು ಪ್ರತಿಭಟನಾನಿರತರು ಎಚ್ಚರಿಕೆ ರವಾನಿಸಿದರು.

ಇದನ್ನೂ ಓದಿ : ಮಂಕಿಪಾಕ್ಸ್ ರೋಗದ ಬಗ್ಗೆ ಯಾವುದೇ ಭಯ ಪಡುವ ಅವಶ್ಯಕತೆ ಇಲ್ಲ : ಸಚಿವ ಸುಧಾಕರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.