ETV Bharat / city

'ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿ ವಿಚಾರ ಚರ್ಚೆಗೆ ಸರ್ವಪಕ್ಷ ಸಭೆ ನಡೆಸಿ'

author img

By

Published : May 11, 2022, 10:47 AM IST

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಭಿನ್ನವಾಗಿದೆ. ಇಲ್ಲಿ ಈಗಾಗಲೇ ರಾಜ್ಯ ಸರ್ಕಾರ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧವಿದೆ. ಇದರ ಆಧಾರದಲ್ಲಿ ಕಡಿಮೆ ಅವಧಿಯಲ್ಲಿ ಹೊಸ ರಾಜಕೀಯ ಮೀಸಲಾತಿಯನ್ನು ರೂಪಿಸಲು ಸಾಧ್ಯವಿದೆ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

Opposition leader Siddaramaiah tweet
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿ ವಿಚಾರದಲ್ಲಿ ಉಂಟಾಗಿರುವ ಹಿನ್ನೆಡೆಯ ಚರ್ಚೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ವಪಕ್ಷ ಸಭೆ ಕರೆಯಬೇಕು ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯ ವಿವಾದ ಇತ್ಯರ್ಥಕ್ಕೆ ಕಾಯದೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂಕೋರ್ಟ್ ಆದೇಶದಿಂದ ಸಾಮಾಜಿಕ ನ್ಯಾಯಕ್ಕೆ ಗಂಡಾಂತರ ಎದುರಾಗಿದೆ. ಇದರಿಂದ ಹಿಂದುಳಿದ ಜಾತಿಗಳು ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಲಿದ್ದಾರೆ ಎಂದಿದ್ದಾರೆ.

  • ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಯ ವಿವಾದದ ಇತ್ಯರ್ಥಕ್ಕೆ ಕಾಯದೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶದಿಂದ ಸಾಮಾಜಿಕ ನ್ಯಾಯಕ್ಕೆ ಗಂಡಾಂತರ ಎದುರಾಗಿದೆ. ಇದರಿಂದ ಹಿಂದುಳಿದ ಜಾತಿಗಳು ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಲಿದ್ದಾರೆ.
    1/3#SocialJustice

    — Siddaramaiah (@siddaramaiah) May 10, 2022 " class="align-text-top noRightClick twitterSection" data=" ">

ಸುಪ್ರೀಂಕೋರ್ಟ್ ಆದೇಶ ಕರ್ನಾಟಕ ರಾಜ್ಯಕ್ಕೂ ಸಂಬಂಧಿಸಿರುವ ಕಾರಣ ರಾಜ್ಯ ಬಿಜೆಪಿ ಸರ್ಕಾರ ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ನ್ಯಾಯಾಲಯದ ಗಮನಕ್ಕೆ ತರಬೇಕು. ಈ ಬಗ್ಗೆ ಮುಂದಿನ ಕ್ರಮದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಕ್ಷಣ ಸರ್ವಪಕ್ಷಗಳ ಸಭೆ ಕರೆಯಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಭಿನ್ನವಾಗಿದೆ. ಇಲ್ಲಿ ಈಗಾಗಲೇ ರಾಜ್ಯ ಸರ್ಕಾರ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಸಿದ್ಧವಿದೆ. ಇದರ ಆಧಾರದಲ್ಲಿ ಕಡಿಮೆ ಅವಧಿಯಲ್ಲಿ ಹೊಸ ರಾಜಕೀಯ ಮೀಸಲಾತಿಯನ್ನು ರೂಪಿಸಲು ಸಾಧ್ಯವಿದೆ ಎಂದಿದ್ದಾರೆ.

ಈ ಹಿಂದೆಯೂ ಸಿದ್ದರಾಮಯ್ಯ ಒಮ್ಮೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂದರ್ಭ, ಸುಪ್ರೀಂಕೋರ್ಟ್ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಜಾತಿಗಳ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಪಾಯದ ಹಿನ್ನೆಲೆ ರಾಜ್ಯ ಬಿಜೆಪಿ ಸರ್ಕಾರ ಕಾಲವ್ಯಯ ಮಾಡದೆ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ತಕ್ಷಣ ಒಪ್ಪಿಕೊಂಡು ಜಾರಿಗೆ ತರಬೇಕು. ಇದೇ ವರದಿಯನ್ನು ಮುಂದಿಟ್ಟುಕೊಂಡು ಸುಪ್ರೀಂ ಕೋರ್ಟ್ ಮುಂದೆ ತನ್ನವಾದ ಮಂಡಿಸಿ ಹಿಂದುಳಿದ ಜಾತಿಗಳಿಗೆ ಆಗಲಿರುವ ಅನ್ಯಾಯವನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದರು.

ಸುಪ್ರೀಂಕೋರ್ಟ್ ಇತ್ತೀಚಿನ ಆದೇಶದಿಂದಾಗಿ ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ಜಾತಿಯ ರಾಜಕೀಯ ಮೀಸಲಾತಿಗೆ ಎದುರಾಗಿರುವ ಅಡ್ಡಿಯನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿಯಿಂದ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದಿದ್ದರು. ಇದೀಗ ಮತ್ತೊಮ್ಮೆ ಅವರು ದನಿಯೆತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.