ETV Bharat / city

ಭಾರತ್ ಬಂದ್ ಮಧ್ಯೆಯೂ 352 ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ SSLC ಪೂರಕ ಪರೀಕ್ಷೆ : 3081 ಮಂದಿ ಗೈರು

author img

By

Published : Sep 27, 2021, 10:41 PM IST

Bangalore
ಸಾಂದರ್ಭಿಕ ಚಿತ್ರ

ಇಂದು ಬೆಳಗ್ಗೆ ಗಣಿತ, ಸಮಾಜ ವಿಜ್ಞಾನ, ವಿಜ್ಞಾನ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಹಿಂದೂಸ್ಥಾನ ಸಂಗೀತ/ ಕರ್ನಾಟಕ ಸಂಗೀತ ಹಾಗೂ ಮಧ್ಯಾಹ್ನ ಎಲಿಮೆಂಟ್ಸ್​​ ಆಫ್ ಮೆಕಾನಿಕಲ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ನಡೆದಿದೆ..

ಬೆಂಗಳೂರು : ಒಂದೆಡೆ ಭಾರತ್ ಬಂದ್, ಮತ್ತೊಂದೆಡೆ ಕೊರೊನಾ ಭೀತಿ. ಇವರೆಡರ ಮಧ್ಯೆಯೂ ಇಂದು ಎಸ್ಎಸ್ಎಲ್​​ಸಿ ಪೂರಕ ಪರೀಕ್ಷೆ ನಿಗದಿಯಂತೆ ನಡೆಯಿತು.

ಕೊರೊನಾ ತೀವ್ರತೆ ಹಿನ್ನೆಲೆ ಸಾಕಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಹಿಂದೇಟು ಹಾಕಿದರು. ಹೀಗಾಗಿ, ಮತ್ತೊಮ್ಮೆ ಪರೀಕ್ಷೆ ಬರೆಯಲು ಇಲಾಖೆ ಅವಕಾಶ ಕಲ್ಪಿಸಿಕೊಟ್ಟಿತ್ತು. ಅದರಂತೆ ಇಂದು ರಾಜ್ಯಾದ್ಯಂತ 352 ಪರೀಕ್ಷಾ ಕೇಂದ್ರಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಯಿತು.

ಹೊಸ ಹಾಗೂ ಖಾಸಗಿಯೂ ಸೇರಿ ಒಟ್ಟು 53,125 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದರು. ಇದರಲ್ಲಿ 50,043 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರೆ, 3081 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

ಇಂದು ಬೆಳಗ್ಗೆ ಗಣಿತ, ಸಮಾಜ ವಿಜ್ಞಾನ, ವಿಜ್ಞಾನ, ಸಮಾಜಶಾಸ್ತ್ರ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಹಿಂದೂಸ್ಥಾನ ಸಂಗೀತ/ ಕರ್ನಾಟಕ ಸಂಗೀತ ಹಾಗೂ ಮಧ್ಯಾಹ್ನ ಎಲಿಮೆಂಟ್ಸ್​​ ಆಫ್ ಮೆಕಾನಿಕಲ್ ಎಲೆಕ್ಟ್ರಿಕಲ್ ಎಂಜಿನಿಯರಿಂಗ್, ಎಂಜಿನಿಯರಿಂಗ್ ಗ್ರಾಫಿಕ್ಸ್ 2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕ್ ಎಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಪರೀಕ್ಷೆ ನಡೆದಿದೆ.

ಬಹುಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆ : ಈ ಹಿಂದೆ ನಡೆಸಿದ್ದಂತೆ MCQ (Multiple Choice Question) ಬಹು ಆಯ್ಕೆ ಪ್ರಶ್ನೆ ಆಧಾರಿತ ಪರೀಕ್ಷೆಯನ್ನು ನಡೆಸಲಾಗಿದೆ. ಪ್ರತಿ ವಿಷಯಕ್ಕೆ ಗರಿಷ್ಠ 40 ಅಂಕಗಳಿಗೆ ಸೀಮಿತಗೊಳಿಸಿ, ಒಟ್ಟು 3 ಕೋರ್ ವಿಷಯಗಳಿಗೆ 120 ಪ್ರಶ್ನೆಗಳುಳ್ಳ ಒಂದೇ ಪ್ರಶ್ನೆಪತ್ರಿಕೆ (ಪತ್ರಿಕೆ-1) ನೀಡಲಾಗಿದೆ‌.

ಗಣಿತ ಮತ್ತು ವಿಜ್ಞಾನ ವಿಷಯಗಳ ಬದಲಾಗಿ ಪರ್ಯಾಯ ವಿಷಯಗಳನ್ನು ಆಯ್ಕೆ ಮಾಡಿಕೊಂಡ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಪತ್ರಿಕೆ-1ರಲ್ಲಿ ಭಾಗ-1 ಪರ್ಯಾಯ ವಿಷಯ-1, ಭಾಗ-2 ಪರ್ಯಾಯ ವಿಷಯ 2 ಮತ್ತು ಭಾಗ-3ರಲ್ಲಿ ಸಮಾಜ ವಿಜ್ಞಾನದ ಪ್ರಶ್ನೆಗಳಾಗಿತ್ತು.

ಇದನ್ನೂ ಓದಿ: SSLC ಪೂರಕ ಪರೀಕ್ಷೆ : ವಿದ್ಯಾರ್ಥಿಗಳ ನೋಂದಣಿಗೆ ದಿನಾಂಕ ವಿಸ್ತರಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.