ETV Bharat / city

ಜೂನ್ 21ರಿಂದ ಬೀದಿಬದಿ ವ್ಯಾಪಾರಿಗಳಿಗೆ ಸಂಪೂರ್ಣ ಅನುಮತಿ ನೀಡಲು ಆಗ್ರಹ

author img

By

Published : Jun 17, 2021, 9:59 AM IST

ಜೂನ್​ 21ರಿಂದ ಬೀದಿಬದಿ ವ್ಯಾಪಾರಿಗಳಿಗೆ ಸಂಪೂರ್ಣ ಅನುಮತಿ ನೀಡಬೇಕು. ಒಂದು ವೇಳೆ ಅವಕಾಶ ನೀಡದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

Bangalore
ಬೀದಿ ಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ

ಬೆಂಗಳೂರು: ಕರ್ನಾಟಕ ಸರ್ಕಾರ ಬೀದಿಬದಿ ವ್ಯಾಪಾರಿಗಳಿಗೆ ವ್ಯವಹರಿಸಲು ಅನುಮತಿ ನೀಡುತ್ತಿಲ್ಲ. ಗೋಬಿ ಮಂಚೂರಿ, ಪಾನಿಪೂರಿ, ಕಾಫಿ-ಟೀ, ಬಜ್ಜಿ-ಬೋಂಡಾ, ಚೈನೀಸ್, ಬಟ್ಟೆ, ಪ್ಲಾಸ್ಟಿಕ್ ಸೇರಿದಂತೆ ವಿವಿಧ ವ್ಯಾಪಾರಿಗಳು ಹೇಗೆ ಜೀವನ ಮಾಡಬೇಕು. ಜೂನ್​ 21ರಿಂದ ವ್ಯಾಪಾರಿಗಳಿಗೆ ಸಂಪೂರ್ಣ ಅನುಮತಿ ನೀಡಬೇಕು. ಒಂದು ವೇಳೆ ಅನುಮತಿ ಕೊಡಲಿಲ್ಲವೆಂದರೂ ನಾವು ವ್ಯಾಪಾರ ಮಾಡುವುದು ಶತಃಸಿದ್ಧ ಎಂದು ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ಹೇಳಿದರು.

'ಜೂನ್ 21ರಿಂದ ಬೀದಿಬದಿ ವ್ಯಾಪಾರಿಗಳಿಗೆ ಸಂಪೂರ್ಣ ಅನುಮತಿ ನೀಡಬೇಕು'

ಈ ಸಂಬಂಧ ವಿಡಿಯೋ ಬಿಡುಗಡೆ ಮಾಡಿರುವ ಅವರು, ನಾವು ಸತ್ತರೆ ನಮ್ಮ ಕುಟಂಬದ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಬೇಕು. ಬೀದಿಬದಿ ವ್ಯಾಪಾರಿಗಳಿಗೆ 2,000 ರೂ. ಪರಿಹಾರ ಘೋಷಣೆ ಮಾಡಿದ್ದೀರಾ. ಆ ಹಣ ಖಾತೆಗೆ ಬರುತ್ತಿದ್ದಂತೆ ಕೇಂದ್ರ ಸರ್ಕಾರ 10,000 ಹಣದ ಸಾಲವನ್ನು ಕಡಿತಗೊಳಿಸಿ, ಜಮಾ ಮಾಡಿಕೊಳ್ಳಲು ಮುಂದಾಗಿದೆ ಎಂದು ಕಿಡಿಕಾರಿದರು.

ಜೂನ್​ 21ರಿಂದ ಬೀದಿಬದಿ ವ್ಯಾಪಾರಿಗಳಿಗೆ ಸಂಪೂರ್ಣ ಅನುಮತಿ ನೀಡಬೇಕೆಂದು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದೇವೆ. ಒಂದು ವೇಳೆ ಅವಕಾಶ ನೀಡದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.