ಕನ್ನಡೇತರರಿಗೆ ಕನ್ನಡ ಕಲಿಸಿ: ಸಿಎಂ ಬಸವರಾಜ ಬೊಮ್ಮಾಯಿ

author img

By

Published : Aug 19, 2021, 9:07 PM IST

program by Kannada Development Authority
ಕರ್ನಾಟಕ ಸರ್ಕಾರದ ಕನ್ನಡ ಕಾಯಕ ಕೃತಿ ಲೋಕಾರ್ಪಣೆ ()

ಕನ್ನಡಿಗರು ಇತರ ರಾಜ್ಯಗಳಿಗೆ ಹೋದಾಗ ಅಲ್ಲಿನ ಭಾಷೆಯನ್ನು ಕಲಿಯುತ್ತಾರೆ. ಅದೇ ರೀತಿ ಬೆಂಗಳೂರಿನಲ್ಲಿರುವ ಕನ್ನಡೇತರರೂ ಕನ್ನಡ ಕಲಿಯುವಂತಾಗಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು..

ಬೆಂಗಳೂರು: ನಗರದಲ್ಲಿ ಕನ್ನಡೇತರರಿಗೆ ಕನ್ನಡ ಭಾಷೆ ಕಲಿಸುವ ಕುರಿತು ಕಾರ್ಯಕ್ರಮ ರೂಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲಹೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಇಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಕನ್ನಡ ಕಾಯಕ ಕೃತಿಯನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಕನ್ನಡಿಗರು ಇತರ ರಾಜ್ಯಗಳಿಗೆ ಹೋದಾಗ ಅಲ್ಲಿನ ಭಾಷೆಯನ್ನು ಕಲಿಯುತ್ತಾರೆ. ಅದೇ ರೀತಿ ಬೆಂಗಳೂರಿನಲ್ಲಿರುವ ಕನ್ನಡೇತರರೂ ಕನ್ನಡ ಕಲಿಯುವಂತಾಗಬೇಕು ಎಂದು ತಿಳಿಸಿದರು.

1983ರಲ್ಲಿ ಕನ್ನಡ ಕಾವಲು ಸಮಿತಿ ಎಂಬ ಹೆಸರಿನಲ್ಲಿ ಪ್ರಾರಂಭವಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತನ್ನ ಕಾರ್ಯವ್ಯಾಪ್ತಿ ವಿಸ್ತರಿಸಿದೆ. ಕನ್ನಡ ಭಾಷೆ ಕುರಿತಂತೆ ಇತರ ಸಂಸ್ಥೆಗಳ ಸಹಯೋಗದಿಂದ ವಿವಿಧ ಕಾರ್ಯಕ್ರಮಗಳನ್ನು ರೂಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿಂದು 1,432 ಕೋವಿಡ್ ಸೋಂಕಿತರು ಪತ್ತೆ - 27 ಮಂದಿ ಸಾವು !

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಪ್ರಾಧಿಕಾರ ಹಮ್ಮಿಕೊಂಡಿರುವ ಕಾರ್ಯಕ್ರಮಗಳ ವಿವರ ನೀಡಿದರು. ಸಮಾರಂಭದಲ್ಲಿ ಸಾಹಿತಿಗಳಾದ ದೊಡ್ಡರಂಗೇಗೌಡ, ಪ್ರೊ. ಮಲ್ಲೇಪುರಂ ಜಿ. ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಜೆ. ರವಿಶಂಕರ್ ಮತ್ತು ಇತರರು ಭಾಗವಹಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.