ETV Bharat / city

ಪಕ್ಷದ ವಿರುದ್ಧ ತಿರುಗಿಬಿದ್ದ ಕಾರ್ಯಕರ್ತರು: ಸಿಎಂ ನಿವಾಸ, ಬಿಜೆಪಿ ಕಚೇರಿಗೆ ಹೆಚ್ಚುವರಿ ಭದ್ರತೆ

author img

By

Published : Jul 30, 2022, 3:24 PM IST

Updated : Jul 30, 2022, 4:00 PM IST

Tight Security at CM Residence and BJP office in Bengaluru  Karnataka Updated news  Murder in Karnataka  Praveen nettaru murder case protest  ABVP protest at home minister Aaraga jnanedra residence  ಕರ್ನಾಟಕದಲ್ಲಿ ಕೊಲೆ ಪ್ರಕರಣ  ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ  ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಮುತ್ತಿಗೆ  ಬಿಜೆಪಿ ಪ್ರತಿಭಟನೆ  ಸಿಎಂ ನಿವಾಸ ಬಿಜೆಪಿ ಕಚೇರಿಗೆ ಭದ್ರತೆ
ಸಿಎಂ ನಿವಾಸಕ್ಕೆ ಭದ್ರತೆ

ಪ್ರವೀಣ್ ನೆಟ್ಟಾರು ಹತ್ಯೆಗೆ ಖಂಡನೆ- ಕಠಿಣ ಕ್ರಮ ಕೈಗೊಳ್ಳದ ಬಗ್ಗೆ ಕಾರ್ಯಕರ್ತರ ಆಕ್ರೋಶ- ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಬೆನ್ನಲ್ಲೇ ಸಿಎಂ ನಿವಾಸಕ್ಕೆ ಹೆಚ್ಚಿದ ಭದ್ರತೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಖಂಡಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗಳ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಿಎಂ ಕಚೇರಿ ಕೃಷ್ಣದಲ್ಲಿ ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ.

ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ಎಬಿವಿಪಿ ಕಾರ್ಯಕರ್ತರಿಂದ ಮುತ್ತಿಗೆ, ಸಂಸದ ತೇಜಸ್ವಿ ಸೂರ್ಯ ‌ಮನೆ, ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡರ ಮನೆ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ಹಿನ್ನೆಲೆ ಈ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದೆ. ಸಿಎಂ ನಿವಾಸದ ಮುಂದೆಯೂ ಪ್ರತಿಭಟನೆ ಸಾಧ್ಯತೆ ಹಿನ್ನೆಲೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಿಎಂ ಗೃಹ ಕಚೇರಿ ಕೃಷ್ಣದಲ್ಲಿ ಎರಡು ಕೆಎಸ್​​ಆರ್​​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಸಿಎಂ ಕಚೇರಿಗೆ ಹೆಚ್ಚುವರಿ ಭದ್ರತೆ

ಇತ್ತ ಮಲ್ಲೇಶ್ವರಂ ಬಿಜೆಪಿ ಕಚೇರಿಗೂ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ತಮ್ಮ ಪಕ್ಷದ ಮೇಲೆಯೇ ಬಿಜೆಪಿ ಕಾರ್ಯಕರ್ತರು, ಹಿಂದೂ ಸಂಘಟನೆಗಳು ತಿರುಗಿಬಿದ್ದು, ಸಚಿವರ ಮನೆ ಮುಂದೆ ಬೀದಿಗಿಳಿದು ಹೋರಾಟ ನಡೆಸಲು ಮುಂದಾಗಿವೆ. ಈ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಿಎಂ ನಿವಾಸ, ರಾಜ್ಯ ಬಿಜೆಪಿ ಕಚೇರಿಗೆ ಹೆಚ್ಚುವರಿ ಭದ್ರತೆ ಒದಗಿಸಲಾಗಿದೆ.

ಗೃಹ ಸಚಿವರ ಮನೆಗೆ ಮುತ್ತಿಗೆ: ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಹಾಗೂ ಕಠಿಣ ಕ್ರಮ ಕೈಗೊಳ್ಳದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸುಮಾರು 50 ಕಾರ್ಯಕರ್ತರು ಗೃಹ ಸಚಿವರ ನಿವಾಸದ ಗೇಟ್ ತಳ್ಳಿ ಇಂದು ಬೆಳಗ್ಗೆ ಒಳನುಗ್ಗಿ ಮುತ್ತಿಗೆ ಹಾಕಿದ್ದರು. ಬಳಿಕ ಸಚಿವರ ರಾಜೀನಾಮೆಗೆ ಆಗ್ರಹಿಸಿ ನಿವಾಸದ ಮುಂದೆ ಧರಣಿ ನಡೆಸಿದರು. ಈ ವೇಳೆ, ಗೃಹ ಸಚಿವರು ನಿವಾಸದಲ್ಲಿ ಇರಲಿಲ್ಲ. ಆಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ ನಡೆಯಿತು. ಮುತ್ತಿಗೆ ಹಾಕಿದ ಎಬಿವಿಪಿ ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದರು. ಅಲ್ಲದೆ, ಪ್ರತಿಭಟನಾಕಾರನ್ನು ಪೊಲೀಸರು ವಶಕ್ಕೆ ಪಡೆದರು. ಸದ್ಯ ನಿವಾಸದ ಸುತ್ತ ಬಿಗಿ ಪೊಲೀಸ್​ ಭದ್ರತೆ ಒದಗಿಸಲಾಗಿದೆ.

(ಇದನ್ನೂ ಓದಿ: ಗೃಹ ಸಚಿವ ನಿವಾಸ ಮುತ್ತಿಗೆ: ಪ್ರವೀಣ್ ಕೊಲೆ ಪ್ರಕರಣದ ಪ್ರಗತಿ ಬಗ್ಗೆ ಡಿಜಿಪಿ ಸೂದ್​ಗೆ ಸಿಎಂ ತರಾಟೆ)

Last Updated :Jul 30, 2022, 4:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.