ETV Bharat / city

ಪೋಷಕರೇ ಎಚ್ಚರ!.. ಚಾಕೋಲೆಟ್ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಯತ್ನ

author img

By

Published : Nov 4, 2021, 1:20 PM IST

ವಿದ್ಯಾರಣ್ಯಪುರ ಅಪಾರ್ಟ್​ಮೆಂಟ್​ವೊಂದರ ಬಳಿ ಮಕ್ಕಳು ಆಟ ಆಡುತ್ತಿರುವುದನ್ನು ಗಮನಿಸಿದ ಮೂವರು ಅಪರಿಚಿತ ವ್ಯಕ್ತಿಗಳು, ಮಕ್ಕಳನ್ನು ಕಿಡ್ನಾಪ್​ ಮಾಡಲು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಾಕೊಲೆಟ್ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಯತ್ನ
ಚಾಕೊಲೆಟ್ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಯತ್ನ

ಬೆಂಗಳೂರು : ಚಾಕೋಲೆಟ್ ಆಸೆ ತೋರಿಸಿ ಮಕ್ಕಳನ್ನು ಅಪಹರಿಸಲು ಖದೀಮರು ವಿಫಲ ಯತ್ನ ನಡೆಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ವಿದ್ಯಾರಣ್ಯಪುರದ ಅಪಾರ್ಟ್​ಮೆಂಟ್​ವೊಂದರ ಬಳಿ ಇಂದು ಘಟನೆ ನಡೆದಿದ್ದು, ಸ್ಥಳೀಯರ ಸಮಯ ಪ್ರಜ್ಞೆಯಿಂದ ಮಕ್ಕಳ ಅಪಹರಣ ತಪ್ಪಿದೆ. ಮೂವರು ಅಪರಿಚಿತರು ಕಿಡ್ನಾಪ್​ ಮಾಡಲು ಯತ್ನಿಸುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಅಪಹರಿಸಲು ಯತ್ನಿಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಏನಿದು ಘಟನೆ:

ದೀಪಾವಳಿ ಹಬ್ಬದ ಸಂಭ್ರಮದಲ್ಲಿದ್ದ ಮಕ್ಕಳು ಮನೆ ಸಮೀಪ ಆಟ ಆಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಮೂವರು ಅಪರಿಚಿತ ವ್ಯಕ್ತಿಗಳು, ಮಕ್ಕಳಿಗೆ ಚಾಕೋಲೆಟ್ ಕೊಡಿಸುವುದಾಗಿ ಆಸೆ ತೋರಿಸಿದ್ದಾರೆ. ಆಗ ಒಬ್ಬ ಬಾಲಕ ಖದೀಮರ ಹಿಂದೆ ಹೋಗಲು ಯತ್ನಿಸಿದ್ದಾನೆ. ಅನಂತರ ಮತ್ತೊಬ್ಬ ಅಪರಿಚಿತ ವ್ಯಕ್ತಿ ಅಲ್ಲಿದ್ದ ಐದಾರು ಮಕ್ಕಳಿಗೂ ಚಾಕೊಲೆಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದೊಯ್ಯಲು ಯತ್ನಿಸಿದ್ದಾನೆ. ಅಪರಿಚಿತನ ಹಿಂದೆ ಮಕ್ಕಳು ಹೋಗುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅನುಮಾನಗೊಂಡು ಆತನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಭಯದಲ್ಲಿ ಮೂವರು ಅಪರಿಚಿತರು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಕುರಿತು ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪೋಷಕರೇ ಎಚ್ಚರ!:

ಮನೆ ಮುಂದೆ ಆಟವಾಡುವ ಮಕ್ಕಳ ಬಗ್ಗೆ ಪೋಷಕರು ಎಚ್ಚರ ವಹಿಸಬೇಕು. ನಗರದಲ್ಲಿ ಅಪಹರಣ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿದ್ದು, ಅಪಹರಣಕಾರರು ಆ್ಯಕ್ಟೀವ್ ಆಗಿದ್ದಾರೆ. ಅಪರಿಚಿತರ ಬಗ್ಗೆ ಅನುಮಾನ ಬಂದ ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.