ETV Bharat / city

ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಯುಟಿ ಖಾದರ್ ನೇಮಕ

author img

By

Published : Jan 30, 2022, 1:39 PM IST

ಒಂದು ವರ್ಷದ ಎರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ..

UT Khader
ಯುಟಿ ಖಾದರ್

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿ ಮಾಜಿ ಸಚಿವ ಹಾಗೂ ಶಾಸಕ ಯು ಟಿ ಖಾದರ್ ನೇಮಕಗೊಂಡಿದ್ದಾರೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶದ ಮೇರೆಗೆ ನೇಮಕ ಮಾಡಲಾಗಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದಾರೆ.

ಇದುವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕರಾಗಿ ಹಾಗೂ ಪ್ರತಿಪಕ್ಷ ನಾಯಕರಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದರು. ಇನ್ನೂ ಒಂದು ವರ್ಷದ ಎರಡು ತಿಂಗಳಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ ಕಾರ್ಯದೊತ್ತಡ ನಿಭಾಯಿಸುವ ಉದ್ದೇಶದಿಂದ ಶಾಸಕಾಂಗ ಪಕ್ಷದ ಉಪನಾಯಕರ ನೇಮಕ ಮಾಡಲಾಗಿದೆ.

ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಯುಟಿ ಖಾದರ್ ಅವರನ್ನೇ ನಾಯಕನನ್ನಾಗಿ ಘೋಷಿಸಲಾಗಿದ್ದು, ಇದರ ಹಿಂದೆ ಅಲ್ಪಸಂಖ್ಯಾತ ಮುಸಲ್ಮಾನ್ ಸಮುದಾಯದವರಿಗೆ ಪಕ್ಷದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗಿದೆ ಎಂಬುದನ್ನು ಸಹ ತಿಳಿಸುವ ಪ್ರಯತ್ನ ಮಾಡಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ-ಪಟ್ಟಣ್ ನಡುವಿನ ಪಿಸು ಮಾತಿನಿಂದ ಕಾಂಗ್ರೆಸ್ ಒಳ ಜಗಳ ಬೀದಿಗೆ : ಸಚಿವ ಆರ್.ಅಶೋಕ್

ಕಾಂಗ್ರೆಸ್ ಪಕ್ಷ ಬಲವರ್ಧನೆಗೆ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಹಲವು ಗುರಿಗಳನ್ನು ನೀಡಲಾಗುತ್ತಿದೆ.

ಇರುವ ನಾಯಕರ ಕೈ ಬಲಪಡಿಸುವ ಉದ್ದೇಶದಿಂದ ಹೊಸ ನೇಮಕಗಳನ್ನು ಸಹ ಮಾಡಲಾಗುತ್ತಿದೆ. ವಿಧಾನ ಪರಿಷತ್‌ನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಎರಡು ಕ್ಷೇತ್ರಗಳ ಅಭ್ಯರ್ಥಿಯನ್ನು ಸಹ ಪ್ರಕಟಿಸಲಾಗಿದೆ.

ವಿಧಾನಪರಿಷತ್ ಪ್ರತಿಪಕ್ಷ ಹಾಗೂ ಸಚೇತಕ ಸ್ಥಾನಗಳ ನೇಮಕ ಜೊತೆಗೆ ವಿಧಾನಪರಿಷತ್ ನಾಯಕರನ್ನು ಸಹ ಹೊಸದಾಗಿ ನಿಯೋಜಿಸಲಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಾಕಷ್ಟು ತುರುಸಿನ ಚಟುವಟಿಕೆಗಳು ಆರಂಭವಾಗಿದ್ದು, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯ ಗತಾಯ ಗೆಲುವು ಸಾಧಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.