ETV Bharat / city

ಕಂಬಕ್ಕೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಸವಾರ ಸಾವು

author img

By

Published : Mar 18, 2021, 11:52 AM IST

Youth died in road accident
ಮೃತ ಯುವಕ

ವಿಲ್ಸನ್ ಗಾರ್ಡನ್ ಸಂಚಾರಿ ಠಾಣಾ ವ್ಯಾಪ್ತಿಯ ಆರ್​ಆರ್​ಎಂಆರ್ ರಸ್ತೆಯಲ್ಲಿ ಬೈಕ್​ ನಿಯಂತ್ರಣ ತಪ್ಪಿ ಫುಟ್​ಪಾತ್​ನಲ್ಲಿದ್ದ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬೆಂಗಳೂರು: ನಿಯಂತ್ರಣ ತಪ್ಪಿದ ಬೈಕ್​ವೊಂದು ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸಂಪಂಗಿರಾಮನಗರದ ಹರ್ಷ (24) ಮೃತ ಯುವಕ. ಈತ ಬುಧವಾರ ತಡರಾತ್ರಿ ಕೋರಮಂಗಲದಲ್ಲಿ ಪಾರ್ಟಿ ಮುಗಿಸಿ ಸ್ನೇಹಿತನ ಹೊಸ ಬೈಕ್​ನಲ್ಲಿ ಮನೆಗೆ ಹಿಂದಿರುಗುತ್ತಿದ್ದ. ಆದರೆ, ವಿಲ್ಸನ್ ಗಾರ್ಡನ್ ಸಂಚಾರಿ ಠಾಣಾ ವ್ಯಾಪ್ತಿಯ ಆರ್​ಆರ್​ಎಂಆರ್ ರಸ್ತೆಯಲ್ಲಿ ಬೈಕ್​ ನಿಯಂತ್ರಣ ತಪ್ಪಿ ಫುಟ್​ಪಾತ್​ನಲ್ಲಿದ್ದ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಗಾಯವಾಗಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಓದಿ: ಎರಡು ಪ್ರತ್ಯೇಕ ಪ್ರಕರಣ: 8 ದರೋಡೆಕೋರರ ಹೆಡೆಮುರಿ ಕಟ್ಟಿದ ಮೈಸೂರು ಪೊಲೀಸರು

ಈ ಕುರಿತು ವಿಲ್ಸನ್ ಗಾರ್ಡನ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.