ETV Bharat / city

ಮೈಸೂರು ಸಾಮೂಹಿಕ ಅತ್ಯಾಚಾರದ ತಪ್ಪಿತಸ್ಥರ ಮೇಲೆ ನಿರ್ದಾಕ್ಷಣ್ಯ ಕ್ರಮ: ಸಚಿವ ಭೈರತಿ ಬಸವರಾಜ್

author img

By

Published : Aug 28, 2021, 2:17 PM IST

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರು ನಮ್ಮ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ ಎಂದು ಸಚಿವ ಭೈರತಿ ಬಸವರಾಜ್‌ ದಾವಣಗೆರೆಯಲ್ಲಿ ತಿಳಿಸಿದ್ದಾರೆ.

bhairati-basavaraj-on-bsy-and-sbm-minitsers
ಮೈಸೂರು ಸಾಮೂಹಿಕ ಅತ್ಯಾಚಾರದ ತಪ್ಪಿತಸ್ಥರ ಮೇಲೆ ನಿರ್ದಾಕ್ಷ್ಯಣ್ಯ ಕ್ರಮ: ಭೈರತಿ ಬಸವರಾಜ್

ದಾವಣಗೆರೆ: ಮೈಸೂರಿನಲ್ಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರು ನಮ್ಮ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತದೆ. ನಮ್ಮ ಗೃಹಸಚಿವರು ಅದಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳು ವಿಶೇಷ ಗಮನ ಕೊಟ್ಟಿದ್ದಾರೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ತಿಳಿಸಿದ್ದಾರೆ. ಗೃಹಮಂತ್ರಿ ತಾಲಿಬಾನ್ ಪ್ರತೀಕ ಎಂಬ ಕಾಂಗ್ರೆಸ್ ಮುಖಂಡ ಉಗ್ರಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಆ ಹೇಳಿಕೆ‌ ಬಗ್ಗೆ ನನಗೆ ಗೊತ್ತಿಲ್ಲ, ಮಾನ್ಯ ಗೃಹ ಸಚಿವರಿಗೆ ಗೊತ್ತು ಎಂದು ಜಾರಿಕೊಂಡಿದ್ದಾರೆ.

ಬಿಎಸ್‌ವೈ ರಾಜ್ಯ ಪ್ರವಾಸ ಮಾಡುವುದರಲ್ಲಿ ತಪ್ಪೇನಿದೆ?

ಯಡಿಯೂರಪ್ಪನವರು ನಮ್ಮ ನಾಯಕರು, ರಾಜ್ಯ ಪ್ರವಾಸ ಮಾಡೋದರಲ್ಲಿ ತಪ್ಪೇನಿದೆ?, ಪಕ್ಷದ ಸಂಘಟನೆ ದೃಷ್ಟಿಯಿಂದ ಪ್ರವಾಸ ಮಾಡುತ್ತಿದ್ದಾರೆ ಎಂದು ಸಚಿವರು ಹೇಳಿದ್ದಾರೆ. ಯಡಿಯೂರಪ್ಪನವರು ಪಕ್ಷ ಸಂಘಟನೆ ಮಾಡುತ್ತೇನೆ ಅಂದ್ರೆ ಬೇಡ ಅನ್ನೋದಕ್ಕೆ ಆಗುತ್ತಾ?, ಈಶ್ವರಪ್ಪನವರು ನಮ್ಮ ಪಕ್ಷದ ಹಿರಿಯ ಸಚಿವರಿದ್ದಾರೆ. ಯಡಿಯೂರಪ್ಪನವರನ್ನು ಭೇಟಿ ಮಾಡಿ ಮಾತಾಡಿರುವುದರಲ್ಲಿ ವಿಶೇಷ ಅರ್ಥ ಕಲ್ಲಿಸಬೇಕಿಲ್ಲ ಎಂದು ಬೈರತಿ ಬಸವರಾಜ್ ಹೇಳಿದರು.

'ಎಸ್​​ಬಿಎಂ'ನಲ್ಲಿ ಅಸಮಾಧಾನವಿಲ್ಲ

ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಎಸ್​ಬಿಎಂ ಸಚಿವರಲ್ಲಿ (ಎಸ್​.ಟಿ.ಸೋಮಶೇಖರ್​, ಬೈರತಿ ಬಸವರಾಜು, ಮುನಿರತ್ನ) ಯಾವುದೇ ಅಸಮಾಧಾನವಿಲ್ಲ. ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಬೇಸರ ಇತ್ತು. ಇದೀಗ ಎಲ್ಲವೂ ಸರಿಯಾಗಿದೆ ಎಂದರು.

ದಾವಣಗೆರೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ..

ಸೆಪ್ಟೆಂಬರ್​ 2ರಂದು ದಾವಣಗೆರೆಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ಜಿಲ್ಲೆಯ ಹರಿಹರ ತಾಲೂಕಿನ ಕೊಂಡಜ್ಜಿಯಲ್ಲಿ ನಿರ್ಮಾಣವಾದ ಪೊಲೀಸ್ ವಸತಿ ಶಾಲೆಯನ್ನು ಅಮಿಶ್ ಶಾ ಉದ್ಘಾಟನೆ ಮಾಡಲಿದ್ದಾರೆ. ಇದಲ್ಲದೆ ಸೆಪ್ಟಂಬರ್ 24, 25 ಹಾಗೂ 26ರಂದು ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕರಣಿ ಸಭೆ ನಡೆಯಲಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್​, ರಾಜ್ಯ ಉಸ್ತುವಾರಿ ಅರುಣ್​​ ಸಿಂಗ್, ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.