ETV Bharat / city

Covid 3ನೇ ಅಲೆ..ದಾವಣಗೆರೆ ಜಿಲ್ಲೆಯ ಗಡಿಯಲ್ಲಿ ಕಟ್ಟು ನಿಟ್ಟಿನ ಕ್ರ‌ಮ: ಎಸ್​​ಪಿ ರಿಷ್ಯಂತ್

author img

By

Published : Aug 2, 2021, 9:03 PM IST

ಕೋವಿಡ್​​ 3ನೇ ಅಲೆ ಭೀತಿ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಗಡಿ ಭಾಗಗಲ್ಲಿ ಕಟ್ಟು ನಿಟ್ಟಿನ ಕ್ರ‌ಮ ಕೈಕೊಳ್ಳಲಾಗುತ್ತಿದೆ ಎಂದು ಎಸ್​​ಪಿ ಸಿ.ಬಿ ರಿಷ್ಯಂತ್ ಮಾಹಿತಿ ನೀಡಿದರು.

SP C.B Rishyant
ಎಸ್​​ಪಿ ಸಿ.ಬಿ ರಿಷ್ಯಂತ್

ದಾವಣಗೆರೆ: ಕೊರೊನಾ 3ನೇ ಅಲೆ ಭೀತಿ ಜನರಲ್ಲಿ ಮನೆ ಮಾಡಿದೆ. ಆದ್ದರಿಂದ‌ ಜಿಲ್ಲೆಯ ಗಡಿಗಳಲ್ಲಿ ಪೊಲೀಸ್​​ ಇಲಾಖೆ ಕಟ್ಟು ನಿಟ್ಟಿನ ಕ್ರ‌ಮ ವಹಿಸಲು ಮುಂದಾಗಿದೆ. ಮಾಸ್ಕ್ ಧರಿಸದೇ ಹೊರ ಬಂದರೆ ದಂಡ ವಿಧಿಸುವ ಪ್ರಕ್ರಿಯೆ ಮತ್ತೆ ಆರಂಭಿಸಲಾಗುವುದು ಎಂದು ಎಸ್​ಪಿ ಸಿ.ಬಿ ರಿಷ್ಯಂತ್ ಖಡಕ್ ವಾರ್ನಿಂಗ್​​ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಗಡಿಯಲ್ಲಿ ಕಟ್ಟು ನಿಟ್ಟಿನ ಕ್ರ‌ಮ: ಎಸ್​​ಪಿ ರಿಷ್ಯಂತ್

ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾತನಾಡಿದ‌ ಅವರು, ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದಲ್ಲದೇ ರಾಜ್ಯದ ಬಹುತೇಕ ಕಡೆಗಳಲ್ಲಿಯೂ ಕೇಸ್ ಹೆಚ್ಚಾಗುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಕೊರೊನಾ ಕೇಸ್​​ಗಳು ಹೆಚ್ಚಾದರೆ ಕಷ್ಟ‌ವಾಗುತ್ತದೆ. ಅಗತ್ಯ ಇದ್ದರೆ ಮಾತ್ರ ಹೊರಗೆ ಬನ್ನಿ ಎಂದು ಜನರಲ್ಲಿ ಮನವಿ ಮಾಡಿದರು.

ಮದುವೆ, ಜಾತ್ರೆ, ವಿಶೇಷ ಸಮಾರಂಭಗಳ ಬಗ್ಗೆ ನಿಗಾ ಇಡಲಾಗುತ್ತಿದ್ದು, ಸಾರ್ವಜನಿಕರ ಸಹಕಾರ ಸಹ ಮುಖ್ಯವಾಗಿದೆ. ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮಗಳನ್ನ ಕೈಕೊಳ್ಳಲಾಗುತ್ತಿದೆ ಎಂದು ಎಸ್​​ಪಿ ಸಿ.ಬಿ ರಿಷ್ಯಂತ್ ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.