ETV Bharat / city

ಪರಿಷತ್ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ: ಸಿಎಂ ಬೊಮ್ಮಾಯಿ ವಿಶ್ವಾಸ

author img

By

Published : Jun 11, 2022, 9:57 AM IST

CM basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

state legislative council election 2022: ಇಂದು ನಾನು ಬೆಳಗಾವಿ, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ. ಈವರೆಗೆ ನಡೆದ ಚುನಾವಣೆ ಪ್ರಚಾರ ನೋಡಿದರೆ ನಮ್ಮ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ: ವಿಧಾನ ಪರಿಷತ್ ನಾಲ್ಕು ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ.

ಅದರಂತೆ ವಿಧಾನ ಪರಿಷತ್ ಚುನಾವಣೆ ಪ್ರಚಾರ ನಡೆಯುತ್ತಿದೆ. ಇಂದು ನಾನು ಬೆಳಗಾವಿ, ಹುಬ್ಬಳ್ಳಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡಲು ಬಂದಿದ್ದೇನೆ. ಈವರೆಗೆ ನಡೆದ ಚುನಾವಣೆ ಪ್ರಚಾರ ನೋಡಿದರೆ ನಮ್ಮ ಅಭ್ಯರ್ಥಿಗಳ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದೆಹಲಿ ಮತ್ತು ಯುಪಿಯಲ್ಲಿ ನಡೆಯುತ್ತಿರುವ ಗಲಾಟೆ ವಿಚಾರವಾಗಿ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳನ್ನು ಕರೆದು ಸಭೆ ಮಾಡಿದ್ದೇನೆ. ಇದೀಗ ರಾಜ್ಯದಲ್ಲಿ ಪರಿಸ್ಥಿತಿ ಶಾಂತವಿದೆ. ಆದರೂ ಜಾಗೃತರಾಗಿರಬೇಕೆಂದು ಸೂಚನೆ ನೀಡಿದ್ದೇವೆ.

ಪ್ರತಿಯೊಂದು ಪೊಲೀಸ್​​​ ಠಾಣೆ ವ್ಯಾಪ್ತಿಯಲ್ಲಿ ಸಿಪಿಐಯನ್ನು ಉಸ್ತುವಾರಿ ಮಾಡಲಾಗಿದೆ. ಅವರಿಗೆ ಪರಿಸ್ಥಿತಿಯನ್ನು ಸರಿಯಾಗಿ ನಿಭಾಯಿಸಲು ತಿಳಿಸಲಾಗಿದೆ. ಎಲ್ಲ ಸಮುದಾಯದ ನಾಯಕರು ಸೌಹಾರ್ದತೆ ಕಾಪಾಡಬೇಕೆಂದು ತಿಳಿಸಲಾಗಿದೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಆ್ಯಸಿಡ್ ದಾಳಿಗಳು ಹೆಚ್ಚಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ಕಠಿಣ ಕಾನೂನು ರೂಪಿಸಲು ಕಾನೂನು ಸಚಿವರಿಗೆ ತಿಳಿಸಿದ್ದೇವೆ. ಬರುವ ದಿನಗಳಲ್ಲಿ ಇಂತಹ ಘಟನೆಗಳು ನಡೆಯದ ಹಾಗೇ ನೋಡಿಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.

ರಾಜ್ಯದಲ್ಲಿ ಮತ್ತೆ ಆಪರೇಷನ್ ಕಮಲ?: ಐಟಿ-ಬಿಟಿ ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ ಮಾತನಾಡಿ, ಕುಟುಂಬ ಪಕ್ಷಗಳ ನಿಲುವಿನಿಂದ ಬೇಸತ್ತು ಕೆಲವರು ಬಿಜೆಪಿಗೆ ಬರುತ್ತಾರೆ. ಪರಿಸ್ಥಿತಿಗೆ ಅನುಗುಣವಾಗಿ ಯಾರು ಯಾರು ಬರುತ್ತಾರೆ ಅನ್ನೋದು ಗೊತ್ತಾಗುತ್ತದೆ. ಬೇರೆ ಪಕ್ಷಗಳಿಗಿಂತ ಬಿಜೆಪಿಯಲ್ಲಿ ಉತ್ತಮ ಭವಿಷ್ಯವಿದೆ. ಅದೇ ರೀತಿ ಅವಕಾಶಗಳಿವೆ. ಹೀಗಾಗಿ ಇನ್ನೂ ಹಲವು ಜನ ಬಿಜೆಪಿಗೆ ಸೇರಲಿದ್ದಾರೆ ಎಂದರು.

ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ

ಯುಪಿ ಹಿಂಸಾಚಾರ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಒಂದು ಹೇಳಿಕೆಯನ್ನಿಟ್ಟುಕೊಂಡು ರಾಜಕಾರಣ ಮಾಡಲಾಗುತ್ತಿದೆ. ದೇಶದ ಐಕ್ಯತೆ ವಿಚಾರದಲ್ಲಿ ಹಿಂಸಾಚಾರ ನಡೆಸುವುದು ಸರಿಯಲ್ಲ ಎಂದು ಕಿಡಿಕಾರಿದರು. ಇನ್ನು ರಾಜ್ಯಸಭೆಯಲ್ಲಿ ಎ ಟೀಂ ಬಿ ಟೀಂ ಎಂಬ ಪ್ರಶ್ನೆಯೇ ಇಲ್ಲ. ನಮ್ಮ ಸಂಖ್ಯಾ ಬಲ ಜಾಸ್ತಿ ಇದೆ. ಹೀಗಾಗಿ ಸಹಜವಾಗಿ ಗೆಲುವಾಗಿದೆ. ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಎಲ್ಲ ಗೊಂದಲಗಳು ನಿವಾರಣೆಯಾಗಿದೆ. ಈ ಬಗ್ಗೆ ಮತ್ತೆ ಚರ್ಚೆ ನಡೆಸುವ ಅಗತ್ಯವಿಲ್ಲ ಎಂದು ಸಚಿವ ಅಶ್ವತ್ಥ್​ ನಾರಾಯಣ ಹೇಳಿದರು.

ಇದನ್ನೂ ಓದಿ: ನೂಪುರ್ ಶರ್ಮಾ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಪ್ರತಿಭಟನೆ: ರಾಜ್ಯಾದ್ಯಂತ ಕಟ್ಟೆಚ್ಚರಕ್ಕೆ ಸಿಎಂ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.