ಧಾರವಾಡ SDM ಮೆಡಿಕಲ್‌ ಕಾಲೇಜಿನ 66 ​ವಿದ್ಯಾರ್ಥಿಗಳಿಗೆ ಕೋವಿಡ್‌..2 ಹಾಸ್ಟೆಲ್​ ಸೀಲ್​ಡೌನ್​!

author img

By

Published : Nov 25, 2021, 2:41 PM IST

Updated : Nov 25, 2021, 3:13 PM IST

ಡಿಸಿ ನಿತೇಶ ಪಾಟೀಲ,  DC Nitesh Patil

ಎಸ್​ಡಿಎಂ ವೈದ್ಯಕೀಯ ಕಾಲೇಜಿನ 66 ​​ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು ಡಿಸಿ ನಿತೇಶ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಧಾರವಾಡ: ಎಸ್.ಡಿ.ಎಂ ವೈದ್ಯಕೀಯ ಕಾಲೇಜಿನ‌ ವಿದ್ಯಾರ್ಥಿಗಳಿಗೆ ಕೋವಿಡ್‌ ಸೋಂಕು ಕಾಣಿಸಿಕೊಂಡಿದ್ದು ಸ್ಥಳಕ್ಕೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ 66 ಜನರಿಗೆ ಕೋವಿಡ್​ ಪಾಸಿಟಿವ್ ಬಂದಿದೆ. 400 ವಿದ್ಯಾರ್ಥಿಗಳು ಮೆಡಿಕಲ್ ಕಾಲೇಜಿನಲ್ಲಿ ಇದ್ದಾರೆ. 300 ಜನ ವಿದ್ಯಾರ್ಥಿಗಳಿಗೆ ಈಗಾಗಲೇ ಟೆಸ್ಟ್ ಮಾಡಲಾಗಿದೆ. ಅವರ ವರದಿಗಾಗಿ ಕಾಯುತ್ತಿದ್ದೇವೆ, ಎಸ್​ಡಿಎಂನಲ್ಲಿ 3,000 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಎಲ್ಲರಿಗೂ ಪರೀಕ್ಷೆ ಮಾಡಲು ಸೂಚಿಸಲಾಗಿದೆ ಎಂದರು.

ಈಗಾಗಲೇ ಎರಡು ವಸತಿ ನಿಲಯಗಳನ್ನು ಸೀಲ್​ಡೌನ್ ಮಾಡಲಾಗಿದೆ. ವಿದ್ಯಾರ್ಥಿಗಳು ಕ್ವಾರಂಟೈನ್​ಲ್ಲಿದ್ದಾರೆ. ಈ ಕುರಿತು ಜಿಲ್ಲಾಡಳಿತ ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೆಲವು ವಿದ್ಯಾರ್ಥಿಗಳು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ. ಅಂತವರಿಗೂ ಸಹ ಕೋವಿಡ್​ ದೃಢಪಟ್ಟಿದೆ. ಎಲ್ಲರೂ ಆರಾಮಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಧಾರವಾಡದಲ್ಲಿ ಕೊರೊನಾ ಹಾವಳಿ.. ಎಸ್.ಡಿ.ಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ!

ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಯಶವಂತ ಮದೀನಕರ ಹಾಗೂ ಮೆಡಿಕಲ್ ಕಾಲೇಜಿನ ಅಧಿಕಾರಿಗಳು ಮಾಹಿತಿ ನೀಡಿದರು.

Last Updated :Nov 25, 2021, 3:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.