ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆ ಯತ್ನ: ಸಮಗ್ರ ವರದಿ ಕೇಳಿದ ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ

author img

By

Published : Sep 21, 2021, 4:29 PM IST

ಹುಬ್ಬಳ್ಳಿ ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ

ವೈದ್ಯಕೀಯ ಮೇಲಧಿಕಾರಿ ಗೀತಾ ನಾಯ್ಕರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪತ್ರ ಬರೆದಿಟ್ಟು ಹೆಲ್ತ್ ಇನ್ಸ್​ಪೆಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೆಹಬೂಬ ಸೂಡಿ ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಗೊಂಡಿತ್ತು.

ಹುಬ್ಬಳ್ಳಿ: ತಾಲೂಕಿನ ನೂಲ್ವಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಲ್ತ್ ಇನ್ಸ್​ಪೆಕ್ಟರ್​ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೆಹಬೂಬ ಸೂಡಿ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ, ಆರೋಗ್ಯಾಧಿಕಾರಿ ಗೀತಾ ನಾಯ್ಕರ್ ವಿರುದ್ಧ ಕೈಗೊಂಡಿರುವ ಕ್ರಮದ ಬಗ್ಗೆ ಸಮಗ್ರ ವಿವರ ಸಲ್ಲಿಸುವಂತೆ ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಧಾರವಾಡ ಜಿಲ್ಲಾಧಿಕಾರಿಗೆ ಪತ್ರದ ಮೂಲಕ ಸೂಚಿಸಿದ್ದಾರೆ.

ವೈದ್ಯಕೀಯ ಮೇಲಧಿಕಾರಿ ಗೀತಾ ನಾಯ್ಕರ್ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟಗೊಂಡಿತ್ತು.

ಜಿಲ್ಲಾಧಿಕಾರಿಗೆ ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಪತ್ರ
ಜಿಲ್ಲಾಧಿಕಾರಿಗೆ ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಪತ್ರ

ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆಯೇ ಘಟನೆಗೆ ಸಂಬಂಧಿಸಿದಂತೆ ಸಮಗ್ರ ವರದಿ ಹಾಗೂ ಮೇಲಧಿಕಾರಿ ಗೀತಾ ನಾಯ್ಕರ್ ವಿರುದ್ಧ ಈವರೆಗೂ ಕೈಗೊಂಡಿರುವ ಕ್ರಮ ಹಾಗೂ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದ್ದರೆ, ಅದರ ಪ್ರತಿಯನ್ನೂ ಆರೋಗ್ಯ ಸಚಿವರ ಕಾರ್ಯಾಲಯಕ್ಕೆ ಕಳುಹಿಸಿಕೊಡಬೇಕು ಎಂದು ಆರೋಗ್ಯ ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ಸೂರಜ್ ಧಾರವಾಡ ಜಿಲ್ಲಾಧಿಕಾರಿಗೆ ಪತ್ರ ಬರೆದು ಸೂಚಿಸಿದ್ದಾರೆ.

ಇದನ್ನೂ ಓದಿ: ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಆರೋಗ್ಯ ಸಿಬ್ಬಂದಿ.. ವೈದ್ಯಾಧಿಕಾರಿ ವಿರುದ್ಧ ಕಿರುಕುಳ ಆರೋಪ

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.