ಧಾರವಾಡದಲ್ಲಿ ಕೊರೊನಾ ಹಾವಳಿ.. ಎಸ್.ಡಿ.ಎಂ ಮೆಡಿಕಲ್ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ!

author img

By

Published : Nov 25, 2021, 12:25 PM IST

Updated : Nov 25, 2021, 1:23 PM IST

covid cases increasing in Dharwad

ಧಾರವಾಡದ ಎಸ್.ಡಿ.ಎಂ ಮೆಡಿಕಲ್ ಕಾಲೇಜಿನಲ್ಲಿ ಸುಮಾರು 66 ವಿದ್ಯಾರ್ಥಿಗಳಿಗೆ ಕೋವಿಡ್​ ಸೋಂಕು ದೃಢಪಟ್ಟಿದೆ.

ಧಾರವಾಡ: ರಾಜ್ಯಾದ್ಯಂತ ಕೊರೊನಾ ಹಾವಳಿ ಕಡಿಮೆ ಆಗುತ್ತಿದೆ. ಧಾರವಾಡ ಜಿಲ್ಲೆಯಲ್ಲೂ ಕೋವಿಡ್​ ಸೋಂಕು ಪ್ರಕರಣಗಳು ಕಡಿಮೆಯಾದವು ಎಂದು ಜನರು ನಿಟ್ಟುಸಿರು ಬಿಟ್ಟಿದ್ದರು. ಆದ್ರೆ ಇದೀಗ ಆಘಾತಕಾರಿ​ ಸುದ್ದಿಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಎಸ್.ಡಿ.ಎಂ ಮೆಡಿಕಲ್ ಕಾಲೇಜಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

SDM Medical college covid cases: ಎಸ್​ಡಿಎಂ ವೈದ್ಯಕೀಯ ಕಾಲೇಜಿನ ಮೆಡಿಕಲ್​​ ವಿದ್ಯಾರ್ಥಿಗಳಿಗೆ ಸಾಮೂಹಿಕವಾಗಿ ಸೋಂಕು ಕಾಣಿಸಿಕೊಂಡಿದೆ. ಕಾಲೇಜಿನ ಸುಮಾರು 66 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಧಾರವಾಡ ಎಸ್​ಡಿಎಂ ಮೆಡಿಕಲ್ ಕಾಲೇಜಿನಲ್ಲಿ ಸೋಂಕು ಹೆಚ್ಚಳ

ಕೆಲವು ದಿನಗಳ ಹಿಂದಷ್ಟೇ ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಸುಮಾರು 40 ವಿದ್ಯಾರ್ಥಿಗಳು ಭಾಗವಹಿಸಿದ್ದರು ಎನ್ನಲಾಗ್ತಿದೆ. ನಂತರ ಇವರೆಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ವಿದ್ಯಾರ್ಥಿಗಳಿಗೆ ಪಾಸಿಟಿವ್ ವರದಿ ಬಂದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಸೋಂಕು ತಗುಲಿರುವ ಎಲ್ಲ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದುಕೊಂಡ ಕಾರಣ ಯಾವುದೇ ರೋಗ ಲಕ್ಷಣಗಳಿಲ್ಲ ಎನ್ನಲಾಗುತ್ತಿದೆ. ಅವರೆಲ್ಲರೂ ವಸತಿ ನಿಲಯದ ವಿದ್ಯಾರ್ಥಿಗಳಾಗಿದ್ದು, ಸ್ವಯಂ ಕ್ವಾರಂಟೈನ್​​ ಆಗಿದ್ದಾರೆ.

ಇದನ್ನೂ ಓದಿ: ಎಂಆರ್​ಪಿಎಲ್​ನ 57 ಕಾರ್ಮಿಕರು ಕೆಲಸದಿಂದ ವಜಾ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ

ಈಗಾಗಲೇ ವಸತಿ‌ ನಿಲಯಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.‌ ಯಶವಂತ ಮದೀನಕರ ಭೇಟಿ‌ ನೀಡಿ ಪರಿಶೀಲನೆ ನಡೆಸಿದ್ದಾರೆ. ‌ವಸತಿ ನಿಲಯಕ್ಕೆ ಸ್ಯಾನಿಟೈಸಿಂಗ್ ಮಾಡಲಿದ್ದಾರೆ. ಈಗಾಗಲೇ ಕಾಲೇಜಿನ ಉಳಿದ ಎಲ್ಲ ವಿದ್ಯಾರ್ಥಿಗಳನ್ನು ಪರೀಕ್ಷೆಗೊಳಪಡಿಸಲಾಗುತ್ತಿದೆ. ಇಂದು ಸ್ಥಳಕ್ಕೆ ಜಿಲ್ಲಾಧಿಕಾರಿ ‌ನಿತೇಶ್ ಪಾಟೀಲ್​​ ಭೇಟಿ ನೀಡುವ ಸಾಧ್ಯತೆಯಿದೆ.

Last Updated :Nov 25, 2021, 1:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.