ETV Bharat / city

ಎಸ್​ಡಿಪಿಐ -ಪಿಎಫ್ಐ ಸಂಘಟನೆ ನಿಷೇಧಿಸುವ ಕಾರ್ಯ ನಡೆಯುತ್ತಿದೆ : ಮಹೇಶ​ ತೆಂಗಿನಕಾಯಿ

author img

By

Published : Feb 25, 2022, 5:25 PM IST

ಮಹೇಶ​ ತೆಂಗಿನಕಾಯಿ
ಮಹೇಶ​ ತೆಂಗಿನಕಾಯಿ

ಅಧಿವೇಶನದಲ್ಲಿ ಕಾಂಗ್ರೆಸ್ ಧರಣಿ ಖಂಡಿಸಿ ರಾಜ್ಯಾದ್ಯಂತ ಫೆ.27 ಮತ್ತು 28 ರಂದು ಜಿಲ್ಲಾ ಹಾಗೂ ಹೋಬಳಿ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್​ನ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಿದ್ದೇವೆ..

ಹುಬ್ಬಳ್ಳಿ : ಎಸ್​ಡಿಪಿಐ ಮತ್ತು ಪಿಎಫ್ಐ ಸಂಘಟನೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದೇವೆ‌. ಸಿಎಂ ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹೇಳಿದರು.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್​ಡಿಪಿಐ ನಿಷೇಧಿಸಬೇಕು ಎಂಬ ಸಿದ್ದರಾಮಯ್ಯ ಹೇಳಿಕೆಯಿಂದ ನಾವು ಪಾಠ ಕಲಿಯಬೇಕಿಲ್ಲ. ಹಿಜಾಬ್ ವಿಷಯದಲ್ಲಿ ಕಾಂಗ್ರೆಸ್ ಪಕ್ಷದ ಸ್ಪಷ್ಟ ನಿಲುವು ಏನು ಎಂಬುದನ್ನು ತಿಳಿಸಲಿ‌.

ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮಧ್ಯೆ ಹಿಜಾಬ್ ವಿಷಯದಲ್ಲಿ ಒಡಕಿದೆ. ಅದಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಇವರನ್ನು ದೆಹಲಿಗೆ ಕರೆಸಿಕೊಂಡು ಪಾಠ ಹೇಳುವ ಸ್ಥಿತಿ ನಿರ್ಮಾಣವಾಗಿದೆ ಎಂದು ಕುಟುಕಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಮಾತನಾಡಿರುವುದು..

ಅಧಿವೇಶನದಲ್ಲಿ ಕಾಂಗ್ರೆಸ್ ಧರಣಿ ಖಂಡಿಸಿ ರಾಜ್ಯಾದ್ಯಂತ ಫೆ.27 ಮತ್ತು 28 ರಂದು ಜಿಲ್ಲಾ ಹಾಗೂ ಹೋಬಳಿ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್​ನ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಮಾಡಲಿದ್ದೇವೆ ಎಂದರು.

ಕೇಂದ್ರ ಹೆದ್ದಾರಿ ಪ್ರಾಧಿಕಾರದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಫೆ.28ಕ್ಕೆ ನಗರಕ್ಕೆ ಆಗಮಿಸಲಿದ್ದಾರೆ.

ನಗರದ ಗಬ್ಬೂರ ಬೈಪಾಸ್ ಬಳಿ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಅಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.