ETV Bharat / city

ಕೋಲ್​ ಕಂಪನಿಗಳಲ್ಲಿ 72.5 ಮಿಲಿಯನ್ ಟನ್​​ ಕಲ್ಲಿದ್ದಲು ಸ್ಟಾಕ್​ ಇದೆ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

author img

By

Published : Apr 30, 2022, 3:44 PM IST

Updated : Apr 30, 2022, 4:48 PM IST

ದೇಶದಲ್ಲಿ ಕಲ್ಲಿದ್ದಲು ಪೂರೈಕೆ ಮತ್ತು ಉತ್ಪಾದನೆ ಕುಸಿದಿದ್ದು, 10 ದಿನಗಳಲ್ಲಿ ದೇಶ ಕತ್ತಲಲ್ಲಿ ಮುಳುಗಲಿದೆ ಎಂಬ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ, ಕೋಲ್​ ಕಂಪನಿಗಳಲ್ಲಿ 72 ಮಿಲಿಯನ್​ ಟನ್​ ಕಲ್ಲಿದ್ದಲು ಇದೆ ಎಂದಿದ್ದಾರೆ.

union minister prahlad joshi
ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ: ಥರ್ಮಲ್ ಪವರ್ ಪ್ಲಾಂಟ್​ನಲ್ಲಿ 21.55 ಮಿಲಿಯನ್ ಟನ್ ಕಲ್ಲಿದ್ದಲು ನಮ್ಮಲ್ಲಿ ಸ್ಟಾಕ್ ಇದೆ. ಕೋಲ್ ಕಂಪನಿಗಳಲ್ಲಿ 72.5 ಮಿಲಿಯನ್ ಟನ್​ ಸ್ಟಾಕ್ ಇದೆ. ಅತಿ ಹೆಚ್ಚು ವಿದ್ಯುತ್ ಬೇಡಿಕೆ ಈ ತಿಂಗಳಲ್ಲಿ ಸೃಷ್ಟಿಯಾಗಿದೆ. ದೇಶದಲ್ಲಿ ಆರ್ಥಿಕತೆ ಉತ್ತಮವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಹೇಳಿದರು.

ನಗರದಲ್ಲಿಂದು ಸ್ಮಾರ್ಟ್ ಸಿಟಿ ಯೋಜನೆ ಉದ್ಘಾಟನೆ ‌ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ರಾಷ್ಟ್ರದಲ್ಲಿ ಕಲ್ಲಿದ್ದಲು ಅಭಾವ ವಿಚಾರವಾಗಿ ಮಾತನಾಡಿದ ಅವರು, ಈ ಬಾರಿ ಭಯಂಕರ ಬಿಸಿಲು ಬಂದಿದ್ದು. ವಿದ್ಯುತ್​ ಬೇಡಿಕೆಗೆ ಕಾರಣವಾಗಿದೆ. ರಾಷ್ಟ್ರದ ಹಲವೆಡೆಗಳಲ್ಲಿ ಕಲ್ಲಿದ್ದಲು ಸ್ಟಾಕ್​ ಇದೆ. 10 ದಿನಕ್ಕೆ ಕತ್ತಲೆ ಅವರಿಸುತ್ತೆ ಅನ್ನೋದನ್ನ ಕೆಲವರು ಬಿಂಬಿಸುತ್ತಿದ್ದಾರೆ. ಅದು ಸರಿಯಲ್ಲ. ನಾವು ಪ್ರತಿದಿನ 1.7 ಮಿಲಿಯನ್ ಟನ್ ಸಪ್ಲೈ ಮಾಡುತ್ತಿದ್ದೇವೆ. ಬೇಡಿಕೆ ಹೆಚ್ಚಾಗಿದ್ದರಿಂದ ಸಾಗಣೆ ಮಾಡಲು ರೈಲ್ವೆ ಇಲಾಖೆ ಹಲವು ಕ್ರಮ ಕೈಗೊಂಡಿದೆ ಎಂದರು.

ಕೋಲ್​ ಕಂಪನಿಗಳಲ್ಲಿ 72.5 ಮಿಲಿಯನ್ ಟನ್​​ ಕಲ್ಲಿದ್ದಲು ಸ್ಟಾಕ್​ ಇದೆ: ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಪಿಎಸ್ಐ ನೇಮಕಾತಿ ರದ್ದು ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯ ಸರ್ಕಾರ ಈ ಬಗ್ಗೆ ನಿರ್ಧಾರ ಕೈಗೊಂಡಿದೆ. ಟೆಕ್ನಾಲಜಿ ಬಳಸಿ ಅಪರಾಧ ಮಾಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರ ಕ್ರಮ ಕೈಗೊಂಡಿದೆ. ಈಗಾಗಲೇ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದೆ ಈ ರೀತಿ ಆಗದಂತೆ ಸಿಎಂ ಗಮನ ಹರಿಸಿ ಕ್ರಮಕ್ಕೆ ತೆಗೆದುಕಕೊಳ್ಳುತ್ತಿದ್ದಾರೆ. ಕೆಲವೊಮ್ಮೆ ಈ ರೀತಿಯ ಸಂಗತಿಗಳು ಅನಿವಾರ್ಯವಾಗಿ ಆಗುತ್ತವೆ. ಹೀಗಾಗಿ ಎಲ್ಲರೂ ಸಹಕರಿಸಬೇಕು ಎಂದು ಅವರು ಹೇಳಿದರು.

ಓದಿ: Power crisis: ಕಲ್ಲಿದ್ದಲು ಸಾಗಿಸುವ ರೈಲುಗಳಿಗಾಗಿ 42 ಪ್ಯಾಸೆಂಜರ್​ ಟ್ರೈನ್​ಗಳು ರದ್ದು

Last Updated : Apr 30, 2022, 4:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.