ETV Bharat / city

ರಾಜ್ಯದೆಲ್ಲೆಡೆ ಸಂವಿಧಾನ ಶಿಲ್ಪಿಯ ಅರ್ಥಪೂರ್ಣ ಜಯಂತ್ಯುತ್ಸವ

author img

By

Published : Apr 14, 2019, 7:23 PM IST

ಸಂವಿಧಾನ ಶಿಲ್ಪಿ, ಭಾರತ ರತ್ನ ​​​​​​​ಡಾ. ಬಿ. ಆರ್ ಅಂಬೇಡ್ಕರ್ ಅವರ 128ನೇ ಜನ್ಮದಿನಾಚರಣೆಯನ್ನು ರಾಜ್ಯದೆಲ್ಲೆಡೆ ಆಚರಿಸಲಾಯ್ತು. ವಿವಿಧ ಇಲಾಖೆ, ಜಿಲ್ಲಾಡಳಿತದ ವತಿಯಿಂದ ಆಚರಿಸಲಾದ ಜಯಂತ್ಯುತ್ಸವದಲ್ಲಿ ಸಂವಿಧಾನ ಶಿಲ್ಪಿಯ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯ್ತು.

ಸಂವಿಧಾನ ಶಿಲ್ಪಿಯ ಜಯಂತ್ಯುತ್ಸವ

ಕಲಬುರಗಿ /ರಾಯಚೂರು /ಶಿವಮೊಗ್ಗ : ಡಾ.ಬಿ.ಆರ್ ಅಂಬೇಡ್ಕರ್ ಅವರ 128ನೇ ಜಯಂತ್ಯುತ್ಸವವನ್ನು ಎಲ್ಲೆಡೆ ಅರ್ಥಪೂರ್ಣವಾಗಿ ಆಚರಿಸಲಾಯ್ತು. ರಾಜ್ಯದ ಕಲಬುರಗಿ, ರಾಯಚೂರು ಹಾಗೂ ಶಿವಮೊಗ್ಗದಲ್ಲಿ ಅಂಬೇಡ್ಕರ್​ ಜನ್ಮದಿನವನ್ನು ಆಚರಿಸಲಾಯ್ತು.

ಕಲಬುರಗಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯತ್‌ ಸೇರಿ ಅನೇಕ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಕಲಬುರ್ಗಿಯ ಜಗತ್ತ್ ವೃತ್ತದಲ್ಲಿ ಅಂಬೇಡ್ಕರ್ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು. ಸರಕಾರದ ವತಿಯಿಂದ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಉದ್ಘಾಟಿಸಿದರು. ಈಶಾನ್ಯ ವಲಯ ಐಜಿಪಿ ಮನೀಷ್ ಖರ್ಬೀಕರ್, ಜಿ. ಪಂ ಸಿಇಒ ಪಿ.ರಾಜಾ ಮತ್ತಿತರರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಚುನಾವಣಾ ನೀತಿಸಂಹಿತಿ ಹಿನ್ನೆಲೆಯಲ್ಲಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಸಂವಿಧಾನ ಶಿಲ್ಪಿಯ ಜಯಂತ್ಯುತ್ಸವ

ರಾಯಚೂರಿನಲ್ಲಿ ಇಂದು ಅಂಬೇಡ್ಕರ್​ ಅವರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಡಾ. ಬಿ. ಆರ್. ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧಿಕಾರಿ ಶರತ್.ಬಿ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳ ನೃತ್ಯ ಪ್ರದರ್ಶನ ಮೆರಗು ನೀಡಿತು. ಶಾಸಕ ಡಾ.ಶಿವರಾಜ ಪಾಟೀಲ್, ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಆರೋಗ್ಯ ಅಧಿಕಾರಿ ಎಂ. ಕೆ. ನಾಸೀರ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದರು.

ಶಿವಮೊಗ್ಗ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನ ಆಚರಿಸಲಾಯಿತು. ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ. ಎ ದಯಾನಂದ, ಅಂಬೇಡ್ಕರ್ ಅವರ ಚಿಂತನೆಗಳು ಪ್ರತಿಯೊಬ್ಬ ಪ್ರಜೆಗೂ ಮಾರ್ಗದರ್ಶನ ಎಂದರು. ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ, ಚಾರುಲತಾ ಸೋಮಲ್ ಜಿಲ್ಲಾ ಪಂಚಾಯತ್​ ಸಿಇಒ ಶಿವರಾಮೇಗೌಡ ಉಪಸ್ಥಿತರಿದ್ದರು.

Intro:ಶಿವಮೊಗ್ಗ,

ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ , ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಯನ್ನ ಆಚರಿಸಲಾಯಿತು.


Body:ಕಾರ್ಯಕ್ರಮ ವನ್ನ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಕೆ.ಎ ದಯಾನಂದ ಅಂಬೇಡ್ಕರ್ ಅವರ ಚಿಂತನೆ ಗಳು ಪ್ರತಿಯೊಬ್ಬ ಪ್ರಜೆಗೂ ಮಾರ್ಗದರ್ಶನ ನೀಡುತ್ತದೆ. ಎಂದರು. ಅಂಬೇಡ್ಕರ್ ಅವರ ಆಶಯಗಳು ಇಡೆರಬೇಕಾದರೆ ಪ್ರತಿಯೊಬ್ಬ ರು ಮತಧಾನ ಮಾಡುವ ಮಃಲಕ ಪ್ರಜಾಪ್ರಭುತ್ವ ವನ್ನ ಘಟ್ಟಿಗೋಳಿಸಬೇಕು ಎಂದರು. ಕಾರ್ಯಕ್ರಮ ದಲ್ಲಿ ಮಹಾನಗರ ಪಾಲಿಕೆ ಆಯುಕ್ತೆ ಚಾರುಲತಾ ಸೋಮಲ್ ಹಾಗೂ ಜಿಲ್ಲಾಧಿಕಾರಿ ಕೆ.ಎ ದಯಾನಂದ, ಜಿಲ್ಲಾ ಪಂಚಾಯತ ಸಿ.ಇ.ಓ ಶಿವರಾಮೆಗೌಡ, ಅಪಾರ ಜಿಲ್ಲಾಧಿಕಾರಿ ಪೂರ್ಣಿಮಾ ಉಪಸ್ಥಿತರಿದ್ದರು.
ಭೀಮಾನಾಯ್ಕ ಎಸ್ ಶಿವಮೊಗ್ಗ


Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.