ETV Bharat / city

ಕಲಬುರಗಿಯಲ್ಲಿ ಭೂಮಿ ಕಂಪಿಸಿದ ಅನುಭವ.. ರಾತ್ರಿಯಿಡೀ ಜಾಗರಣೆ ಮಾಡಿದ ಜನ

author img

By

Published : Oct 8, 2021, 3:41 PM IST

ಕಲಬುರಗಿಯಲ್ಲಿ ಭೂಮಿ ಕಂಪಿಸಿದ ಅನುಭವ
ಕಲಬುರಗಿಯಲ್ಲಿ ಭೂಮಿ ಕಂಪಿಸಿದ ಅನುಭವ

ಚಿಂಚೋಳಿ ತಾಲೂಕಿನ ಗಡಿಕೇಶ್ವರ ಮತ್ತು ತೇಗಲತಿಪ್ಪಿ ಗ್ರಾಮದಲ್ಲಿ ತಡರಾತ್ರಿ 1 ಗಂಟೆ ವೇಳೆಯಲ್ಲಿ ಲಘು ಭೂಕಂಪನದ ಅನುಭವಾಗಿದೆ.

ಕಲಬುರಗಿ: ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಕೆಲ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಆತಂಕದಿಂದ ಮನೆಯಿಂದ ಹೊರಬಂದ ಜನರು ಇಡಿ ರಾತ್ರಿ ಜಾಗರಣೆ ಮಾಡಿದ್ದಾರೆ.

ಚಿಂಚೋಳಿ ತಾಲೂಕಿನ ಗಡಿಕೇಶ್ವರ ಮತ್ತು ತೇಗಲತಿಪ್ಪಿ ಗ್ರಾಮದಲ್ಲಿ ತಡರಾತ್ರಿ 1 ಗಂಟೆ ವೇಳೆಯಲ್ಲಿ ಲಘು ಭೂಕಂಪನದ ಅನುಭವಾಗಿದೆ. ಗಡಿಕೇಶ್ವರ ಗ್ರಾಮದಲ್ಲಿ ಅನೇಕ ತಿಂಗಳಿಂದ ಭೂಮಿಯಿಂದ ಬಾರಿ ಸದ್ದು ಬರ್ತಿದೆ ಎಂದು ಗ್ರಾಮಸ್ಥರು ಹೇಳುತ್ತಿದ್ದು, ಈ ಮೊದಲೇ ಸದ್ದಿನಿಂದ ಕಂಗಾಲಾಗಿರೋ ಜನರು ಇದೀಗ ಲಘು ಭೂಕಂಪನದಿಂದ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ಭೂಕಂಪನ; ಜನರಲ್ಲಿ ಆತಂಕ

ಇತ್ತ ವಿಜಯಪುರ ಜಿಲ್ಲೆಯಲ್ಲಿಯೂ ತಡರಾತ್ರಿ 12.20ರ ವೇಳೆಗೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಸರಿಯಾದ ತೀವ್ರತೆ ದಾಖಲಾಗಿಲ್ಲ. ಕಳೆದೊಂದು ತಿಂಗಳಲ್ಲಿ ವಿಜಯಪುರದಲ್ಲಿ ಆರು ಬಾರಿ ಭೂಕಂಪನ ಆದಂತಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.