ETV Bharat / city

ಕಲ್ಲಡ್ಕ ಡಾ.ಪ್ರಭಾಕರ ಭಟ್ ವಿರುದ್ಧ ಅವಹೇಳನಕಾರಿ ವಿಡಿಯೋ : ದೂರು ದಾಖಲು

author img

By

Published : Apr 28, 2021, 8:04 PM IST

ಆರ್​ಎಸ್​ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಲಾಗಿದೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

PRABHAKAR
PRABHAKAR

ಬಂಟ್ವಾಳ: ಸಾಮಾಜಿಕ ಜಾಲತಾಣದಲ್ಲಿ ಆರ್​ಎಸ್​ಎಸ್​ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್​ ಕುರಿತು ಅವಹೇಳಕಾರಿ ವಿಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಕುರಿತು ಬಜರಂಗದಳದ ಜಿಲ್ಲಾ ಸಹಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ.

ಯಾವುದೋ ಆ್ಯಪ್​ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ ಎನ್ನಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.