ETV Bharat / city

ವಿಟ್ಲ ಯುವತಿ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ಆಧರಿಸಿ ನಾಲ್ವರ ವಿರುದ್ಧ ಪ್ರಕರಣ

author img

By

Published : Nov 12, 2021, 11:28 AM IST

ಅಕ್ಟೋಬರ್ 10ರಂದು ನಡೆದ ಯುವತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

vitla lady murder case
ವಿಟ್ಲ ಯುವತಿ ಆತ್ಮಹತ್ಯೆ ಪ್ರಕರಣ

ಬಂಟ್ವಾಳ: ಕಳೆದ ಅಕ್ಟೋಬರ್ 10ರಂದು ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ದೊರಕಿದ ಡೆತ್ ನೋಟ್ ಆಧಾರದಲ್ಲಿ ವಿಟ್ಲ ಪೊಲೀಸರು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಗೆ ಯುವತಿಯೊಬ್ಬಳು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕೆರೆಯ ಬಳಿ ದೊರೆತ ಡೆತ್ ನೋಟ್ ಆಧರಿಸಿ ಪೊಲೀಸರು ದಿನೇಶ್, ಪ್ರಶಾಂತ್, ಯಶವಂತ್, ರಕ್ಷಿತ್ ಎಂಬುವವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ: ದ.ಕ.ಜಿಲ್ಲೆಯಲ್ಲೇ ಮೊದಲ ಪ್ರಯೋಗ: ತ್ಯಾಜ್ಯ ಸಂಗ್ರಹ ವಾಹನಕ್ಕೆ ಮಹಿಳಾ ಸಾರಥಿಗಳು

ಅ. 10ರಂದು ನಿಶ್ಮಿತಾ ಎಂಬ ಯುವತಿ ನಾಪತ್ತೆಯಾಗಿದ್ದಳು. ಮರುದಿನ ಬೆಳಗ್ಗೆ ಅವಳ ಶವ ಕೆರೆಯಲ್ಲಿ ಪತ್ತೆಯಾಗಿತ್ತು. ಮೆಡಿಕಲ್ ಒಂದರಲ್ಲಿ ಕೆಲಸಕ್ಕಿದ್ದ ಈಕೆಯ ಬ್ಯಾಗ್, ಚಪ್ಪಲಿ ಕೆರೆ ಬಳಿ ಪತ್ತೆಯಾಗಿತ್ತು. ಅಲ್ಲಿ ಡೆತ್ ನೋಟ್ ಕೂಡ ಇತ್ತು. ಅದರಲ್ಲಿ ಈ ಯುವಕರ ಹೆಸರುಗಳು ಇದ್ದವು ಎನ್ನಲಾಗಿದ್ದು, ಹೆಚ್ಚಿನ ವಿವರಗಳು ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.