ETV Bharat / city

ಮಂಗಳೂರಿನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

author img

By

Published : May 3, 2022, 11:03 AM IST

ಈದ್ ಉಲ್ ಫಿತರ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್ ನೆರವೇರಿಸಿದರು.

Eid ul Fitr celebration in Mangalore
ಮಂಗಳೂರಿನಲ್ಲಿ ಸಂಭ್ರಮದ ಈದ್ ಉಲ್ ಫಿತರ್

ಮಂಗಳೂರು: ಒಂದು ತಿಂಗಳ ಕಾಲ ರಂಜಾನ್ ಮಾಸದ ಉಪವಾಸ ಆಚರಿಸಿದ ಮುಸ್ಲಿಮರು ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದ್ ಉಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ರಂಜಾನ್ ತಿಂಗಳ ಚಂದ್ರ ದರ್ಶನದೊಂದಿಗೆ ಆರಂಭವಾಗುವ ಉಪವಾಸವು ಶಾವಾಲ್‌ ತಿಂಗಳ ಚಂದ್ರ ದರ್ಶನದೊಂದಿಗೆ ಕೊನೆಗೊಂಡಿದೆ. ಶಾವಾಲ್‌ ತಿಂಗಳ ಮೊದಲ ದಿನವಾದ ಇಂದು 'ಈದ್ ಉಲ್ ಫಿತರ್​' ಹಬ್ಬವೆಂದು ಆಚರಿಸಿದರು.


ಮಂಗಳೂರಿನ ಬಾವುಟ ಗುಡ್ಡದಲ್ಲಿರುವ ಈದ್ಗಾ ಮಸೀದಿಯಲ್ಲಿ ಮುಸ್ಲಿಮರು ಸಾಮೂಹಿಕ ನಮಾಜ್ ಮಾಡಿದರು. ಮಸೀದಿಯಲ್ಲಿ ಈದ್ ಪ್ರಾರ್ಥನೆ ಮಾಡಿದ ಬಳಿಕ ಎಲ್ಲರೂ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

ಇದನ್ನೂ ಓದಿ: ಈದ್-ಉಲ್-ಫಿತರ್ 2022: ಕಾಣದ ಚಂದ್ರ, ಮೇ 3 ರಂದು ರಂಜಾನ್​ ಆಚರಣೆಗೆ ನಿರ್ಧಾರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.