ETV Bharat / city

ಕರಾವಳಿಯ ಮಳೆ ಹಾನಿ ಪ್ರದೇಶಗಳಿಂದು ಸಿಎಂ ಬೊಮ್ಮಾಯಿ ಭೇಟಿ

author img

By

Published : Jul 12, 2022, 7:07 AM IST

ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗು ಹಾಸನ ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ವರ್ಷಧಾರೆಯಿಂದ ಅತಿ ಹೆಚ್ಚು ಹಾನಿಯುಂಟಾಗಿರುವ ಜಿಲ್ಲೆಗಳ ಪ್ರದೇಶಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ. ಇದರ ಭಾಗವಾಗಿ ಅವರಿಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸುವರು.

CM Basavaraj Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುಳ್ಯ(ದಕ್ಷಿಣ ಕನ್ನಡ): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಕೊಡಗು ಜಿಲ್ಲೆಯ ಮಡಿಕೇರಿಯಿಂದ ನಿರ್ಗಮಿಸಲಿರುವ ಅವರು, ರಸ್ತೆ ಮಾರ್ಗವಾಗಿ ಸುಳ್ಯಕ್ಕೆ ಆಗಮಿಸುವರು. ಈ ಸಂದರ್ಭದಲ್ಲಿ ಮಳೆಬಾಧಿತ, ತಾಲೂಕಿನ ಗಡಿಪ್ರದೇಶ ಸಂಪಾಜೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಇಲ್ಲಿ ಮುಖ್ಯಮಂತ್ರಿಗಳಿಗೆ ಜಿಲ್ಲಾಧಿಕಾರಿಗಳು ಭೂಕಂಪನದ ಬಗ್ಗೆ ವರದಿ ನೀಡಲಿದ್ದಾರೆ. ನಂತರ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಸಂಗಮ ಸ್ಥಳದ ನದಿ ಮಟ್ಟದ ವೀಕ್ಷಣೆ ಮತ್ತು ಬೆಳೆಹಾನಿ ಪರಿಶೀಲನೆ ನಡೆಸುವರು. ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಭೂಕುಸಿತ ಉಂಟಾದ ಪ್ರದೇಶಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ.

ಉಳ್ಳಾಲ ತಾಲೂಕಿನ ಕಡಲ್ಕೊರೆತದ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಮುಲ್ಕಿ ತಾಲೂಕಿನ ಬೆಳೆಹಾನಿ ಪ್ರದೇಶ ಹಾಗೂ ನದಿ ಪ್ರವಾಹ ಸ್ಥಳಗಳಿಗೆ ಸಿಎಂ ಭೇಟಿ ನೀಡಲಿದ್ದಾರೆ. ರಾತ್ರಿ ಸುಮಾರು 7.30ಕ್ಕೆ ಮಂಗಳೂರಿನಿಂದ ರಸ್ತೆ ಮಾರ್ಗವಾಗಿ ಉಡುಪಿಗೆ ತೆರಳುವರು.

ಜುಲೈ 13ರ ಬುಧವಾರ ಸಂಜೆ 6.30ಕ್ಕೆ ಉಡುಪಿಯಿಂದ ರಸ್ತೆ ಮಾರ್ಗವಾಗಿ ಹೊರಟು ರಾತ್ರಿ 7.30ಕ್ಕೆ ಮಂಗಳೂರಿನ ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು 7.45ಕ್ಕೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ನಾಳೆಯಿಂದ ಎರಡು ದಿನ ಮಳೆ ಹಾನಿ ಜಿಲ್ಲೆಗಳಿಗೆ ಸಿಎಂ ಭೇಟಿ.. ಪರಿಹಾರ ವಿತರಣೆಗೆ ನಿರ್ದೇಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.