ವರುಣಾರ್ಭಟ: ಸುಳ್ಯ ತಾಲೂಕಿನಲ್ಲಿ ಶಾಲೆಗಳಿಗೆ ರಜೆ, ಕಡಬದಲ್ಲಿ ಇಂದಿನ ಸ್ಥಿತಿಗತಿ ಮೇಲೆ ನಿರ್ಧಾರ

author img

By

Published : Aug 4, 2022, 7:45 AM IST

Heavy Rain in Karnataka  holiday announces for Sullia  Rain in dakshina kannada  ಕರ್ನಾಟಕದಲ್ಲಿ ಮಳೆ  ದಕ್ಷಿಣ ಕನ್ನಡದಲ್ಲಿ ಮಳೆ  ಸುಳ್ಯ ಶಾಲೆಗಳಿಗೆ ರಜೆ  ವರುಣಾರ್ಭಟ

ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಸುಳ್ಯದಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಸುಳ್ಯ (ದಕ್ಷಿಣ ಕನ್ನಡ): ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಲ್ಲಿ ಇಂದು ಶಾಲೆಗಳಿಗೆ ರಜೆ ನೀಡಲಾಗಿದೆ. ಕಡಬ ತಾಲೂಕಿನಲ್ಲಿ ಬೆಳಗಿನ ಸ್ಥಿತಿಗತಿ ನೋಡಿ ರಜೆ ನೀಡುವಂತೆ ಸ್ಥಳೀಯ ತಹಶೀಲ್ದಾರ್ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ.

ಸುಳ್ಯ ತಾಲೂಕಿನಾದ್ಯಂತ ರಾತ್ರಿ ಧಾರಾಕಾರ ಮಳೆಯಾಗುತ್ತಿದೆ. ಹಲವೆಡೆ ರಸ್ತೆ, ಸೇತುವೆಗಳು ಒಡೆದು ಭೂಕುಸಿತ ಉಂಟಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಗುರುವಾರ ರಜೆ ಘೋಷಿಸಲಾಗಿದೆ. ಆದರೆ ಕಡಬ ಮತ್ತು ಇತರೆ ತಾಲೂಕುಗಳಲ್ಲಿ ಅಗತ್ಯವಿದ್ದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸ್ಥಳೀಯ ತಹಶೀಲ್ದಾರರು ಸ್ಥಳೀಯವಾಗಿ ನಿರ್ಣಯ ಕೈಗೊಳ್ಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.

(ಇದನ್ನೂ ಓದಿ: ಸುಳ್ಯ: ಭಾರಿ ಮಳೆಗೆ ಗುಡ್ಡ ಕುಸಿತ, ನದಿ ದಡದಲ್ಲಿ ದೈತ್ಯ ಮೊಸಳೆ ಪ್ರತ್ಯಕ್ಷ)

ಕಳೆದ ಮೂರು ದಿನಗಳಿಂದ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಸುಬ್ರಹ್ಮಣ್ಯದ ಕುಮಾರಧಾರ ಪರ್ವತಮುಖಿಯಲ್ಲಿ ಮನೆ ಕುಸಿದು ಇಬ್ಬರು ಮೃತಪಟ್ಟಿದ್ದಾರೆ. ಹಾಗೆಯೇ ಭಟ್ಕಳದಲ್ಲಿ ನಾಲ್ವರು ಸಾವಿಗೀಡಾಗಿದ್ದಾರೆ. ಇನ್ನು ಹಲವು ಗ್ರಾಮಗಳು ಜಲಾವೃತವಾಗಿದ್ದು, ಅಪಾರ ನಷ್ಟ ಉಂಟಾಗಿದೆ.

ಹವಾಮಾನ ಇಲಾಖೆ ಬುಧವಾರದಿಂದ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಭಾರಿ ಮಳೆಯಿಂದ ಈಗಾಗಲೇ ಸಾಕಷ್ಟು ಹಾನಿಯುಂಟಾಗಿರುವ ಹಿನ್ನೆಲೆಯಲ್ಲಿ ಇನ್ನೂ ಮೂರು ದಿನಗಳ ಭಾರಿ ಮಳೆಯ ಮುನ್ನೆಚ್ಚರಿಕೆ ನೀಡಿರುವುದು ಆತಂಕ ಸೃಷ್ಟಿಸಿದೆ.

(ಇದನ್ನೂ ಓದಿ: ಸುಳ್ಯ: ಮುಸ್ಲಿಂ ಯುವಕನನ್ನು ನದಿಗೆ ಹಾರಿ ರಕ್ಷಿಸಿದ ಹಿಂದೂ ಯುವಕ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.