ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯೂರಿಟಿ ( BCAS) ಯ ಮಹಾನಿರ್ದೇಶಕ ಜೈದೀಪ್ ಪ್ರಸಾದ್ ಅವರು ಭದ್ರತೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ, ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಬಳಿಕ ಅವರು ಸಭೆ ನಡೆಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಅಧಿಕಾರಿ ನೀರವ್ ಶಾ ಅವರು ವಿಮಾನ ನಿಲ್ದಾಣದ ಉದ್ದೇಶ ಮತ್ತು ಧ್ಯೇಯಗಳ ಕುರಿತು ಸಮಗ್ರ ವಿವರಗಳನ್ನು ನೀಡಿದರು.
ಬಿಸಿಎಎಸ್ ಮಹಾನಿರ್ದೇಶಕ ಜೈದೀಪ್ ಪ್ರಸಾದ್ ಅವರು ಭದ್ರತೆಗೆ ಸಂಬಂಧಿಸಿದಂತೆ ಮೂಲಸೌಕರ್ಯಗಳನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಭದ್ರತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವಂತೆ ಮತ್ತು ತಾಂತ್ರಿಕ ವ್ಯವಸ್ಥೆ ಗಳನ್ನು ಗಮನದಲ್ಲಿಟ್ಟುಕೊಂಡು ನಿರ್ವಹಣೆ ಮಾಡುವಂತೆ ಸೂಚಿಸಿದರು.
ಬಿಸಿಎಎಸ್ ಕಾರ್ಗೋ, ಸೌಲಭ್ಯಗಳ ಭದ್ರತೆ ಮತ್ತು ಭವಿಷ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವಿಶೇಷ ನಿಗಾ ವಹಿಸುತ್ತದೆ. ವ್ಯಾಪಾರ ವಹಿವಾಟುಗಳನ್ನು ನಿಯಮಾನುಸಾರ ಸುಗಮವಾಗಿ ನಡೆಯುವಂತೆ ಭದ್ರತಾ ವ್ಯವಸ್ಥೆ ಅಳವಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ. ವಿಮಾನ ನಿಲ್ದಾಣಗಳಲ್ಲಿ ಸುರಕ್ಷತೆ ಹೆಚ್ಚಿಸಲು ಆದ್ಯತೆ ನೀಡುವುದಾಗಿ ಅವರು ಸಭೆಯಲ್ಲಿ ತಿಳಿಸಿದರು.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ