ETV Bharat / city

ಸಚಿವ ಕೋಟ, ಸುನಿಲ್ ಕುಮಾರ್ ರಾಜೀನಾಮೆ ನೀಡಲಿ: ಐವನ್ ಡಿಸೋಜ ಒತ್ತಾಯ

author img

By

Published : Jan 21, 2022, 1:34 PM IST

ನಾರಾಯಣ ಗುರುಗಳ ಟ್ಯಾಬ್ಲೋ ವಿಚಾರವಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸುನಿಲ್ ಕುಮಾರ್ ವಿರುದ್ಧ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ವಾಗ್ದಾಳಿ ನಡೆಸಿದ್ದಾರೆ.

iwan dsouza outrage on kota shinivas and sunil kumar
ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ

ಮಂಗಳೂರು ( ದಕ್ಷಿಣ ಕನ್ನಡ): ಕೇರಳ ಸರ್ಕಾರವು ರಚಿಸಿದ ನಾರಾಯಣ ಗುರುಗಳ ಟ್ಯಾಬ್ಲೋವನ್ನು ಗಣರಾಜ್ಯೋತ್ಸವ ಪರೆಡ್​ನಲ್ಲಿ ಪ್ರದರ್ಶನಕ್ಕೆ ಕೇಂದ್ರ ನಿರಾಕರಿಸಿರುವುದನ್ನು, ಸುಳ್ಳು ಹೇಳಿ ಸಮರ್ಥಿಸಿಕೊಳ್ಳುತ್ತಿರುವ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸುನಿಲ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ ಆಗ್ರಹಿಸಿದರು.

ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜ

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ನಾರಾಯಣ ಗುರುಗಳಿಗೆ ಅವಮಾನ ಮಾಡಿರುವುದು ಖಂಡನೀಯ. ಕರ್ನಾಟಕದ ಸಚಿವರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಸುನಿಲ್ ಕುಮಾರ್ ಅವರು ಮೂರು ವರ್ಷಕ್ಕೊಮ್ಮೆ ಪ್ರತಿ ರಾಜ್ಯಕ್ಕೆ ಅವಕಾಶ ಇದ್ದು, ಈ ವರ್ಷ ಕೇರಳಕ್ಕೆ ಇಲ್ಲ ಎಂದು ಸುಳ್ಳು ಹೇಳಿ ಕೇಂದ್ರವನ್ನು ಸಮರ್ಥಿಸಿದ್ದಾರೆ. ಕರ್ನಾಟಕದಲ್ಲಿ ಕಳೆದ 13 ವರ್ಷಗಳಿಂದ ಟ್ಯಾಬ್ಲೋ ಪ್ರದರ್ಶನಕ್ಕೆ ಅವಕಾಶ ಇದೆ.

ಆದರೂ ಈ ಸಚಿವರು ಸುಳ್ಳು ಹೇಳಿ ಸಮರ್ಥನೆಗಿಳಿದಿದ್ದಾರೆ. ಈ ಕಾರಣದಿಂದ ಅವರು ತಮ್ಮ ಸ್ಥಾನದಲ್ಲಿ ಮುಂದುವರಿಯಲು ಸೂಕ್ತರಲ್ಲ. ಕೂಡಲೇ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಪಿಎಸ್​ಐ ನೇಮಕಾತಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ರಚನಾ ಹನುಮಂತ

ಗಣರಾಜ್ಯೋತ್ಸವದ ದಿನ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನಿಂದ ನಾರಾಯಣ ಗುರುಗಳ ಟ್ಯಾಬ್ಲೋವನ್ನು ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರದರ್ಶನ ಮಾಡಿ ಗೌರವ ಸಲ್ಲಿಸಲಾಗುವುದು. ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೋವನ್ನು ಪ್ರತಿ ಜಿಲ್ಲೆಯಲ್ಲಿ ಪ್ರದರ್ಶನ ಮಾಡಲು ನಿರ್ಧರಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿರುವ ಸುನಿಲ್ ಕುಮಾರ್ ಅವರು ಪ್ರತಿ ಜಿಲ್ಲೆಯಲ್ಲಿ ನಾರಾಯಣ ಗುರುಗಳ ಟ್ಯಾಬ್ಲೋ ಮಾಡಿ ಅವರಿಗೆ ಗೌರವ ಸೂಚಿಸುವ ಆದೇಶ ಮಾಡಲಿ ಎಂದು ಆಗ್ರಹಿಸಿದರು.

ಶಿರಾಡಿ ಘಾಟ್ ಮುಚ್ಚುವುದಕ್ಕೆ ವಿರೋಧ:

ಶಿರಾಡಿ ಘಾಟ್​ನಲ್ಲಿ 10 ಕಿ.ಮೀ ರಸ್ತೆ ದುರಸ್ತಿಗೆ ಆರು ತಿಂಗಳು ಮುಚ್ಚಲು ಸರ್ಕಾರ ಚಿಂತನೆ ನಡೆಸುತ್ತಿರುವುದಕ್ಕೆ ನಮ್ಮ ವಿರೋಧವಿದೆ. ಶಿರಾಡಿ ಘಾಟ್ ಮುಚ್ಚಿದರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಮುಚ್ಚಿದಂತೆ. ಈ ರಸ್ತೆ ಬದಲಿಗೆ ಸುರಂಗ ಮಾರ್ಗ ನಿರ್ಮಿಸಲು ಪ್ರಸ್ತಾವನೆ ಇದ್ದರೂ ಅದರ ಬಗ್ಗೆ ಪ್ರಕ್ರಿಯೆ ನಡೆಯುತ್ತಿಲ್ಲ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ಸಭೆ ಸೇರಿ ಶಿರಾಡಿ ಘಾಟ್ ಮುಚ್ಚುವುದನ್ನು ವಿರೋಧಿಸಿ ಮತ್ತು ಸುರಂಗ ಮಾರ್ಗ ನಿರ್ಮಾಣಕ್ಕೆ ಆಗ್ರಹಿಸಿ ಕೇಂದ್ರವನ್ನು ಆಗ್ರಹಿಸಬೇಕು ಎಂದು ಒತ್ತಾಯಿಸಿದರು.

ಜಾಹಿರಾತು:-ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.