ಮಹಿಳಾ ಸಿಬ್ಬಂದಿಯೊಂದಿಗೆ ಸರ್ಕಾರಿ ಕಚೇರಿಯಲ್ಲೇ ನೋಡಲ್​ ಅಧಿಕಾರಿಯ ಚೆಲ್ಲಾಟ ಆರೋಪ: ಫೋಟೋ, ವಿಡಿಯೋ ವೈರಲ್

author img

By

Published : Nov 26, 2021, 10:18 AM IST

Updated : Nov 26, 2021, 12:06 PM IST

Nodal officer Sexual abuse with the female staff photos gone viral

ದ.ಕ ಜಿಲ್ಲೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ, ಆಯುಷ್ಮಾನ್ ನೋಡಲ್ ಆಫೀಸರ್ ಒಬ್ಬರು ಅವರು ಕಚೇರಿ ಮಹಿಳಾ ಸಿಬ್ಬಂದಿ ಜತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ವರದಿ ಆಗಿದೆ. ಕಚೇರಿಯ 9 ಮಹಿಳಾ ಸಿಬ್ಬಂದಿ ಜತೆಗೆ ಈ ಅಧಿಕಾರಿ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ.

ಮಂಗಳೂರು: ಮಂಗಳೂರಿನ ಆಯುಷ್ಮಾನ್ ನೋಡಲ್ ಅಧಿಕಾರಿಯೊಬ್ಬರು ಮಹಿಳಾ ಸಿಬ್ಬಂದಿಗಳೊಂದಿಗೆ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದೆ. ದ.ಕ ಜಿಲ್ಲೆಯ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ, ಆಯುಷ್ಮಾನ್ ನೋಡಲ್ ಆಫೀಸರ್, ಕಚೇರಿ ಮಹಿಳಾ ಸಿಬ್ಬಂದಿ ಜತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ವರದಿ ಆಗಿದೆ. ಕಚೇರಿಯ 9 ಮಹಿಳಾ ಸಿಬ್ಬಂದಿ ಜತೆಗೆ ಈ ಅಧಿಕಾರಿ ಚೆಲ್ಲಾಟವಾಡುತ್ತಿರುವ ಫೋಟೋ ಮತ್ತು ವಿಡಿಯೋ ವೈರಲ್ ಆಗಿದ್ದು, ರಾಜ್ಯಾದ್ಯಂತ ಸದ್ದು ಮಾಡುತ್ತಿದೆ.

Viral photo
ವೈರಲ್​ ವಿಡಿಯೋದ ಫೋಟೊ

ಇತರ ಸಿಬ್ಬಂದಿಗಳ ಸಮ್ಮುಖದಲ್ಲಿ ಮಹಿಳಾ ಸಿಬ್ಬಂದಿ ಜತೆಗೆ ಈ ಅಧಿಕಾರಿ ಅಸಭ್ಯ ವರ್ತನೆ ಮಾಡಿದ್ದಾರೆ. ಹಾಡಹಗಲೇ ಕಚೇರಿಯಲ್ಲಿ ಚೆಲ್ಲಾಟವಾಡುತ್ತಿರುವ ದೃಶ್ಯಗಳನ್ನು ಮೊಬೈಲ್​ನಲ್ಲಿ ಸೆರೆ ಹಿಡಿಯಲಾಗಿದೆ.

ಮಹಿಳಾ ಸಿಬ್ಬಂದಿಗಳ ಜತೆಗೆ ಚೆಲ್ಲಾಟವಾಡುತ್ತಿದ್ದ ಡಾ.ರತ್ನಾಕರ್ ಸಹಕರಿಸದ ಮಹಿಳಾ ಸಿಬ್ಬಂದಿಗಳಿಗೆ ಟಾರ್ಚರ್ ನೀಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಜತೆಗೆ ಮಹಿಳಾ ಸಿಬ್ಬಂದಿಯನ್ನು ಕರೆದುಕೊಂಡು ಟ್ರಿಪ್ ಕೂಡ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ.

Viral photo
ವೈರಲ್​ ವಿಡಿಯೋದ ಫೋಟೊ

ಇದನ್ನೂ ಓದಿ:ಧಾರವಾಡದ SDM ಮೆಡಿಕಲ್ ಕಾಲೇಜಿನ 116 ವಿದ್ಯಾರ್ಥಿಗಳಿಗೆ ಕೊರೊನಾ: ಒಟ್ಟು ಸೋಂಕಿತರ ಸಂಖ್ಯೆ 182ಕ್ಕೆ ಏರಿಕೆ

Last Updated :Nov 26, 2021, 12:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.