ETV Bharat / city

ಸಿಎಂ ಬಸವರಾಜ ಬೊಮ್ಮಾಯಿ ನಮ್ಮ ಬೇಡಿಕೆ ಈಡೇರಿಸುತ್ತಾರೆ: ಜಯಮೃತ್ಯುಂಜಯ ಸ್ವಾಮೀಜಿ

author img

By

Published : Aug 9, 2021, 10:48 PM IST

ಬದಲಾದ ಕಾಲಘಟ್ಟದಲ್ಲಿ ಸಿಎಂ ಬದಲಾಗಿದ್ದಾರೆ. ಪಂಚಮಸಾಲಿ, ಗೌಡ ಲಿಂಗಾಯತರಿಗೆ 2A ಮೀಸಲಾತಿ ಹೋರಾಟದ ಬೇಡಿಕೆಯನ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸುತ್ತಾರೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Cm Basavaraja Bommai fullfill our demands - jayamruthunjaya swamiji
ಸಿಎಂ ಬಸವರಾಜ ಬೊಮ್ಮಾಯಿ ನಮ್ಮ ಬೇಡಿಕೆ ಈಡೇರಿಸುತ್ತಾರೆ: ಜಯಮೃತ್ಯುಂಜಯ ಸ್ವಾಮೀಜಿ

ಮೈಸೂರು: ಪಂಚಮಸಾಲಿ ಹಾಗೂ ಗೌಡ ಲಿಂಗಾಯತರಿಗೆ 2A ಮೀಸಲಾತಿ ಹೋರಾಟದ ಬೇಡಿಕೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ಈಡೇರಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬೃಹತ್ ಸಮಾವೇಶ ನಡೆಸಿ ನಮ್ಮ ಹಕ್ಕೊತ್ತಾಯ ಮಂಡಿಸಿದ್ದೆವು. ಈ ಬಗ್ಗೆ ಅಧಿವೇಶನದಲ್ಲಿ ಅಂದು ಸಿಎಂ ಆಗಿದ್ದ ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು.

ಆದರೆ, ಬದಲಾದ ಕಾಲಘಟ್ಟದಲ್ಲಿ ಸಿಎಂ ಬದಲಾಗಿದ್ದಾರೆ. ಹಿಂದೆ ನಡೆಸಿದ್ದ ಸಮಾವೇಶಕ್ಕೆ ಸಹಕರಿಸಿದ್ದ ಬಸವರಾಜ ಬೊಮ್ಮಾಯಿ ಅವರು ಈಗ ಸಿಎಂ ಆಗಿದ್ದಾರೆ. ಹಾಗಾಗಿ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳನ್ನು ಮತ್ತೆ ನೆನಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಮೈಸೂರು ಭೂ ಹಗರಣ: ಶಾಸಕ ರಾಮ್​​ದಾಸ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೋರ್ಟ್​​ ಸೂಚನೆ

ಈ ಹಿಂದಿನ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಯಡಿಯೂರಪ್ಪ ಅವರ ಆಡಳಿತದಲ್ಲಿ ಗೃಹಸಚಿವರಾಗಿದ್ದ ಬೊಮ್ಮಾಯಿ ಈಗ ಸಿಎಂ ಆಗಿದ್ದಾರೆ. ಹಾಗಾಗಿ ಸಿಎಂ ಬೊಮ್ಮಾಯಿಯವರು ನಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ ಇದೆ ಎಂದು ಹೇಳಿದರು.

2ಎ ಮೀಸಲಾತಿ ಸಂಬಂಧ ಸೋಮವಾರ ಮೈಸೂರಿನಲ್ಲಿ ಸಭೆ ನಡೆಸಿದ್ದೇವೆ. ಆಗಸ್ಟ್ 26ರಿಂದ 30ರ ವರೆಗೆ ಬೃಹತ್‌ ಪಂಚಮಸಾಲಿ ಪ್ರತಿಜ್ಞಾ ಅಭಿಯಾನ ಆಯೋಜನೆ ಮಾಡಲಾಗುವುದು ಎಂದು ತಿಳಿಸಿದರು. ಮಲೆಮಹದೇಶ್ವರ ಬೆಟ್ಟದಿಂದ ಬೆಂಗಳೂರಿನ ವರೆಗೆ ಜಾಗೃತಿ ಅಭಿಯಾನ ನಡೆಯಲಿದೆ. ಅಕ್ಟೋಬರ್ 1ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ರಾಜ್ಯದ ಪ್ರತಿ ತಾಲೂಕಿನಲ್ಲಿ ಪಂಚಮಸಾಲಿ ಗೌಡ ಹಾಗೂ ದೀಕ್ಷಾ ಪಂಚಮಸಾಲಿ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನ ನಡೆದಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.