ETV Bharat / city

ಮೇಕೆದಾಟು ವಿಚಾರಕ್ಕಾಗಿ ಪಾದಯಾತ್ರೆ ಮಾಡ್ತಿವಿ: ಸರ್ಕಾರಕ್ಕೆ ಸಿದ್ದರಾಮಯ್ಯ ಎಚ್ಚರಿಕೆ

author img

By

Published : Nov 9, 2021, 1:17 PM IST

ಮೇಕೆದಾಟು ಯೋಜನೆಗೆ ನಮ್ಮ ಸರ್ಕಾರ ಇದ್ದಾಗ ಡಿಆರ್​ಪಿ ಮಾಡಿಸುವುದು ತಡವಾಗಿತ್ತು. ಆದ್ರೂ ನಾವು ಅದನ್ನ ಮಾಡಿ ಮುಗಿಸಿದ್ದೇವೆ. ಸದ್ಯ ಬಿಜೆಪಿ ಸರ್ಕಾರ ಕಾಮಗಾಗಿ ಆರಂಭಿಸಲು ತಡಮಾಡುತ್ತಿದೆ. ಕೇಂದ್ರದಿಂದ ಒಪ್ಪಿಗೆ ಪಡೆದು ತುರ್ತಾಗಿ ಯೋಜನೆ ಆರಂಭಿಸಬೇಕು, ಇಲ್ಲವಾದರೆ ಪಾದಯಾತ್ರೆ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.

congress-padayatra-to-implement-mekedatu-scheme
ಸಿದ್ದರಾಮಯ್ಯ

ಮೈಸೂರು: ಮೇಕೆದಾಟು ಯೋಜನೆಗೆ ಕೇಂದ್ರದಿಂದ ಒಪ್ಪಿಗೆ ಪಡೆದು ತುರ್ತಾಗಿ ಯೋಜನೆ ಆರಂಭಿಸಬೇಕು, ಇಲ್ಲವಾದರೆ ಪಾದಯಾತ್ರೆ ಮಾಡಬೇಕಾಗುತ್ತದೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.

ಮೇಕೆದಾಟು ವಿಚಾರದಲ್ಲಿ ಕಾಂಗ್ರೆಸ್ ಪಾದಯಾತ್ರೆ ವಿಚಾರವಾಗಿ ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಗ‌ ಡಿಪಿಆರ್ ಮಾಡುವುದು ತಡವಾಗಿತ್ತು. ಆದರೂ‌ ನಾವು ಡಿಪಿಆರ್ ಮಾಡಿ ಮುಗಿಸಿದ್ದೇವೆ. ಈಗ ಇವರು ಕಾಮಗಾರಿ ಆರಂಭಿಸಲು ವಿಳಂಬ ಮಾಡುತ್ತಿದ್ದಾರೆ. ಕಾಂಗ್ರೆಸ್​ನವರು ತಡವಾಗಿ ಡಿಪಿಆರ್ ಮಾಡಿದ್ದಾರೆ ಎಂಬ ಸಿಎಂ ಹೇಳಿಕೆಯಲ್ಲಿ ಅರ್ಥ ಇಲ್ಲ ಎಂದು ಕುಟುಕಿದರು.

ಮೇಕೆದಾಟು ವಿಚಾರಕ್ಕಾಗಿ ಪಾದಯಾತ್ರೆ ಮಾಡುವುದಾಗಿ ಸಿದ್ದರಾಮಯ್ಯ ಹೇಳಿಕೆ

ನಾವು ಈಗ ಕಾಮಗಾರಿ ಆರಂಭಿಸಿ ಎಂದು ಕೇಳುತ್ತಿದ್ದೇವೆ. ಸರ್ಕಾರ ಯಾಕೆ ವಿಳಂಬ ಮಾಡುತ್ತಿದೆ. ಒತ್ತಡ ಹೇರಲೇಬೇಕಾದ ಸನ್ನಿವೇಶದಲ್ಲಿದ್ದೇವೆ, ಹಾಗಾಗಿ ಒತ್ತಡ ಹೇರಿದ್ದೇವೆ. ಸರ್ಕಾರದ ಮೇಲೆ ಒತ್ತಡ ಹೇರದಿದ್ದರೆ ಇವರು ಕೆಲಸ ಆರಂಭಿಸುವುದಿಲ್ಲ. ಕೋರ್ಟ್ ಅಡ್ಡಿ, ಅದು ಇದು ಎಂದು ಸುಳ್ಳು ಹೇಳ್ತಾರೆ ಎಂದರು.

ನನ್ನ ಬಳಿಯೇ ಸಾಕ್ಷಿ ಕೇಳ್ತಾರೆ: ರಾಜ್ಯದಲ್ಲಿ ಸದ್ದು ಮಾಡ್ತಿರುವ ಬಿಟ್ ಕಾಯಿನ್ ವಿಚಾರವಾಗಿ ಮಾತನಾಡಿ, ಬಿಟ್ ಕಾಯಿನ್ ವಿಚಾರದಲ್ಲಿ ಆಡಳಿತ- ವಿರೋಧ ಪಕ್ಷದವರು ಯಾರೇ ಇರಲಿ. ನೀವೂ ಮೊದಲು ತನಿಖೆ ಆರಂಭಿಸಿ. ಚುರುಕಾಗಿ ಯಾಕೆ ತನಿಖೆ ಆರಂಭಿಸುತ್ತಿಲ್ಲ. ನನ್ನ ಬಳಿಯೇ ಸರ್ಕಾರ ಸಾಕ್ಷಿ ಕೇಳುತ್ತಿದೆ. ಅದರ ಸಾಕ್ಷಿ ಹುಡುಕಬೇಕಾದವರು, ತನಿಖೆ ಮಾಡಬೇಕಾದವರು ತನಿಖಾಧಿಕಾರಿಗಳು. ಆ ಕೆಲಸವನ್ನು ಸರ್ಕಾರ ಮಾಡಿಸಲಿ. ನನ್ನ ಬಳಿ ಇರುವ ಮಾಹಿತಿಯನ್ನು ಅಗತ್ಯವಿದ್ದರೆ ಕೋರ್ಟ್‌ಗೆ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ರು.

ಈ ಬಾರಿಯ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಸಲು ಇನ್ನು ಸಾಕ್ಷಿಗಳು ಬೇಕಿವೆ. ನಾನು ಸಾಕ್ಷಿಗಳ ಸಂಗ್ರಹದಲ್ಲಿ ಇದ್ದೇನೆ. ನಾನು ನನ್ನ ಬಳಿ ಇರುವ ವಿಚಾರವನ್ನ ಹಂಚಿಕೊಳ್ಳುತ್ತಿದ್ದೇನೆ ಅಷ್ಟೇ ಎಂದರು.

ಜಿಟಿಡಿ- ಸಿದ್ದು ಒಂದೇ ವೇದಿಕೆಯಲ್ಲಿ: ಶಾಸಕ ಜಿಟಿ ದೇವೇಗೌಡ ಹಾಗೂ ಸಿದ್ದರಾಮಯ್ಯ ಒಂದೇ ವೇದಿಕೆಯಲ್ಲಿ ಭಾಗಿ ವಿಚಾರ ಮಾತನಾಡಿ, ನಾವು ಯಾಕೆ ಒಂದೇ ವೇದಿಕೆಯಲ್ಲಿ ಬರಬಾರದ? ಅವರು ಕಾಂಗ್ರೆಸ್ ಸೇರುತ್ತಾರೆ, ಬಿಡುತ್ತಾರೆ ಅದು ಬೇರೆ ವಿಚಾರ. ಗುಬ್ಬಿ ಶಾಸಕ ಶ್ರೀನಿವಾಸ್‌ಗೆ ಅನೌಪಚಾರಿಕವಾಗಿ ಪಕ್ಷಕ್ಕೆ ಆಹ್ವಾನಿಸಿದ್ದೆ. ಅದನ್ನು ಇದನ್ನು ನೀವು ಹೋಲಿಸಬೇಡಿ ಎಂದು ಸಿದ್ದರಾಮಯ್ಯ ಹೇಳಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.